ಕೊಯಮತ್ತೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿತ, 9 ಸಾವು

ಕೊಯಮತ್ತೂರು, ಸೆ. 07: ಗ್ರಾಮೀಣ ಪ್ರದೇಶದ ಸೋಮನೂರು ಎಂಬಲ್ಲಿನ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು, ಹಲವಾರು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 10ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

 Coimbatore : Somanur Bus stand roof collapse video

ಪ್ರತ್ಯಕ್ಷ ದರ್ಶಿಗಳ ಪ್ರಕಾರ, ಸುಮಾರು 50 ಅಡಿ ವಿಸ್ತಾರದ ಬಸ್ ನಿಲ್ದಾಣದಡಿ ಬಸ್ ಚಾಲಕರೊಬ್ಬರು ಸೇರಿದಂತೆ ಹಲವಾರು ಮಂದಿ ನಿಂತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಗಾಯಗೊಂಡವರನ್ನು ಕೊಯಮತ್ತೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳದ ಈಗಿನ ಪರಿಸ್ಥಿತಿಯ ವಿಡಿಯೋ ನೋಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+