ಅಂತಿಮ ವರ್ಷದ ಪರೀಕ್ಷೆಗಳು; ಗೃಹ ಸಚಿವಾಲಯದ ಸ್ಪಷ್ಟನೆ

ನವದೆಹಲಿ, ಆಗಸ್ಟ್ 13 : ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ.

Recommended Video

      Corona vaccine ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ | Oneindia Kannada

      ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸುವಾಗ ಆಗಸ್ಟ್ 31ರ ತನಕ ಶಾಲೆ, ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ. ಆದರೆ, ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವ ತೀರ್ಮಾನವನ್ನು ಕಾಲೇಜು, ವಿಶ್ವವಿದ್ಯಾಲಯಕ್ಕೆ ನೀಡಿದೆ.

      ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷದ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ಯುಜಿಸಿ ಹೇಳಿದೆ. ಯುಜಿಸಿ ಮಾರ್ಗಸೂಚಿ ಅನ್ವಯವೇ ಪರೀಕ್ಷೆ ನಡೆಸಿ, ಮೌಲ್ಯ ಮಾಪನ ಪ್ರಕ್ರಿಯೆ ನಡೆಸಬೇಕು ಎಂದು ಸೂಚಿಸಲಾಗಿದೆ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಲಾಗಿದೆ.

      Colleges Universities Open To Conduct Final Year Exam

      ಜುಲೈ 6ರಂದು ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆಯೊಂದನ್ನು ಕಳಿಸಿದೆ. ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ಪೂರ್ಣಗೊಳಿಸಿ ಪ್ರಕ್ರಿಯೆಗಳನ್ನು ಮುಗಿಸಬೇಕು. ಆನ್‌ಲೈನ್ ಅಥವ ಆಫ್‌ ಲೈನ್ ಮೂಲಕ ಪರೀಕ್ಷೆ ನಡೆಸುವ ತೀರ್ಮಾನ ವಿಶ್ವವಿದ್ಯಾಲಯಗಳಿಗೆ ಬಿಟ್ಟಿದ್ದು ಎಂದು ಹೇಳಿದೆ.

      ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ಉದ್ಯೋಗಕ್ಕೆ ತೆರಳಲು ಸಹಾಯಕವಾಗುವಂತೆ ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಗಿಸಬೇಕು. ಆದರೆ, ಕೆಲವು ರಾಜ್ಯಗಳು ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ವಿರೋಧ ವ್ಯಕ್ತಪಡಿಸಿವೆ.

      ಹಲವು ರಾಜ್ಯಗಳು ಕಾಲೇಜುಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಿವೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಸೆಪ್ಟೆಂಬರ್ ಅಂತ್ಯದ ಗಡುವನ್ನು ಮುಂದೂಡಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸಿದ್ದವು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+