ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲ್ಕತ್ತಾದಲ್ಲಿ ರೋಡ್ ಶೋ ವೇಳೆ ಹಿಂಸಾಚಾರ : ಬಿಜೆಪಿ ದೂರು

|
Google Oneindia Kannada News

ನವದೆಹಲಿ, ಮೇ 14 : ಕೋಲ್ಕತ್ತಾದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಹಿಂಸಾಚಾರದ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ಹಿಂಸಾಚಾರದ ಕುರಿತು ದೂರು ನೀಡಿದೆ. ಸೂಕ್ತ ಕ್ರಮಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಅಮಿತ್ ಶಾ ರೋಡ್ ಶೋ: ಹಿಂಸಾಚಾರ, ಕೋಲ್ಕತ್ತಾದಲ್ಲಿ ಘರ್ಷಣೆ, ಕಲ್ಲು ತೂರಾಟಅಮಿತ್ ಶಾ ರೋಡ್ ಶೋ: ಹಿಂಸಾಚಾರ, ಕೋಲ್ಕತ್ತಾದಲ್ಲಿ ಘರ್ಷಣೆ, ಕಲ್ಲು ತೂರಾಟ

ಮಂಗಳವಾರ ಅಮಿತ್ ಶಾ ರೋಡ್ ಶೋ ನಡೆಸುವಾಗ ಶ್ರೀರಾಮ, ಹನುಮ, ಸೀತೆಯ ವೇಷಧಾರಿಗಳಾಗಿದ್ದ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿ ಸಾಗುತ್ತಿದ್ದರು. ಆಗ ದುಷ್ಕರ್ಮಿಗಳು ಕಡ್ಡಿಗಳನ್ನು ಎಸೆದರು. ಇದರಿಂದಾಗಿ ಕಾರ್ಯಕರ್ತರ ನಡುವೆ ಕಲಹ ಆರಂಭವಾಯಿತು.

ಬಿಜೆಪಿ ಎಂದಿಗೂ ಮೋದಿ, ಅಮಿತ್ ಶಾ ಪಕ್ಷ ಆಗಲಾರದು : ನಿತಿನ್ ಗಡ್ಕರಿಬಿಜೆಪಿ ಎಂದಿಗೂ ಮೋದಿ, ಅಮಿತ್ ಶಾ ಪಕ್ಷ ಆಗಲಾರದು : ನಿತಿನ್ ಗಡ್ಕರಿ

Clash in Amit Shah roadshow Kolkata : BJP complaint Election Commission

ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೆ, ಕಲ್ಲು ತೂರಾಟ ನಡೆಸಲಾಯಿತು, ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಗೋ ಬ್ಯಾಕ್ ಅಮಿತ್ ಶಾ ಎಂಬ ಪೋಸ್ಟರ್ ಹಿಡಿದು ಕೆಲವು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.

ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ ಹಿಂಸಾಚಾರ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ. ಕೇಂದ್ರ ರಕ್ಷಣಾ ಪಡೆಗಳನ್ನು ರಾಜ್ಯದಲ್ಲಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

English summary
BJP delegation lead by Defence Minister Nirmala Sitharaman, Union Minister Mukhtar Abbas Naqvi and others complaint to Election Commission Of India over clashes at party president Amit Shah roadshow in Kolkata.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X