ವಿಜಯ್ ಮಲ್ಯ ಗಡಿಪಾರು ವಿಳಂಬಕ್ಕೆ 'ರಹಸ್ಯ' ಕಾರಣ
ನವದೆಹಲಿ, ನವೆಂಬರ್ 20: ದೇಶಭ್ರಷ್ಟ ಅರ್ಥಿಕ ಅಪರಾಧಿ ಎಂಬ ಹಣೆಪಟ್ಟಿ ಹೊತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಮರಳಿ ಕರೆತರುವ ಪ್ರಯತ್ನಕ್ಕೆ ಪದೇ ಪದೇ ಹಿನ್ನಡೆಯಾಗುತ್ತಿದೆ. ಲಂಡನ್‌ನಲ್ಲಿರುವ ವಿಜಯ್ ಮಲ್ಯ, ತಮ್ಮನ್ನು ಭಾರತಕ್ಕೆ ಗಡಿಪಾರು ಮಾಡದಂತೆ ಅಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಬ್ಯಾಂಕುಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಪರಾರಿಯಾದ ಮಲ್ಯ ಅವರ ಗಡಿಪಾರಿಗೆ 'ಗೋಪ್ಯ ಕಾನೂನು ಸಮಸ್ಯೆ' ಒಂದು ಅಡ್ಡಿಪಡಿಸುತ್ತಿದೆ ಎಂದು ಭಾರತದ ಅಧಿಕಾರಿಗಳು ಹೇಳಿದ್ದಾರೆ.
'ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು ಒಂದು ರಹಸ್ಯ ಕಾನೂನು ಸಮಸ್ಯೆಯಿದ್ದು, ಅದನ್ನು ಬಗೆಹರಿಸಬೇಕಿದೆ ಎಂದು ನಮಗೆ ತಿಳಿಸಲಾಗಿದೆ. ಅದನ್ನು ಪರಿಹರಿಸಲು ನಮಗೆ ಯಾವುದೇ ನಿರ್ದಿಷ್ಟ ಕಾಲಾವಧಿಯನ್ನು ಹೇಳಿಲ್ಲ. ಹೀಗಾಗಿ ಬ್ರಿಟನ್ ಅಧಿಕಾರಿಗಳ ಜತೆಗೆ ಈ ವಿಚಾರವಾಗಿ ಚರ್ಚೆ ನಡೆಸುವುದನ್ನು ಮುಂದುವರಿಸಲಿದ್ದೇವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

ಈ ಹಿಂದೆ ಇದ್ದ ಕಿಂಗ್ ಫಿಶರ್ ಏರ್‌ಲೈನ್ಸ್‌ಗಾಗಿ ವಿಜಯ್ ಮಲ್ಯ ಸುಮಾರು 9,000 ಕೋಟಿ ರೂ. ಸಾಲ ಪಡೆದಿದ್ದರು. ಆದರೆ ಅದನ್ನು ಮರಳಿಸಿರಲಿಲ್ಲ. ಈ ಕುರಿತು ತಮ್ಮ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಮುನ್ಸೂಚನೆ ಅರಿತ ಮಲ್ಯ ಅವರು ಪರಾರಿಯಾಗಿದ್ದರು. 2016ರ ಮಾರ್ಚ್ ತಿಂಗಳಿನಿಂದ ಅವರು ಬ್ರಿಟನ್‌ನಲ್ಲಿದ್ದು, ಭಾರತಕ್ಕೆ ತಮ್ಮನ್ನು ಗಡಿಪಾರು ಮಾಡುವುದರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
64 ವರ್ಷದ ಉದ್ಯಮಿ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಬ್ರಿಟನ್ ಕೋರ್ಟ್ ಮೇ ತಿಂಗಳಲ್ಲಿ ಆದೇಶಿಸಿತ್ತು. ಆದರೆ ಬ್ರಿಟನ್ ಕೈಗೊಂಡಿರುವ ರಹಸ್ಯ ವಿಚಾರಣೆಗಳ ಕಾರಣದಿಂದ ಅವರ ಗಡಿಪಾರು ವಿಳಂಬವಾಗುತ್ತಿದೆ ಎಂದು ಸುಪ್ರೀಂಕೋರ್ಟ್‌ಗೆ ಸರ್ಕಾರ ಕಳೆದ ತಿಂಗಳು ತಿಳಿಸಿತ್ತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications