ಅರವಿಂದ್ ಕೇಜ್ರಿವಾಲ್ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಸತ್ಯವೇ ಗೆಲ್ಲುವುದು ಎಂದ ಸಿದ್ದರಾಮಯ್ಯ
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಅ ವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.

ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತು: ಭೋಗೇಶ್ ಸೋಲಾಪುರ್
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕೆಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆಯೆಂದು ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿಯೆಂದು ನಿರೂಪಿಸಬೇಕು. ಸಂಶಯಾತೀತವಾಗಿ ಕೆಲಸ ಮಾಡಬೇಕೆಂದು ಹೇಳಿದೆ. ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ ಎಂದರು.
ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನ ಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ @ArvindKejriwal ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.
— Siddaramaiah (@siddaramaiah) September 13, 2024
ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ…












Click it and Unblock the Notifications