ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

|
Google Oneindia Kannada News

ನವದೆಹಲಿ, ಏಪ್ರಿಲ್ 8: ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳಲ್ಲಿ ಪ್ರತಿಯೊಬ್ಬರಿಗೂ ಕೊವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಅಥವಾ ಐಸಿಎಂಆರ್ ನಿಂದ ಅನುಮತಿ ಪಡೆದ ಪ್ರಯೋಗಾಲಯಗಳಲ್ಲಿ ಮಾತ್ರ ಕೊವಿಡ್ -19 ಪರೀಕ್ಷೆಗೆ ಅವಕಾಶ ನೀಡಬೇಕು ಮತ್ತು ಅದು ಉಚಿತವಾಗಿ ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.

ಪ್ರಸ್ತುತ ಖಾಸಗಿ ಪ್ರಯೋಗಾಲಯಗಳಲ್ಲಿ ಕೊವಿಡ್-19 ಪರೀಕ್ಷೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದಕ್ಕಾಗಿ 4500 ರೂ. ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಇದು ದುಬಾರಿಯಾಗುತ್ತಿದ್ದು, ಉಚಿತವಾಗಿಯೇ ಪರೀಕ್ಷೆ ನಡೆಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

Conduct COVID-19 Tests Free Of Cost: Supreme Court Directs Centre

ವಿಡಿಯೋಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು ಭಾರತದಲ್ಲಿನ 118 ಪ್ರಯೋಗಾಲಯಗಳು ದಿನಕ್ಕೆ 15,000 ಟೆಸ್ಟ್ ನಡೆಸುವ ಸಾಮರ್ಥ್ಯವನ್ನು ಹೊಂದಿವೆ, ಮತ್ತು 47 ಖಾಸಗಿ ಪ್ರಯೋಗಾಲಯಗಳು ಸಹ ಈ ಪರೀಕ್ಷೆ ನಡೆಸಲಿದೆ ಎಂದು ಮೆಹ್ತಾ ವಾದಿಸಿದರು.

ಕೊರೋನಾ ಪರೀಕ್ಷೆಗಳಿಗೆ ಪ್ರಯೋಗಾಲಯಗಳು ಹಣ ವಿಧಿಸಲು ಅವಕಾಶ ಕಲ್ಪಿಸಬಾರದು ಎಂದು ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.ಖಾಸಗಿ ಸಂಸ್ಥೆಗಳಿಂದ ಕರೋನಾ ಪರೀಕ್ಷೆಗೆ ಗರಿಷ್ಠ 4,500 ರೂಗಳನ್ನು ನಿಗದಿಪಡಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಲಹೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.

ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಲ್ಲಿ ಎಲ್ಲಾ ನಾಗರಿಕರಿಗೆ ಉಚಿತ ಕೊವಿಡ್-19 ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ಉಚಿತ ಪರೀಕ್ಷೆ ನಡೆಸುವಂತೆ ಸರ್ಕಾರದಿಂದ ಅನುಮತಿ ಪಡೆದ ಖಾಸಗಿ ಪ್ರಯೋಗಾಲಯಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ.

English summary
In a big relief to the common people, the Supreme Court on Wednesday directed that private labs should conduct coronavirus tests free of cost, observing they need to be philanthropic in the hour of national crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X