ಕಲ್ಲಿದ್ದಲು ಹಗರಣ: ಮಾಜಿ ಕಾರ್ಯದರ್ಶಿ ಗುಪ್ತಾ ಅಪರಾಧಿ
ಕಲ್ಲಿದ್ದಲು ಹಗರಣ ನಡೆದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಗುಪ್ತಾ, ನಿರ್ದೇಶಕ ಸಮಾರಿಯಾ, ಜಂಟಿ ಕಾರ್ಯದರ್ಶಿ ಕ್ರೋಫಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಮಾನಿಸಿದೆ.
ನವದೆಹಲಿ, ಮೇ 19: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರು ಅಪರಾಧಿಯೆಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ.
ಮಧ್ಯಪ್ರದೇಶದ ಥೆಸ್ಗೋರಾ- ಬಿ ರುದ್ರಪುರಿ ಕಲ್ಲಿದ್ದಲು ನಿಕ್ಷೇಪಗಳನ್ನು ಹಂಚಿಕೆ ಮಾಡುವ ವಿಚಾರದಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಇವರ ಮೇಲಿದೆ.

ಇದೇ ವೇಳೆ, ಹಗರಣ ನಡೆದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೋಫಾ ಹಾಗೂ ಆಗಿನ ನಿರ್ದೇಶಕ ಕೆ.ಸಿ. ಸಮಾರಿಯಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿದೆ. ಕೆಎಸ್ಎಸ್ಪಿಎಲ್ ಕಂಪೆನಿಯ ಎಂಡಿ ಪವನ್ಕುಮಾರ್ ಅಹ್ಲುವಾಲಿಯಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಹೇಳಿದೆ.
ಮಧ್ಯಪ್ರದೇಶದ ಥೆಸ್ಗೊರಾ ಬಿ ಮತ್ತು ರುದ್ರಪುರಿ ಕಲ್ಲಿದ್ದಲು ಗಣಿಯನ್ನು ಕೆಎಸ್ಎಸ್ಪಿಎಲ್ ಕಂಪೆನಿಗೆ ಹಂಚಿಕೆ ಮಾಡಿದ ಪ್ರಕರಣ ಇದಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮೇ 22ರಂದು ಪ್ರಕಟಿಸಲಿದೆ. ಪ್ರಕರಣಕ್ಕೆ ಸಂಬಂಧಿಸಿ, ಚಾರ್ಟಡ್ ಅಕೌಂಟೆಂಟ್ ಅಮಿತ್ ಗೋಯೆಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
{promotion-urls}
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications