ಶಾಲಾ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಸೀನಿಯರ್ಸ್: ವಿಡಿಯೋ ವೈರಲ್ ಆಗುತ್ತಿದ್ದಂತೆ 6 ವಿದ್ಯಾರ್ಥಿಗಳು ಅಮಾನತು

ಶಿಮ್ಲಾ: ಹಿಮಾಚಲ ಪ್ರದೇಶದ ಪ್ರತಿಷ್ಠಿತ ವಸತಿ ಶಾಲೆಯೊಂದರಲ್ಲಿ ಕಿರಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೊದಲ್ಲಿರುವ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿ ಬಾಲಕನನ್ನ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಥಳಿಸಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಈ ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಆಡಳಿತ ಮಂಡಳಿ, ತಕ್ಷಣವೇ ಆರು ಮಂದಿ ಹಿರಿಯ ವಿದ್ಯಾರ್ಥಿಗಳನ್ನ 15 ದಿನಗಳ ಕಾಲ ಅಮಾನತುಗೊಳಿಸಿ ಆದೇಶಿಸಿದೆ.

Class 9 Boy Thrashed By Seniors At Himachal Pradesh School 6 Students Suspended As Video Goes Viral

ಹಿಮಾಚಲ ಪ್ರದೇಶ ಶಾಲಾ ರ‍್ಯಾಗಿಂಗ್ ವಿಡಿಯೋ ವೈರಲ್!

ಮೂಲಗಳ ಪ್ರಕಾರ, ಈ ಹಲ್ಲೆ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಡೆದಿದೆ ಎನ್ನಲಾಗಿದ್ದು, ಇದರ ವಿಡಿಯೋ ಗುರುವಾರ (ನವೆಂಬರ್ 26) ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದೆ. ವೈರಲ್ ಆಗಿರುವ ಈ ರ‍್ಯಾಗಿಂಗ್ ವಿಡಿಯೋದಲ್ಲಿ ಐದಾರು ಮಂದಿ ಹಿರಿಯ ವಿದ್ಯಾರ್ಥಿಗಳು ಸೇರಿ 9ನೇ ತರಗತಿ ಬಾಲಕನಿಗೆ ಕಾಲಿನಿಂದ ಒದ್ದು, ಕೈಯಿಂದ ಗುದ್ದುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಬಾಲಕನನ್ನ ಮೊದಲು ಹಾಸಿಗೆಯ ಮೇಲೆ ದೂಡಿ, ನಂತರ ನೆಲಕ್ಕೆಸೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಕೆಲವು ದಿನಗಳ ಹಿಂದೆ ಸಂತ್ರಸ್ತ ಬಾಲಕನಿಗೆ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಗಿತ್ತು ಎನ್ನಲಾಗಿದ್ದು, ಈ ಹಲ್ಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಗಣತಿ ಕಾರ್ಯಗಳಿಗೆ ಶಿಕ್ಷಕರ ನಿಯೋಜನೆಗೆ ಬ್ರೇಕ್? ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮಧು ಬಂಗಾರಪ್ಪ
ಗಣತಿ ಕಾರ್ಯಗಳಿಗೆ ಶಿಕ್ಷಕರ ನಿಯೋಜನೆಗೆ ಬ್ರೇಕ್? ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮಧು ಬಂಗಾರಪ್ಪ

ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್: 6 ವಿದ್ಯಾರ್ಥಿಗಳ ಅಮಾನತು ಹಾಗೂ ಸಿಬ್ಬಂದಿ ವಿರುದ್ಧ ತನಿಖೆ

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಜಿಲ್ಲಾಡಳಿತ ಚುರುಕಾಗಿ ಕ್ರಮ ಕೈಗೊಂಡಿದೆ. 6 ವಿದ್ಯಾರ್ಥಿಗಳ ಅಮಾನತು ಕ್ರಮದ ಜೊತೆಗೆ, ಶಾಲೆಯ ಪ್ರಾಂಶುಪಾಲರಿಗೆ ಜಿಲ್ಲಾಡಳಿತವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಕಿನ್ನೌರ್ ಜಿಲ್ಲಾಧಿಕಾರಿ ಸೋನಾಕ್ಷಿ ತೋಮರ್ ತಿಳಿಸಿದ್ದಾರೆ.

ಘಟನೆ ನಡೆದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಹಾಸ್ಟೆಲ್ ವಾರ್ಡನ್‌ಗಳ ಪಾತ್ರ ಹಾಗೂ ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಲಾಗುತ್ತಿದೆ. ಶಿಕ್ಷಣ ಇಲಾಖೆ ಮತ್ತು ಮಕ್ಕಳ ಕಲ್ಯಾಣ ಸಮಿತಿ ತಂಡಗಳು ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಸಂತ್ರಸ್ತ ವಿದ್ಯಾರ್ಥಿ ಹಾಗೂ ಆತನ ಪೋಷಕರಿಗೆ ಕೌನ್ಸೆಲಿಂಗ್ ನೀಡಲಾಗುತ್ತಿದೆ.

ಜವಾಹರ್ ನವೋದಯ ವಿದ್ಯಾಲಯವು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವುದರಿಂದ, ಸಿಡಬ್ಲ್ಯೂಸಿ ನೀಡುವ ಸಮಗ್ರ ವರದಿಯನ್ನು ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಉನ್ನತ ಅಧಿಕಾರಿಗಳಿಗೆ ಸಲ್ಲಿಸಿ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ SSP ID ಕಡ್ಡಾಯ: ಸರ್ಕಾರದ ಸೌಲಭ್ಯ, ಸ್ಕಾಲರ್‌ಶಿಪ್‌ಗೆ ಹೊಸ ನಿಯಮ, ಐಡಿ ಪಡೆಯುವುದು ಹೇಗೆ?
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ SSP ID ಕಡ್ಡಾಯ: ಸರ್ಕಾರದ ಸೌಲಭ್ಯ, ಸ್ಕಾಲರ್‌ಶಿಪ್‌ಗೆ ಹೊಸ ನಿಯಮ, ಐಡಿ ಪಡೆಯುವುದು ಹೇಗೆ?

ಕ್ಯಾಂಪಸ್‌ನಲ್ಲಿ ಮೊಬೈಲ್ ಬಳಕೆ: ಪೊಲೀಸರು ಹೇಳಿದ್ದೇನು?

ಈ ಘಟನೆಯು ಶಾಲೆಯಲ್ಲಿನ ಗಂಭೀರ ಭದ್ರತಾ ಲೋಪವನ್ನ ಬಯಲಿಗೆಳೆದಿದೆ. ವಸತಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಸಲು ಅವಕಾಶ ಸಿಕ್ಕಿದ್ದು ಹೇಗೆ ಹಾಗೂ ವಿದ್ಯಾರ್ಥಿಗಳು ಅನುಮತಿಯಿಲ್ಲದೆ ಕ್ಯಾಂಪಸ್‌ನಿಂದ ಹೊರಗೆ ಹೋಗುತ್ತಿರುವಂತಹ ಇತರ ಅಕ್ರಮಗಳ ಕುರಿತೂ ಜಿಲ್ಲಾಡಳಿತ ತನಿಖೆ ನಡೆಸುತ್ತಿದೆ.

ಇನ್ನು ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಶರ್ಮಾ, "ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಅಪ್ರಾಪ್ತರಾಗಿರುವುದರಿಂದ ತನಿಖಾ ಸಮಿತಿಯ ವರದಿಗಾಗಿ ಕಾಯುತ್ತಿದ್ದೇವೆ, ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+