Siddaramaiah To Meet Amit Shah: ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ; ಗೃಹ ಸಚಿವರ ಮುಂದೆ ಇಟ್ಟ 9 ಬೇಡಿಕೆಗಳೇನು?
ನವದೆಹಲಿ, ಜೂನ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಅಮಿತ್ ಶಾ ಭೇಟಿಯ ವೇಳೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮುಂದೆ 9 ಬೇಡಿಗಳನ್ನ ಇಟ್ಟಿದ್ದಾರೆ. ಅಂದಾಜು 3 ಸಾವಿರ ಕೋಟಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.
ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.
ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಷಾ ಅವರನ್ನು ಕೋರಲಾಯಿತು.
ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
First Rail: ದಶಕ ಪೂರೈಸಿದ ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲು; ಅದರ ಸಂಚಾರ ವೇಗ, ಮಾರ್ಗದ ವಿವರ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು











Click it and Unblock the Notifications