ಗುಜರಾತ್: ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

Subscribe to Oneindia Kannada

ನವದೆಹಲಿ, ನವೆಂಬರ್ 27: ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಭಾನುವಾರ ರಾತ್ರಿ ತನ್ನ ಅಭ್ಯರ್ಥಿಗಳ 3ನೇ ಪಟ್ಟಿ ಹಾಗೂ ಇಂದು 4ನೇ ಪಟ್ಟಿ ಬಿಡುಗಡೆಗೊಳಿಸಿದೆ.

ಗುಜರಾತ್ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸಿನಿಂದ 40 ತಾರಾ ಪ್ರಚಾರಕರು

ಡಿಸೆಂಬರ್ 14ರಂದು ಗುಜರಾತ್ ನಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಬಿಡುಗಡೆಗೊಳಿಸಿವೆ.

ಗುಜರಾತ್ ಕಾಂಗ್ರೆಸ್ ನಿಂದ 13 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

Cong releases 3rd list of 76 candidates and 4th list of 17 candidates for Gujarat polls

ನಿನ್ನೆ ರಾತ್ರಿ ಬಿಡುಗಡೆಗೊಳಿಸಲಾದ ಪಟ್ಟಿಯಲ್ಲಿ 76 ಅಭ್ಯರ್ಥಿಗಳು ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿದ್ದಾರೆ. ಇಂದು ಬಿಡುಗಡೆಗೊಳಿಸಲಾದ ಪಟ್ಟಿಯಲ್ಲಿ 15 ಜನರಿಗೆ ಟಿಕೆಟ್ ನೀಡಲಾಗಿದ್ದು ಮಿತ್ರ ಪಕ್ಷ ಭಾರತೀಯ ಟ್ರೈಬಲ್ ಪಾರ್ಟಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಗುಜರಾತ್: ಕಾಂಗ್ರೆಸ್ ನಿಂದ 77 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಡಿಸೆಂಬರ್ 9ರಂದು ನಡೆಯಲಿದ್ದು, 89 ಕ್ಷೇತ್ರಗಳಲ್ಲಿ ಜನರು ಮತಚಲಾಯಿಸಲಿದ್ದಾರೆ. ಎರಡನೇ ಹಂತದಲ್ಲಿ ಡಿಸೆಂಬರ್ 14ರಂದು 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Congress released its third and fourth list of 76 and 17 candidates respectively for the second phase of the Gujarat Assembly election, filing of nominations for which ends tomorrow.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ