Siddaramaiah Meet PM Modi: ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ; ಭೇಟಿಗೆ ಕಾರಣವೇನು?
ನವದೆಹಲಿ, ಆಗಸ್ಟ್ 03 : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಇಂದು ಬೆಳಗ್ಗೆ 11 ಗಂಟೆಗೆ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.
ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಉಭಯ ನಾಯಕರ ಮೊದಲ ಭೇಟಿ ಇದಾಗಿದ್ದು, ರಾಜಕೀಯ ಮತ್ತು ರಾಜ್ಯ ಯೋಜನೆ ಎರಡು ವಿಚಾರದಲ್ಲೂ ಸಹ ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ರಾಜಕೀಯ ದೃಷ್ಟಿಯಿಂದ ನೋಡುವುದಾದ್ರೆ ಮೋದಿಗೆ ಸದಾ ಮೋದಿಗೆ ಠಕ್ಕರ್ ಕೊಡುವ ಸಿದ್ದರಾಮಯ್ಯ, ಅನ್ನ ಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನಿರಾಕರಿಸಿದ ಹಿನ್ನೆಲೆ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.
ಇನ್ನೂ ಈ ಹಿಂದೆ ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಅವರನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದರು, ಇಂದು ಪ್ರಧಾನು ಮೋದಿ ಭೇಟಿ ವೇಳೆ ಅಕ್ಕಿ ವಿಚಾರವನ್ನ ಸಿದ್ದರಾಮಯ್ಯ ಪ್ರಸ್ತಾಪಿಸಿಲಿದ್ದಾರೆ ಎನ್ನಲಾಗಿದೆ. ಅಕ್ಕಿ ಯೋಜನೆಯಾದ ಅನ್ನ ಭಾಗ್ಯಕ್ಕಾಗಿ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿಯನ್ನು ಪೂರೈಸಲು ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆಯಿದೆ.
ರಾಜ್ಯ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ರಾಜ್ಯ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳ ಕುರಿತು ಮೋದಿ ಟೀಕಿಸಿದ್ರು, ಕಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಖಜಾನೆಯನ್ನು ಖಾಲಿ ಮಾಡುತ್ತದೆ. ರಾಜ್ಯವನ್ನು ದುರ್ಬಲಗೊಳಿಸುತ್ತದೆ ಮತ್ತು ಯುವಜನರ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಮೋದಿ ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದರು.
ಅಲ್ಲದೇ ನೀರಾವರಿ ಯೋಜನೆಗಳು, ಜಲ ಜೀವನ್ ಮಿಷನ್, ಎಂಎನ್‌ಆರ್‌ಇಜಿಎಸ್‌ಗೆ ಕೇಂದ್ರ ಸರ್ಕಾರ ಮತ್ತು ಹೆಚ್ಚುವರಿ ಹಣವನ್ನು ಹೆಚ್ಚಿಸುವಂತೆ ಮನವಿ ಮಾಡುವ ಸಾದ್ಯತೆ ಇದೆ. ಇನ್ನೂ ಪ್ರಧಾನಿ ಭೇಟಿ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ರಾಜ್ಯಕ್ಕೆ ಬರಬೇಕಾದ ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸುವ ಸಾಧ್ಯತೆ ನಡೆಸುವ ಸಾಧ್ಯತೆ ಇದೆ ಇನ್ನೂ ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ, ಹೊಸ ಹೆದ್ದಾರಿಗಳ ಬಗ್ಗೆ ನಿತಿನ್ ಗಡ್ಕರಿ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.












Click it and Unblock the Notifications