'Double Engine' Government: ಸರ್ಕಾರದ ಸಾಧನೆಗಳನ್ನು ಪ್ರಸ್ತುತಪಡಿಸಿದ ಸಿಎಂ ಯೋಗಿ ಆದಿತ್ಯನಾಥ್!
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಂಟಿ ಪ್ರಯತ್ನದಿಂದ ಜನರ ಅಗತ್ಯಗಳನ್ನು ಪೂರೈಸಲಾಗಿದೆ' ಎಂದು ಹೇಳಿದರು. ತಮ್ಮ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದೆ.
ಲಕ್ನೋ ಫೆಬ್ರವರಿ 23: ಕೇಂದ್ರದಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಮಹತ್ತರ ಸಾಧನೆಗಳನ್ನು ಮಾಡಿದೆ. ಬಿಜೆಪಿಯ ಈ 'ಡಬಲ್ ಇಂಜಿನ್' ಸರ್ಕಾರದ ಸಾಧನೆಗಳನ್ನು ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಸ್ತುತಪಡಿಸಿದರು. ತಮ್ಮ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದೆ. ಆದರೂ ವಿಪಕ್ಷಗಳು ತಮ್ಮ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದೆ. ಅದೆಲ್ಲವೂ ಸತ್ಯಕ್ಕೆ ವಿರುದ್ಧವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುವ 'ವಿಕಾಸ ಉತ್ಸವ' ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಬಿಜೆಪಿ ಉಪಾಧ್ಯಕ್ಷ ಯುಪಿಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಮತ್ತು ಯುಪಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿ ಪ್ರಮುಖ ಭಾಷಣ ಮಾಡಿದರು. ಈ ಸದಂರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಂಟಿ ಪ್ರಯತ್ನದಿಂದ ಜನರ ಅಗತ್ಯಗಳನ್ನು ಪೂರೈಸಲಾಗಿದೆ' ಎಂದರು.
ಮುಂದಿನ ವರ್ಷ ಸಂಸತ್ ಚುನಾವಣೆ ನಡೆಯಲಿದ್ದು, ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಚಾರವನ್ನು ತೀವ್ರಗೊಳಿಸುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಬಂದರೆ ರಾಜ್ಯದ ಅಭಿವೃದ್ಧಿಗೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ ಎಂದು ಬಿಜೆಪಿ ನಿರಂತರ ಪ್ರಚಾರದಲ್ಲಿ ತೊಡಗಿದೆ.
ಈ ವೇಳೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ನಿನ್ನೆ ರಾಜ್ಯದ ಹಣಕಾಸು ವರದಿ ಸಲ್ಲಿಸಿದೆ. ಇದರಲ್ಲಿ 2023-24 ವರ್ಷಕ್ಕೆ ಹೆಚ್ಚುವರಿ ಹಣವನ್ನು ನಿಗದಿಪಡಿಸಲಾಗಿದೆ. ಈ ಬಾರಿ ಶಿಕ್ಷಣ, ಮೂಲಸೌಕರ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಒಂದು ಟ್ರಿಲಿಯನ್ ಡಾಲರ್‌ಗೆ ಹೆಚ್ಚಿಸಲು ಸಹ ನಿರ್ಧರಿಸಲಾಗಿದೆ. ಹೀಗೆ ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳಿಗೆ ನೀಡಲಾದ ಅನುದಾನ ಬಗ್ಗೆ ಯೋಗಿ ಆದಿತ್ಯನಾಥ್ ಪ್ರಸ್ತುತಪಡಿಸಿದರು.

ವಿಪಕ್ಷಗಳ ಆರೋಪಿಕ್ಕೆ ತಕ್ಕ ಉತ್ತರ ನೀಡಿದ ಸಿಎಂ
ಈ ಸಂದರ್ಭದಲ್ಲಿ ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿವೆ. ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿವೆ. ಈ ಕುರಿತು ವಿವರಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ' ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತನ್ನ ಎಲ್ಲಾ ಚುನಾವಣಾ ಭರವಸೆಗಳನ್ನು ಈಡೇರಿಸಿದೆ. ಉತ್ತರ ಪ್ರದೇಶದ ದೃಷ್ಟಿಕೋನ ಈಗ ಬದಲಾಗಿದೆ. ಸರ್ಕಾರವು ಮೆಟ್ರೋ ರೈಲುಗಳು ಮತ್ತು ಪಿಎಂಎವೈ, ಚೌಭಾಗ್ಯ ಮತ್ತು ಉಜ್ವಲಾ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ'' ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಸರ್ಕಾರದ ಗುರಿಗಳನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿಂದಿನ ಸರ್ಕಾರ ರಾಜ್ಯಾದ್ಯಂತ ದಾಳಿಕೋರರು ಮತ್ತು ಮಾಫಿಯಾ ಡಾನ್‌ಗಳು ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದ್ದರು. ಆದರೆ ಈಗ ಅವರ ಹಾವಳಿ ಸಂಪೂರ್ಣ ಕಡಿಮೆಯಾಗಿದೆ. ಇನ್ನೊಂದೆಡೆ ಸರ್ಕಾರ 1,800 ಕೋಟಿ ರೂ.ಮೌಲ್ಯದ ಅತಿಕ್ರಮಣ ಭೂಮಿಯನ್ನು ವಶಪಡಿಸಿಕೊಂಡಿದೆ. ಇದರಿಂದ ನಾವು ಸ್ವಂತ ಮನೆಗಳನ್ನು ಕಟ್ಟಿಕೊಂಡಿಲ್ಲ. ಇದರಿಂದ ಅವರು ನಮ್ಮ ವಿರುದ್ಧ ಕಿಡಿ ಕಾರುತ್ತಿದ್ದಾರೆ ಎಂದು ಆಡಳಿತ ಸರ್ಕಾರದ ಸಿಎಂ ದೂರಿದರು.

42 ಲಕ್ಷ ಜನರಿಗೆ ಉಚಿತ ಮನೆ
42 ಲಕ್ಷ ಜನರಿಗೆ ಉಚಿತ ಮನೆ ನೀಡಲಾಗಿದೆ. ಹಿಂದೆ ಅರಸರು ತಮಗಾಗಿ ಮಹಲುಗಳನ್ನು ಕಟ್ಟಿಕೊಳ್ಳುತ್ತಿದ್ದರು. ಉತ್ತರ ಪ್ರದೇಶದ ಮಟ್ಟಿಗೆ ಜನರು ಹಸಿವಿನಿಂದ ಸಾಯುವ ಅಪಾಯವಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದನ್ನು ತಡೆಹಿಡಿಯಲಾಯಿತು. ಹಲವಾರು ಅಕ್ರಮವಾಗಿ ಪಡಿತರ ಚೀಟಿ ಹೊಂದಿದ್ದಾರೆ. ಇದರಿಂದ ಮಾಲೀಕರು ಪಡಿತರ ಚೀಟಿ ಇಲ್ಲದೆ ಪರದಾಡುವಂತಾಗಿದೆ. ಇದಾದ ನಂತರ ನಾವು 80 ಪಡಿತರ ಅಂಗಡಿಗಳಿಗೆ ಇ-ಪೋಸ್ ಯಂತ್ರಗಳೊಂದಿಗೆ ಸಂಪರ್ಕ ಕಲ್ಪಿಸಿದ್ದೇವೆ. ಈ ಮೂಲಕ ನಕಲಿ ಪಡಿತರ ಪತ್ತೆ ಹಚ್ಚಿ ಅದಕ್ಕೆ ಕಡಿವಾಣ ಹಾಕಲಾಗಿದೆ.

ಉದ್ಯೋಗಕ್ಕಾಗಿ ಕೊಡುವ ಲಂಚಕ್ಕೆ ಬ್ರೇಕ್
ಉತ್ತರಪ್ರದೇಶದಲ್ಲಿ ಸುಮಾರು 4.2 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗಿದೆ. ಹಿಂದಿನ ಆಡಳಿತದಲ್ಲಿ ಈ ಕೆಲಸ ಪಡೆಯಲು ಲಂಚ ಕೊಡಬೇಕಿತ್ತು. ಆದರೆ ಈಗ ಅಂತಹ ಭಯವಿಲ್ಲ. ಇಲ್ಲಿ ಸಂಪೂರ್ಣವಾಗಿ ಪ್ರತಿಭೆಯ ಆಧಾರದ ಮೇಲೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಸಿಎಂ ಯೋಗಿ ಹೇಳಿದರು. ಬಿಜೆಪಿ ಆಡಳಿತದಿಂದ ರಾಜ್ಯದ ರಫ್ತು ಮತ್ತು ಅಭಿವೃದ್ಧಿಯಲ್ಲಿ ತಂದ ಬದಲಾವಣೆಗಳ ಬಗ್ಗೆಯೂ ಅವರು ಗಮನಸೆಳೆದರು.












Click it and Unblock the Notifications