ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾಗೆ ಹೈಕೋರ್ಟ್ ನಿಂದ ರಿಲೀಫ್

Subscribe to Oneindia Kannada

ನವದೆಹಲಿ, ಜನವರಿ 2: ಬಹುಕೋಟಿ ಕಲ್ಲಿದ್ದಲು ಹಗರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ನಿರಾಳರಾಗಿದ್ದಾರೆ.

ಮಧು ಕೋಡಾಗೆ ಸಿಬಿಐ ವಿಶೇಷ ನ್ಯಾಯಾಲಯ ಡಿಸೆಂಬರ್ 13ರಂದು 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಿತ್ತು.

ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಸಿಎಂ ಮಧುಕೋಡಾಗೆ 3 ವರ್ಷ ಜೈಲು

ಇದೀಗ ದೆಹಲಿ ಹೈಕೋರ್ಟ್ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಮತ್ತು ವಿಚಾರಣೆಯನ್ನು ಮುಂದೂಡಿದೆ.

Coal scam case: Delhi High Court stays 3 year jail term to former Jharkhand CM Madhu Koda

ಡಿಸೆಂಬರ್ 13ರಂದು ಮಧು ಕೋಡಾ, ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತಾ, ಜಾರ್ಖಂಡ್ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಅವರ ಮೇಲೆ ಕ್ರಿಮಿನಲ್ ಸಂಚು, ವಂಚನೆ, ಭ್ರಷ್ಟಾಚಾರದ ಆರೋಪದಲ್ಲಿ ದೋಷಿಗಳು ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿತ್ತು.

ಇವರೆಲ್ಲರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409 ಅನ್ವಯ ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಾದ ಆರೋಪಗಳು ಸಾಬೀತಾಗಿದ್ದವು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Delhi High Court stays the Special CBI trial court order which awarded 3 year jail term to former Jharkhand CM Madhu Koda in a coal scam case. Court also stayed the fine imposed on him till the next date of hearing.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ