ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕಲ್ಲಿದ್ದಲು ಬೇಡಿಕೆ ಶೇ 63ರಷ್ಟು ಏರಿಕೆಯಾಗಲಿದೆ

|
Google Oneindia Kannada News

ನವದೆಹಲಿ, ಮಾರ್ಚ್ 23; ಭಾರತದಲ್ಲಿನ ಕಲ್ಲಿದ್ದಲು ಬೇಡಿಕೆ 2030ಕ್ಕೆ ಶೇ 63ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಲೋಕಸಭೆ ಕಲಾಪದಲ್ಲಿ ಸಚಿವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಬುಧವಾರ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಲೋಕಸಭೆಯಲ್ಲಿ ಈ ಕುರಿತು ಮಾತನಾಡಿದರು. "2021-22ರ ಆರ್ಥಿಕ ಸಮೀಕ್ಷೆ 2030ಕ್ಕೆ ಕಲ್ಲಿದ್ದಲಿನ ಬೇಡಿಕೆ 1.3 ರಿಂದ 1.5 ಬಿಲಿಯನ್ ಟನ್ ಆಗಲಿದೆ" ಎಂದು ಹೇಳಿದೆ ಎಂದರು.

ಸಂಸತ್ ಅಧಿವೇಶನ ದಿನ 3: ನಕಲಿ ಸುದ್ದಿ, ಕಲ್ಲಿದ್ದಲು ಕೊರತೆ ಕುರಿತು ಪ್ರಶ್ನೆಸಂಸತ್ ಅಧಿವೇಶನ ದಿನ 3: ನಕಲಿ ಸುದ್ದಿ, ಕಲ್ಲಿದ್ದಲು ಕೊರತೆ ಕುರಿತು ಪ್ರಶ್ನೆ

"ಇಂಧನ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕಲ್ಲಿದ್ದಲು ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಇಂಧನ ಉತ್ಪಾದನೆ ಮುಂದಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ" ಎಂದು ಸಚಿವರು ವಿವರಣೆ ನೀಡಿದರು.

ಕಲ್ಲಿದ್ದಲು ಬಿಕ್ಕಟ್ಟು: ಮಹಾರಾಷ್ಟ್ರದಲ್ಲಿ 4,000 ಮೆಗಾ ವ್ಯಾಟ್ ವಿದ್ಯುತ್ ಕೊರತೆಕಲ್ಲಿದ್ದಲು ಬಿಕ್ಕಟ್ಟು: ಮಹಾರಾಷ್ಟ್ರದಲ್ಲಿ 4,000 ಮೆಗಾ ವ್ಯಾಟ್ ವಿದ್ಯುತ್ ಕೊರತೆ

Coal Demand Set To Peak By 63 Percent By 2030

"ಕಲ್ಲಿದ್ದಲು ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಸಾಗಾಣಿಕೆಗೆ ಯಾವುದೇ ತೊಂದರೆ ಇಲ್ಲ. ಕಲ್ಲಿದ್ದಲು ದಾಸ್ತಾನು ಸಹ ಇದೆ. ಗಣಿ ಮುಚ್ಚುವಿಕೆ, ಪರಿಸರದ ಮೇಲೆ ಉಂಟಾಗುವ ಪ್ರಭಾವ ಮುಂತಾದವುಗಳ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ" ಎಂದು ಸಚಿವರು ಹೇಳಿದರು.

Explained: ಭಾರತದಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಸುತ್ತಲಿನ ಪ್ರಮುಖ ಬೆಳವಣಿಗೆಗಳು Explained: ಭಾರತದಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಸುತ್ತಲಿನ ಪ್ರಮುಖ ಬೆಳವಣಿಗೆಗಳು

ಕಲ್ಲಿದ್ದಲು ಉತ್ಪಾದನೆಗೆ ಆದ್ಯತೆ; ದೇಶದಲ್ಲಿ ಒಟ್ಟು ಕಲ್ಲಿದ್ದಲು ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸಲು ಅನುಕೂಲವಾಗುವಂತೆ ಕೆಲವು ಮಾನದಂಡಗಳ ಸಡಿಲಿಕೆಗಾಗಿ ಕಲ್ಲಿದ್ದಲು ಸಚಿವಾಲಯ ಪರಿಸರ, ಅರಣ್ಯ ಮತ್ತು ವಾತಾವರಣ ಬದಲಾವಣೆ ಸಚಿವಾಲಯದ ಜೊತೆ ಸಭೆ ನಡೆಸಿತ್ತು.

ಅಂತಾರಾಷ್ಟ್ರೀಯ ದರಗಳಲ್ಲಿ ಭಾರೀ ಏರಿಕೆಯಾಗಿರುವುದರಿಂದ ಕಲ್ಲಿದ್ದಲಿಗೆ ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಆದರೆ ವಿದ್ಯುತ್ ವಲಯಕ್ಕೆ ಸುಸ್ಥಿರವಾದ ರೀತಿಯಲ್ಲಿ ಕಲ್ಲಿದ್ದಲು ಪೂರೈಕೆಯಾಗಬೇಕಾಗಿರುವುದು ಉತ್ಪಾದನೆ ಕಡೆಗೆ ಸಹ ಗಮನಕೊಡುವುದು ಬಹಳ ಮುಖ್ಯ ಎಂದು ಸಚಿವರು ಹೇಳಿದರು.

2025ರ ವೇಳೆಗೆ ಒಂದು ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಗುರಿಯನ್ನು ಸಾಧಿಸುವಲ್ಲಿ ಎನ್. ಸಿ. ಎಲ್. ಮಹತ್ವದ ಪಾತ್ರ ವಹಿಸಲಿದೆ. ಕಲ್ಲಿದ್ದಲು ಉತ್ಪಾದನೆ ಹೆಚ್ಚಳದ ಜೊತೆ ಪರಿಸರದ ಬಗ್ಗೆಯೂ ಕಾಳಜಿ ವಹಿಸಬೇಕಿದೆ.

ಹಸಿರು ಹೊದಿಕೆ; ಕಲ್ಲಿದ್ದಲು ಗಣಿಗಾರಿಕೆಯು ಭೂಮಿಯನ್ನು ಮಾಡುತ್ತದೆ ಎಂಬ ಸಾಮಾನ್ಯ ಕಲ್ಪನೆ ಇದೆ. ಕಲ್ಲಿದ್ದಲು ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಕೋಲ್ ಇಂಡಿಯಾ ಲಿಮಿಟೆಡ್‌ನ ಹೊಸ ಯೋಜನೆಗಳು ಭೂಮಿಯನ್ನು ಅದರ ಮೂಲ ಸ್ವರೂಪಕ್ಕೆ ಪುನಸ್ಥಾಪಿಸುವುದರ ಜೊತೆಗೆ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆ ನಡೆಯುವ ಪ್ರದೇಶದುದ್ದಕ್ಕೂ ಹಸಿರು ಹೊದಿಕೆಯನ್ನು ಹೆಚ್ಚಿಸಿವೆ.

ತೆರೆದ ಕಲ್ಲಿದ್ದಲು ಗಣಿಗಾರಿಕೆ ಕಾರ್ಯಾಚರಣೆ ಬಳಿಕ ಅಗೆದ ಜಾಗವನ್ನು ಮತ್ತೆ ಮಣ್ಣಿನಿಂದ ಮುಚ್ಚಲಾಗುತ್ತಿದೆ ಮತ್ತು ಅದರ ಮೇಲೆ ದಟ್ಟವಾದ ಅರಣ್ಯ ಬೆಳೆಸಲಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆಯಾಗಿ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಜಯಂತ್ ಓಪನ್ ಕಾಸ್ಟ್ ಕಲ್ಲಿದ್ದಲು ಯೋಜನೆ ಪ್ರದೇಶವನ್ನು ನೋಡಬಹುದಾಗಿದೆ.

ಈ ಯೋಜನೆಯು ಭೂ ಪುನಶ್ಚೇತನ ಮತ್ತು ದಿನದಿಂದ ದಿನಕ್ಕೆ ಹಸಿರು ಹೊದಿಕೆಯನ್ನು ಹೆಚ್ಚಿಸುವ ಮೂಲಕ ಕಲ್ಲಿದ್ದಲು ಗಣಿಗಾರಿಕೆಯನ್ನು ಗಣಿಗಾರಿಕೆ ದೃಷ್ಟಿಯನ್ನು ಬದಲಾವಣೆ ಮಾಡಿದೆ. ಹಸಿರು ಹೊದಿಕೆ ಮಾಲಿನ್ಯದ ಪರಿಣಾಮವನ್ನು ಗಣನೀಯವಾಗಿ ಕಡಿಮೆ ಮಾಡಲು ಸಹಾಯ ಮಾಡಿದೆ ಮತ್ತು ಇಂಗಾಲದ ಹೊರಸೂಸುವಿಕೆ ತಗ್ಗಿಸಲು ಸಹಕರಿಸಿದೆ.

English summary
Union minister of coal, mines and parliamentary affairs Pralhad Joshi said that coal demand is set to peak by 63 percent by the year 2030.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X