ರಾಜಸ್ಥಾನ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್‌ನ 7 ಗ್ಯಾರಂಟಿಗಳ ಆಟ
ಜೈಪುರ, ನವೆಂಬರ್ 8: ನವೆಂಬರ್ 25, 2023 ರಂದು ರಾಜಸ್ಥಾನ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ನಡೆಯುತ್ತಿದ್ದು, ರಾಜ್ಯದಲ್ಲಿ ರಾಜಕೀಯ ವಾತಾವರಣವು ಕಾವೇರುತ್ತಿದೆ. 200 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಪಕ್ಷವು ಎರಡನೇ ಅವಧಿಗೆ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಗೆಹ್ಲೋಟ್ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ 7 ಅಂಶಗಳ ಕಾರ್ಯಸೂಚಿಯನ್ನು ವಿವರಿಸಿದರು.

ಪ್ರತಿಸ್ಪರ್ಧಿ ಪಕ್ಷವಾದ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ ಗೆಹ್ಲೋಟ್, ಆಂತರಿಕ ಭಿನ್ನಾಭಿಪ್ರಾಯದಿಂದ ಬಿಜೆಪಿ ಸೆಣಸಾಡುತ್ತಿದ್ದು, ಚುನಾವಣೆಗಳಿಗೆ ಸ್ಪಷ್ಟವಾದ ಕಾರ್ಯಸೂಚಿಯನ್ನು ಹೇಳುವಲ್ಲಿ ವಿಫಲರಾಗಿದ್ದಾರೆ. ರಾಜ್ಯ ಎದುರಿಸುತ್ತಿರುವ ನಿಜವಾದ ಸಮಸ್ಯೆಗಳ ಬಗ್ಗೆ ಅವರಿಗೆ ತಿಳುವಳಿಕೆ ಇಲ್ಲ ಎಂದು ಅವರು ಆರೋಪಿಸಿದರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ 7 ಮಹತ್ವದ ಗ್ಯಾರಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್ ಸರ್ಕಾರವು ಚುನಾವಣೆಯ ನಂತರ ಅಧಿಕಾರ ಹಿಡಿದರೆ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸುವ ಮೂಲಕ ಈ ಭರವಸೆಗಳ ಮುಂದುವರೆಸಲಾಗುತ್ತದೆ. ನಮ್ಮ ಯೋಜನೆಗಳು ರಾಜಸ್ಥಾನದಾದ್ಯಂತ ಒಂದು ಸಾವಿರ ಗ್ಯಾರಂಟಿ ಶಿಬಿರಗಳನ್ನು ಸ್ಥಾಪಿಸುತ್ತದೆ, ಇದು ಎರಡು ಕೋಟಿ ವ್ಯಕ್ತಿಗಳನ್ನು ತಲುಪುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.
ರಾಜಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಏಳು ಗ್ಯಾರಂಟಿಗಳು
1. ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ವಾರ್ಷಿಕ 10,000 ರೂ.
2. 1.05 ಕೋಟಿ ಕುಟುಂಬಗಳಿಗೆ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್.
3. ಪ್ರತಿ ಕಿಲೋಗ್ರಾಂಗೆ 2 ರೂ.ನಂತೆ ದನದ ಸಗಣಿ ಖರೀದಿ.
4. ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ.
5. ಸರ್ಕಾರಿ ಕಾಲೇಜುಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್‌ಗಳ ವಿತರಣೆ.
6. ನೈಸರ್ಗಿಕ ವಿಕೋಪಗಳಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ರೂ 15 ಲಕ್ಷದವರೆಗೆ ವಿಮಾ ರಕ್ಷಣೆ.
7. ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ.

ಬಿಜೆಪಿಯು ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ ಗೆಹ್ಲೋಟ್, ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರವು ರಾಜ್ಯದ ನೈಜ ಸಮಸ್ಯೆಗಳ ಮೇಲೆ ಕೇಂದ್ರೀಕರಿಸಬೇಕು. ನಾವು ಜಾರಿ ನಿರ್ದೇಶನಾಲಯದ (ಇಡಿ) ದಾಳಿಗಳಿಗಾಗಿ ಹೆದರುವುದಿಲ್ಲ. ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲು ಮೋದಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
"ಅವರು ಇಡಿ ಹೊಂದಿದ್ದಾರೆ, ನಮಗೆ ಏಳು ಗ್ಯಾರಂಟಿಗಳಿವೆ. ಈ ಹಿಂದೆ ಕಾಂಗ್ರೆಸ್ ನಾಯಕತ್ವವನ್ನು 'ರಾಷ್ಟ್ರವಿರೋಧಿ' ಮತ್ತು 'ಸ್ವಾರ್ಥಿ' ಎಂಬ ಹಣೆಪಟ್ಟಿ ಕಟ್ಟಿದ್ದ ಬಿಜೆಪಿ ರಾಜವರ್ಧನ್ ಸಿಂಗ್ ರಾಥೋಡ್ ಅವರ ಸ್ವಂತ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಅವರ ಪ್ರಚಾರಕ್ಕೆ ಬೆಂಬಲವನ್ನು ಪಡೆಯಲು ಹಾಗೂ ಏಳು ಖಾತರಿಗಳು ಮತದಾರರಲ್ಲಿ ಚಿರಪರಿಚಿತವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಗೆಹ್ಲೋಟ್ ಅವರು ರಾಜಸ್ಥಾನದಲ್ಲಿ ರೋಡ್‌ಶೋ ಅನ್ನು ಆಯೋಜಿಸಿದ್ದರು. ಮುಂಬರುವ ಚುನಾವಣೆಯಲ್ಲಿ ನಾವು ಖಚಿತವಾಗಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications