Vande Bharat : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಚಪಾತಿಯಲ್ಲಿ ಜಿರಳೆ ಪತ್ತೆ!
ಭಾರತೀಯ ರೈಲ್ವೇಯ ರೈಲುಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನು ಸುಧಾರಿಸಲಾಗಿದೆ ಎಂಬ ಹೇಳಿಕೆಯ ಹೊರತಾಗಿಯೂ, IRCTC ಯ ಊಟದಲ್ಲಿ ಕೀಟಗಳು ಕಂಡುಬರುವ ಘಟನೆಗಳಿಗೆ ಅಂತ್ಯವೇ ಇಲ್ಲ. ಇತ್ತೀಚಿನ ಘಟನೆಯೊಂದರಲ್ಲಿ ಅತಿ ಐಷಾರಾಮಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಚಪಾತಿಗೆ ಜಿರಳೆ ಅಂಟಿಕೊಂಡಿರುವುದು ಕಂಡುಬಂದಿದೆ.
ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಚಪಾತಿಯಲ್ಲಿ ಈ ಕೀಟ ಸಿಕ್ಕಿದೆ. ಅವರು ಚಪಾತಿಯ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಫೋಟೋವನ್ನು ಶೇರ್ ಮಾಡಿದ ತಕ್ಷಣ, ಘಟನೆಯ ಬಗ್ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ IRCTC ಟ್ವೀಟ್‌ಗೆ ಪ್ರತಿಕ್ರಿಯಿಸಲು ಮತ್ತು ಪ್ರಯಾಣಿಕರ PNR ಸಂಖ್ಯೆಯನ್ನು ಕೇಳಿದೆ. IRCTC ಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಹೀಗೆ ಉತ್ತರಿಸಿ, "ನಾವು ಈ ಅಹಿತಕರ ಅನುಭವಕ್ಕೆ ವಿಷಾದಿಸುತ್ತೇವೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದಿದೆ.
ರೈಲಿನಲ್ಲಿ IRCTC ನೀಡುವ ಊಟದಲ್ಲಿ ಕೀಟಗಳನ್ನು ಗುರುತಿಸುವ ಘಟನೆ ಇದೇ ಮೊದಲಲ್ಲ. ಇದು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುವ ಹಲವು ಘಟನೆಗಳಲ್ಲಿ ಒಂದಾಗಿದೆ.
@IRCTCofficial found a cockroach in my food, in the vande bharat train. #Vandebharatexpress#VandeBharat #rkmp #Delhi @drmbct pic.twitter.com/Re9BkREHTl
— pundook🔫🔫 (@subodhpahalajan) July 24, 2023
ಇನ್ನೊಂದು ಸುದ್ದಿಯಲ್ಲಿ, ಭೋಪಾಲ್‌ನ ರಾಣಿ ಕಮಲಾಪತಿ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಶೌಚಾಲಯದ ಬಳಕೆಗೆ ಪರಿಹಾರಕ್ಕಾಗಿ ವ್ಯಕ್ತಿಯೊಬ್ಬರು 6,000 ಖರ್ಚು ಮಾಡಬೇಕಾಯಿತು. ಪ್ರಯಾಣಿಕ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವ್ಯಕ್ತಿ ಶೌಚಾಲಯಕ್ಕೆ ಹೋಗಬೇಕಾಯಿತು.

ನಿಲ್ದಾಣದಲ್ಲಿ ಹತ್ತಿರದಲ್ಲಿ ಶೌಚಾಲಯ ಕಂಡುಬರಲಿಲ್ಲ. ಹೀಗಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಹತ್ತಿದ್ದಾನೆ. ಆದರೆ ಬಾಗಿಲು ಹಾಕಿದ್ದರಿಂದ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಪೊಲೀಸರು ಮತ್ತು ಟಿಕೆಟ್ ಕಲೆಕ್ಟರ್‌ಗಳಿಂದ ಸಹಾಯ ಪಡೆದ ನಂತರ, ಟಿಕೆಟ್ ಇಲ್ಲದೆ ರೈಲು ಹತ್ತಿದ್ದಕ್ಕಾಗಿ ಮುಖ್ಯರಿಗೆ 1,020 ದಂಡ ವಿಧಿಸಬೇಕಾಯಿತು.
ವಂದೇ ಭಾರತ್ ರೈಲು ಊಟದಲ್ಲಿ ಉಗುರು ಪತ್ತೆ
ಈ ಹಿಂದೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ನೀಡಿದ ಆಹಾರದಲ್ಲಿ ಮನುಷ್ಯರ ಉಗುರುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿತ್ತು. ಈ ಪ್ರಯಾಣಿಕರಿಗೆ ರೈಲಿನ ಸಿಬ್ಬಂದಿ ಆಹಾರವನ್ನು ನೀಡಿದ್ದರು. ಆ ಆಹಾರದಲ್ಲಿ ಮನುಷ್ಯರ ಉಗುರು ಪತ್ತೆಯಾಗಿರುವುದು ಆಕ್ರೋಶಕ್ಕೆ ಗುರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ಅಡುಗೆ ಗುತ್ತಿಗೆದಾರನಿಗೆ 25,000 ರೂಪಾಯಿ ದಂಡ ವಿಧಿಸಿತ್ತು. ಉಗುರು ಪತ್ತೆ ಹಚ್ಚಿರುವ ಪ್ರಯಾಣಿಕರು ಆಹಾರದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಈ ಹಿಂದೆಯೂ ಮುಂಬೈ-ಗೋವಾ ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಹಲವಾರು ದೂರುಗಳು ಬಂದಿದೆ. ಈಗ, ಇಂತಹ ಘಟನೆಗಳನ್ನು ತಡೆಯಲು ಐಆರ್‌ಸಿಟಿಸಿ ಕೆಲವು ಪ್ರೋಟೋಕಾಲ್‌ಗಳನ್ನು ಜಾರಿಗೆ ತಂದಿದೆ. ಕಾರ್ಯನಿರ್ವಾಹಕ ಮಟ್ಟದ ಅಧಿಕಾರಿಯೊಬ್ಬರು ಈಗ ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲಿದ್ದು, ರೈಲುಗಳಲ್ಲಿ ಆನ್-ಬೋರ್ಡ್ ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications