ಸರ್ಕಾರಿ ಉದ್ಯೋಗ ಪಡೆಯಲು ಮಿಲಿಟರಿ ತರಬೇತಿ ಕಡ್ಡಾಯ?

ಬೆಂಗಳೂರು, ಮಾರ್ಚ್ 15 : ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ 5 ವರ್ಷದ ಮಿಲಿಟರಿ ತರಬೇತಿಯನ್ನು ಕಡ್ಡಾಯಗೊಳಿಸಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಈ ಕುರಿತು ಪ್ರಸ್ತಾವನೆಯನ್ನು ಸಿದ್ಧಗೊಳಿಸಬೇಕು ಎಂದು ಶಿಫಾರಸಿನಲ್ಲಿ ಹೇಳಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನೇರವಾಗಿ ದೇಶದ ಪ್ರಧಾನ ಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಸಲ್ಲಿಸಲಿದೆ.

5 ವರ್ಷದ ಮಿಲಿಟರಿ ತರಬೇತಿಯನ್ನು ಕಡ್ಡಾಯಗೊಳಿಸಿದರೆ ರಕ್ಷಣಾ ಪಡೆಗಳು ಎದುರಿಸುತ್ತಿರುವ ಸಿಬ್ಬಂದಿಗಳ ಕೊರತೆಯೂ ನಿವಾರಣೆಯಾಗಲಿದೆ ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.

Compulsory military service for those seeking govt jobs

ಭಾರತೀಯ ಸೇನೆ 7000 ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ ಎಂಬ ವರದಿ ಕೆಲವು ದಿನಗಳ ಹಿಂದೆ ಬಂದಿತ್ತು. ಈ ವರದಿ ಬಂದ ಕೆಲವೇ ದಿನಗಳಲ್ಲಿ ಸಂಸದೀಯ ಸಮಿತಿ 5 ವರ್ಷಗಳ ಮಿಲಿಟರಿ ತರಬೇತಿಯನ್ನು ಕಡ್ಡಾಯಗೊಳಿಸಬೇಕು ಎಂದು ಶಿಫಾರಸು ಮಾಡಿದೆ.

ವಾಯುಪಡೆ 150 ಸಿಬ್ಬಂದಿ, 15 ಸಾವಿರ ಪುರುಷ ಸಿಬ್ಬಂದಿ. ನೌಕಾಪಡೆ ಸಹ 15 ಸಾವಿರ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ತರಬೇತಿ ಕಡ್ಡಾಯಗೊಳಿಸಿದರೆ ಸಿಬ್ಬಂದಿಗಳ ಕೊರತೆ ನಿವಾರಣೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ರಕ್ಷಣಾ ಇಲಾಖೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜೊತೆ ಮಾತುಕತೆ ನಡೆಸಿ ಈ ಶಿಫಾರಸು ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+