ಐಸಿಸ್‌ಗೆ ಸಾಥ್ ನೀಡಿದವರ ವಿರುದ್ಧ ಕೇರಳ, ತಮಿಳುನಾಡು, ಕರ್ನಾಟಕದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ಶೋಧ!
ಶಂಕಿತ ಐಸಿಸ್ ಸಹಾನುಭೂತಿ ಹೊಂದಿರುವವರ ವಿರುದ್ಧ ಕೇರಳ, ತಮಿಳುನಾಡು, ಕರ್ನಾಟಕದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ.
ಕೊಯಮತ್ತೂರು ಫೆಬ್ರವರಿ 15: ಕೊಯಮತ್ತೂರು ಕಾರು ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಹಲವೆಡೆ ಎನ್‌ಐಎ ದಾಳಿ ಮಾಡಿದೆ. ವರದಿಯ ಪ್ರಕಾರ, ಕೇರಳ, ತಮಿಳುನಾಡು, ಕರ್ನಾಟಕದ ಸುಮಾರು 60 ಸ್ಥಳಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎನ್‌ಐಎ) ದಾಳಿ ಮಾಡಿದೆ. ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಹಾನುಭೂತಿ ಹೊಂದಿರುವ ಶಂಕಿತರ ವಿರುದ್ಧ ಈ ದಾಳಿ ನಡೆಯುತ್ತಿದೆ. ಈ ಜನರು ವೀಡಿಯೊಗಳ ಮೂಲಕ ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಹೀಗಾಗಿ ಶಂಕಿತ ಐಸಿಸ್ ಸಹಾನುಭೂತಿ ಹೊಂದಿರುವವರ ವಿರುದ್ಧ ಕೇರಳ, ತಮಿಳುನಾಡು, ಕರ್ನಾಟಕದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ. ಕರ್ನಾಟಕದ 45ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದೆ.
ದೀಪಾವಳಿ ಸಂದರ್ಭದಲ್ಲಿ, ಅಕ್ಬೋಬರ್ 23 ರ ಭಾನುವಾರ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಅಳವಡಿಸಿದ್ದ ಕಾರೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದ. ಪ್ರಕರಣದ ತನಿಖೆ ನಡೆಸಿದ ಸ್ಥಳೀಯ ಪೊಲೀಸರು ಜಮೀಶಾ ಮುಬಿನ್ ಮನೆಯಿಂದ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಇದೀಗ ಚೆನ್ನೈ ಮತ್ತು ಕೊಯಮತ್ತೂರು ಸೇರಿ ರಾಜ್ಯದ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಚೆನ್ನೈನ ಐದು ಸ್ಥಳಗಳು ಮತ್ತು ಕೊಯಮತ್ತೂರು ಕೋಟೆ ಮೇಡು, ಉಕ್ಕಡಂ, ಪೊನ್ವಿಜ ನಗರ, ರತ್ನಪುರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ನಿಷೇಧಿತ ಸಂಘಟನೆಗಳ ಬೆಂಬಲಿಗರ ಮನೆಗಳಲ್ಲಿ ಶೋಧ ಮಾಡಿತ್ತು.












Click it and Unblock the Notifications