ಕರ್ನಾಟಕ, ದೆಹಲಿಯಲ್ಲಿ ಮೋಡ ಕವಿದ ವಾತಾವರಣ: ಲಘು ಮಳೆ ಮುನ್ಸೂಚನೆ!
ಕರ್ನಾಟಕ, ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ರಾಜ್ಯದ ಹಲವೆಡೆ ಇಂದು ಹಗುರದಿಂಧ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶದಲ್ಲಿ ಸಾಧಾರಣ ಮಳೆಯಾಘುವ ಸಾಧ್ಯತೆ ಇದೆ. ರಾಜ್ಯಾದ್ಯಾಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆಗಳಿವೆ. ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಸುಂಟಿಕೊಪ್ಪ, ಕೊಪ್ಪ, ಮಡಿಕೇರಿಯಲ್ಲೂ ಮಳೆಯಾಗಿದೆ.
ದೆಹಲಿಯಲ್ಲಿ ಜನವರಿ 29 ರಂದು ಲಘು ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ. ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ. ಹೊಸ ಪಾಶ್ಚಿಮಾತ್ಯ ಅಡಚಣೆಯು ಜನವರಿ 29 ರಂದು ಲಘು ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಯ ಅಂಕಿಅಂಶಗಳ ಪ್ರಕಾರ, ರಾತ್ರಿ 7 ಗಂಟೆಗೆ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 297 (ಕಳಪೆ ವರ್ಗ) ರಷ್ಟಿದೆ. ಸೊನ್ನೆ ಮತ್ತು 50 ರ ನಡುವಿನ AQI ಅನ್ನು 'ಒಳ್ಳೆಯದು', 51 ಮತ್ತು 100 'ತೃಪ್ತಿದಾಯಕ', 101 ಮತ್ತು 200 'ಮಧ್ಯಮ', 201 ಮತ್ತು 300 'ಕಳಪೆ', 301 ಮತ್ತು 400 'ಅತ್ಯಂತ ಕಳಪೆ' ಮತ್ತು 401 ಮತ್ತು 500 'ತೀವ್ರ' ಎಂದು ಪರಿಗಣಿಸಲಾಗುತ್ತದೆ.

ಸುದ್ದಿ ಸಂಸ್ಥೆ ಪಿಟಿಐಗೆ ವಿವರಗಳನ್ನು ನೀಡಿದ ಸ್ಕೈಮೆಟ್ ವೆದರ್ ಸರ್ವಿಸಸ್‌ನ ಮಹೇಶ್ ಪಲಾವತ್ ಅವರ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಬಹುದು.
"ಇಂದಿನ ಗರಿಷ್ಠ ತಾಪಮಾನವು ಸುಮಾರು 4 ಡಿಗ್ರಿಗಳಷ್ಟು ಕಡಿಮೆಯಾಗಿದೆ. ಜನವರಿ 25 ರಂದು ಗರಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಇಂದು ಅದು 17.3 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ. ಕನಿಷ್ಠ ತಾಪಮಾನ 12.8 ಆಗಿತ್ತು. ಇನ್ನೆರಡು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ'' ಎಂದು ಹೇಳಿದರು.

ಮೋಡಗಳು ಹಗಲಿನಲ್ಲಿ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತವೆ. ರಾತ್ರಿಯ ತಾಪಮಾನವನ್ನು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಮೋಡ ಕವಿದ ವಾತಾವರಣವು ಸೂರ್ಯನಿಗೆ ಅಡ್ಡಿಯಾಗುವುದರಿಂದ ಹಗಲಿನ ತಾಪಮಾನವನ್ನು ಕಡಿಮೆ ಮಾಡುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications