ಬಜರಂಗದಳದಿಂದ ಧಾರ್ಮಿಕ ಹಿಂಸಾಚಾರ: ಹರಿಯಾಣದಲ್ಲಿ ಇಂಟರ್‌ನೆಟ್‌ ಸ್ಥಗಿತ?

ಚಂಡೀಗಢ, ಜುಲೈ 31: ಬಜರಂಗ ದಳದ ಕಾರ್ಯಕರ್ತನೊಬ್ಬನಿಂದ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆಕ್ಷೇಪಾರ್ಹ ವೀಡಿಯೊದಿಂದ ಹರಿಯಾಣದಲ್ಲಿ ಧಾರ್ಮಿಕ ಹಿಂಸಾಚಾರ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ.

ಗುರುಗ್ರಾಮ್‌ಗೆ ಹೊಂದಿಕೊಂಡಿರುವ ನುಹ್‌ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಉಂಟಾದ ಹಿಂಸಾಚಾರದಿಂದ ಭಾರೀ ಹಿಂಸಾಚಾರ ನಡೆದ ಪರಿಣಾಮ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಹರಿಯಾಣದ ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಈ ವೇಳೆ ಕಲ್ಲು ತೂರಾಟ, ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.

communal violence by Bajrang Dal: Internet shutdown in Haryana

ಘಟನೆ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಂಯ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿಗೆ ಗುಂಡು ಹಾರಿಸಲಾಗಿದ್ದು, ಆತನನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್‌ 2ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ದೊಡ್ಡ ಸಭೆಗಳನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯುತ್ತಿರುವ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಗುರುಗ್ರಾಮ-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪೊಂದು ತಡೆದು, ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಸರ್ಕಾರಿ ಮತ್ತು ಖಾಸಗಿ ವಾಹನಗಳ ಮೇಲೆ ಗುಂಪು ದಾಳಿ ನಡೆಸಲಾಯಿತು. ಪ್ರಸ್ತುತ, ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಂದ 2,500 ಜನರು ನುಲ್ಹಾರ್ ಮಹಾದೇವ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಅವರ ವಾಹನಗಳನ್ನು ಹೊರಗೆ ನಿಲ್ಲಿಸಲಾಗಿದೆ. ಅವರನ್ನು ಸ್ಥಳಾಂತರಿಸಲು ಪೊಲೀಸರಿಗೆ ಇದುವರೆಗೆ ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

ಬಜರಂಗ ದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆಕ್ಷೇಪಾರ್ಹ ವೀಡಿಯೊದಿಂದ ಘರ್ಷಣೆ ಉಂಟಾಗಿದೆ ಎಂದು ವರದಿಗಳು ಹೇಳಿವೆ. ಬಜರಂಗ ದಳದ ಸದಸ್ಯ ಮೋನು ಮಾನೇಸರ್ ಮತ್ತು ಅವರ ಸಹಚರರು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಶಂಕಿತರಾಗಿದ್ದಾರೆ.

ಘಟನೆಯ ಕೆಲವು ದಿನಗಳ ಹಿಂದೆ ವೀಡಿಯೊವನ್ನು ಪ್ರಸಾರ ಮಾಡಿದ್ದ ಅವರು ಅವರು ಯಾತ್ರೆಯ ಸಮಯದಲ್ಲಿ ಮೇವಾತ್‌ನಲ್ಲಿ ಉಳಿಯುವುದಾಗಿ ಬಹಿರಂಗವಾಗಿ ಸವಾಲು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯಾತ್ರೆಯ ವೇಳೆ ಅವರನ್ನು ಕಂಡಿರುವುದಾಗಿ ಹಲವರು ಹೇಳಿಕೊಳ್ಳುತ್ತಿದ್ದು, ಸ್ಥಳೀಯರು ಇದಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+