ಮೇಕೆದಾಟು ಯೋಜನೆ ಬಗ್ಗೆ ಪ್ರಧಾನಿ ಮೋದಿ ಬಳಿ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ

ಸಚಿವರ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಕುರಿತ ಬಗ್ಗೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ಚರ್ಚಿಸಿದ ವಿಚಾರಗಳ ಬಗ್ಗೆ ಮನವಿ ಮಾಡಿದ್ದಾರೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9,000 ಕೋಟಿ ರೂಪಾಯಿ ವೆಚ್ಚದ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು, ಆಸಕ್ತಿ ವಹಿಸಿ ಅನುಮತಿ ಕೊಡಿಸಲು ಮನವಿ ಮಾಡಿದ್ದಾರೆ.

CM Siddaramaiah Meets PM Narendra Modi to Discuss Mekedatu

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್ 2023-2024 ರಲ್ಲಿ ಘೋಷಿಸಿದಂತೆ 5,300 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಸುರಂಗ ಮಾರ್ಗಕ್ಕೆ ಅನುದಾನ ನೀಡಲು ಮನವಿ

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿಮೀ ಸುರಂಗ ಮಾರ್ಗಕ್ಕೆ 3,000 ಕೋಟಿ ವೆಚ್ಚವಾಗಲಿದ್ದು. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7ನ್ನು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್‌ಹೆಚ್ಎಐಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಳನ್ನು ರೂ.15,611 ಕೋಟಿ ವೆಚ್ಚದ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದ್ದು ಶೀಘ್ರದಲ್ಲೇ ಕೊಡಿಸಲು ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಪ್ರಧಾನಿ ಕೋರಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಫೆರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಕೂಡ ಮನವಿ ಪತ್ರದಲ್ಲಿ ಕೇಳಲಾಗಿದೆ. ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ಅನುದಾನ ಕೊಡಲು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+