ಅಗತ್ಯವಿದ್ದರೆ ಛತ್ತೀಸಗಢದಲ್ಲೂ ಬಜರಂಗದಳ ನಿಷೇಧ; ಸಿಎಂ ಭೂಪೇಶ್ ಬಘೇಲ್
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಎಲ್ಲ ಮೂರೂ ಪಕ್ಷಗಳು ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿವೆ.
ಮೇ 2ರಂದು ಬಿಡುಗಡೆಯಾದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಿಎಫ್ಐ ಮತ್ತು ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ತಿಳಿಸಿದ್ದಾರೆ, ಇದಕ್ಕೆ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಿ ವಿವಾದವನ್ನು ಮೈಮೇಲೆಳೆದುಕೊಂಡಿದೆ. ಇದೇ ಸಂದರ್ಭದಲ್ಲಿ ಬಜರಂಗದಳ ಸಂಘಟನೆ ಕುರಿತು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಛತ್ತೀಸಗಢ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ.
ಛತ್ತೀಸಗಢದಲ್ಲಿ ಬಜರಂಗದಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ರಾಜ್ಯದಲ್ಲಿಯೂ ಬಜರಂಗದಳ ಸಂಘಟನೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
"ಎರಡು ರಾಜ್ಯಗಳ ಪರಿಸ್ಥಿತಿಗಳು ವಿಭಿನ್ನವಾಗಿರುವ ಕಾರಣ ಕರ್ನಾಟದಲ್ಲಿ ತೆಗೆದುಕೊಂಡ ನಿರ್ಧಾರಗಳು ಛತ್ತೀಸಗಢಕ್ಕೆ ಅನ್ವಯಿಸುವುದಿಲ್ಲ. ಈ ಹಿಂದೆ ಬಜರಂಗಿಗಳು ಛತ್ತೀಸ್‌ಗಢದಲ್ಲಿ ಕೆಲವು ಗೊಂದಲಗಳನ್ನು ಸೃಷ್ಟಿಸಿದ್ದರು. ಅವೆಲ್ಲವನ್ನೂ ನಾವು ಸರಿಪಡಿಸಿದ್ದೇವೆ," ಸಿಎಂ ಭೂಪೇಶ್ ಬಘೇಲ್ ಎಂದರು.

"ಕರ್ನಾಟಕ ಕಾಂಗ್ರೆಸ್‌ನ ನಿರ್ಧಾರಗಳನ್ನು ಛತ್ತೀಸಗಢಕ್ಕೂ ಅನ್ವಯಿಸುವ ಅಗತ್ಯವಿಲ್ಲ. ಒಂದು ವೇಳೆ ಅಗತ್ಯಬಿದ್ದರೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ನಾಯಕರು ಮತ್ತು ಪಕ್ಷದ ಪದಾಧಿಕಾರಿಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಗೊಳ್ಳುತ್ತಾರೆ," ಎಂದು ಛತ್ತೀಸಗಢ ಸಿಎಂ ಭೂಪೇಶ್ ಬಘೇಲ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸಗಢ ಕಾಂಗ್ರೆಸ್ ಸರ್ಕಾರದ ಹೇಳಿಕೆಗೆ ಅಲ್ಲಿನ ಬಜರಂಗದಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಮೊದಲು ರಾಮ ಜನ್ಮಭೂಮಿ. ನಂತರ ರಾಮಸೇತು ಪುರಾವೆ ಕೇಳಿದರು. ಈಗ ಅವರು ಬಜರಂಗದಳವನ್ನು ಪ್ರಶ್ನಿಸುತ್ತಿದ್ದಾರೆ. ಛತ್ತೀಸಗಢದ ಜನರು ಇದನ್ನು ಸಹಿಸುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುತ್ತಾರೆ," ಎಂದು ಹಿರಿಯ ಬಿಜೆಪಿ ನಾಯಕ ಬ್ರಿಜ್‌ಮೋಹನ್ ಅಗರ್ವಾಲ್ ಆಕ್ರೋಶ ಹೊರಹಾಕಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.

ಬಿಜೆಪಿಯವರಿಗೆ ಗಾಬರಿ ಆಗಿದೆ; ಡಿಕೆ ಶಿವಕುಮಾರ್
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಮಾಡಿದ್ದನ್ನು ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, "ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ? ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತ ಹೆಸರು ಇಟ್ಟುಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ. ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ," ಎಂದು ಆರೋಪಿಸಿದರು.
"ಬಿಜೆಪಿಯವರು ಒಂದಾದರೂ ಆಂಜನೇಯ ದೇಗುಲ ಕಟ್ಟಿದ್ದಾರಾ? ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು. ಆಂಜನೇಯ ದೇಗುಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ," ಎಂದು ತಿಳಿಸಿದರು.
ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications