ಹಿಂಗೂ ಪ್ರಾಚಾರ ಮಾಡ್ತಾರಾ! ಕಾಂಡೋಮ್ ಪಾಕೆಟ್‌ಗಳ ಮೇಲೆ ರಾಜಕೀಯ ಪಕ್ಷಗಳ ಹೆಸರು: ಭಾರೀ ವೈರಲ್
ಆಂಧ್ರಪ್ರದೇಶ, ಫೆಬ್ರವರಿ, 22: ಇದೀಗ ದೇಶದೆಲ್ಲೆಡೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ಪಕ್ಷಗಳಿಂದಲೂ ಭರ್ಜರಿ ತಯಾರಿಗಳು ನಡೆಯುತ್ತಿವೆ. ರಾಜಕೀಯ ನಾಯಕರು ಪ್ರಚಾರಗಳಲ್ಲಿ ಕಾರ್ಯನಿರತರಾಗಿದ್ದಾರೆ. ಆದರೆ ದೇಶದ ಈ ರಾಜ್ಯದಲ್ಲಿ ಮಾತ್ರ ಕಾಂಡೋಮ್ ಪ್ಯಾಕೆಟ್‌ಗಳ ಮೇಲೆ ರಾಜಕೀಯ ಹೆಸರು ಬರೆಸಿ ವಿಚಿತ್ರವಾಗಿ ಪ್ರಚಾರ ಮಾಡಲಾಗುತ್ತಿದ್ದು, ಸದ್ಯ ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ಘಟನೆ ನಡೆದಿರುವು ಎಲ್ಲಿ ಹಾಗೂ ಯಾವ ಪಕ್ಷಗಳಿಂದ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸಾಮಾನ್ಯವಾಗಿ ಕುಕ್ಕರ್, ಸೀರೆ, ಹಣ ಮುಂತಾದ ಉಡುಗೊರೆಗಳನ್ನು ಹಂಚುವ ಮೂಲಕ ರಾಜಕೀಯ ನಾಯಕರು ಪ್ರಚಾರ ಮಾಡುವುದನ್ನು ಕೇಳಿದ್ದೇವೆ. ಆದರೆ ಆಂಧ್ರಪ್ರದೇಶಲ್ಲಿ ಮಾತ್ರ ಕಾಂಡೋಮ್ ಪಾಕೆಟ್‌ಗಳನ್ನು ಹಂಚಿಕೆ ಮಾಡುವ ಮೂಲಕ ವಿಚಿತ್ರ ಪ್ರಚಾರ ಮಾಡುತ್ತಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಆಂಧ್ರಪ್ರದೇಶದ ಆಡಳಿತರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ ನಾಯಕರು ತಮ್ಮ ಪಕ್ಷದ ಚಿಹ್ನೆಗಳುಳ್ಳ ಕಾಂಡೋಮ್ ಪ್ಯಾಕೆಟ್‌ಗಳನ್ನು ಹಂಚಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲೋಕಸಭಾ ಚುನಾವಣೆಯ ಸಮಯದಲ್ಲೇ ಕಾಂಡೋಮ್ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳೇ ಚುನಾವಣಾ ಪ್ರಚಾರದ ಸಾಧನವಾಗಿವೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
Indian politics is not for beginners!#AndhraPradesh pic.twitter.com/IFELhTarxO
— Biju VB (@Biju_Vaisyathil) February 22, 2024
ಆಡಳಿತ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಮತ್ತು ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿ (ಟಿಡಿಪಿ), ಪಕ್ಷದ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಕಾಂಡೋಮ್ ಪ್ಯಾಕೆಟ್‌ಗಳು ಲೋಕಸಭೆ ಚುನಾವಣೆಗಾಗಿ ಮನೆ ಮನೆಗೆ ಪ್ರಚಾರ ನಡೆಸುತ್ತಿರುವ ಪಕ್ಷದ ಮುಖಂಡರು ಸಾರ್ವಜನಿಕರಿಗೆ ವಿತರಿಸಿದ ಕಿಟ್‌ನ ಭಾಗವಾಗಿದೆ ಎಂದು ಹೇಳಲಾಗುತ್ತಿದೆ.
ವ್ಯಕ್ತಿಯೊಬ್ಬ ಕಾಂಡೋಮ್‌ಗಳನ್ನು ಏಕೆ ವಿತರಿಸಲಾಗುತ್ತಿದೆ ಎಂದು ಟಿಡಿಪಿ ಕಾರ್ಯಕರ್ತ ಎಂದು ಹೇಳಲಾದವನನ್ನು ಕೇಳಿದಾಗ, ಹೆಚ್ಚು ಮಕ್ಕಳಿದ್ದರೆ, ಹೆಚ್ಚಿನ ಹಣವನ್ನು ವಿತರಿಸಬೇಕು. ಅದಕ್ಕಾಗಿಯೇ ಈ ಕಾಂಡೋಮ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಉತ್ತರಿಸಿದವರನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.












Click it and Unblock the Notifications