Breaking; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟ, 6 ಜನರು ನಾಪತ್ತೆ
ಶಿಮ್ಲಾ, ಜುಲೈ 06; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟವಾಗಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ.
ರಾಜ್ಯದ ಶಿಮ್ಲಾ, ಮಣಿಕರನ್ ಮುಂತಾದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಮುಂಜಾನೆಯಿಂದ ಹಲವು ಪ್ರದೇಶಗಳಲ್ಲಿ ಮಳೆ ಬಿರುಸಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ಪರಿಹಾರ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವಿಡಿಯೋ; ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ
#WATCH | Himachal Pradesh: Flash flood hits Manikaran valley of Kullu district due to heavy rainfall, dozens of houses and camping sites damaged in Choj village: SP Kullu Gurdev Sharma pic.twitter.com/NQhq8o8JXC
— ANI (@ANI) July 6, 2022
ಶಿಮ್ಲಾದಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದೆ. ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮಂಗಳವಾರ ರಾತ್ರಿಯಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಚೋಗ್ ಎಂಬ ಪ್ರದೇಶದಲ್ಲಿ ನಾಲ್ವರು ಜಾನುವಾರುಗಳ ಸಮೇತ ಕೊಚ್ಚಿ ಹೋಗಿದ್ದಾರೆ. ವಿದ್ಯುತ್ ಘಟಕವೊಂದರ ಕಾಮಗಾರಿಯಲ್ಲಿ ತೊಡಗಿರುವ 25-30 ಕಾರ್ಮಿಕರು ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಮಣಿಕರಣ್ ಪ್ರದೇಶದಲ್ಲಿ ಅತಿ ಹೆಚ್ಚಿನ ರಭಸದಲ್ಲಿ ನೀರು ಹರಿಯುತ್ತಿದೆ. ಶಿಮ್ಲಾದಲ್ಲಿ ಮಳೆಯ ಕಾರಣ ಭೂ ಕುಸಿತ ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ. ಈ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಲ್ಲು ಜಿಲ್ಲೆಯ ಎಸ್ಪಿ ಗುರುದೇವ್ ಶರ್ಮಾ ಮಾತನಾಡಿ, "ನಾಪತ್ತೆಯಾಗಿರುವ ಜನರಿಗಾಗಿ ಶೋಧ ಆರಂಭವಾಗಿದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ" ಎಂದು ಹೇಳಿದ್ದಾರೆ.
ಪ್ರವಾಹದಿಂದ ಇದುವರೆಗೂ 7 ಮನೆಗಳಿಗೆ ಹಾನಿಯಾಗಿದೆ. ಮೂರು ರಸ್ತೆ ಯೋಜನೆಗಳ ಕಾಮಗಾರಿಗೆ ಸಹ ಅಡಚಣೆ ಉಂಟಾಗಿದೆ. ಡ್ಯಾಂಗಳಿಂದ ಯಾವುದೇ ಸಂದರ್ಭದಲ್ಲಿ ನೀರು ಹೊರಬಿಡಲಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications