ಗ್ರೇಟರ್ ನೋಯ್ಡಾ: ಕಾರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಗ್ರೇಟರ್ ನೋಯ್ಡಾ, ಏಪ್ರಿಲ್ 24: ಹನ್ನೊಂದನೇ ತರಗತಿ ಓದುತ್ತಿದ್ದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿ ಬಳಿಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಏಪ್ರಿಲ್ 18 ರಂದು ತರಗತಿ ಮುಗಿಸಿಕೊಂಡು ಯುವತಿ ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಆಕೆಯನ್ನು ಅಪಹರಿಸಿ, ಕಾರಿನಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಗಾಲ್ಗೋಟಿಯಾ ಕಾಲೇಜಿನ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವತಿಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವೈದ್ಯಕೀಯ ಪರೀಕ್ಷೆಯ ನಂತರ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಸಾಬೀತಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಅತ್ಯಾಚಾರಕ್ಕೆ ಕಠಿಣ ಶಿಕ್ಷೆ ವಿಧಿಸುವ ಕಾಯ್ದೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಜಾರಿಗೆ ತಂದಿದೆ. 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರವಾದರೆ ಅಂಥ ಪ್ರಕರಣಗಳಿಗೆ ಗಲ್ಲು ಶಿಕ್ಷೆ, ಮತ್ತು 16 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರವಾದರೆ ಅಂಥ ಪ್ರಕರಣಗಳಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ನೀಡುವ ಕಾನೂನನ್ನು ಜಾರಿಗೊಳಿಸಲಾಗಿದೆ.












Click it and Unblock the Notifications