ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gujarat Assembly Elections 2022: ಪ್ರಾಯೋಜಿತ ಸಮೀಕ್ಷೆ ವಿರುದ್ಧ ಕಠಿಣ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯ

|
Google Oneindia Kannada News

ನವದೆಹಲಿ, ನವೆಂಬರ್‌ 30: ನಾಳೆ (ಡಿಸೆಂಬರ್‌ 01) ಗುಜರಾತ್‌ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಬಾರಿ ಗುಜರಾತ್‌ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷಗಳು ತೀವ್ರ ಪೈಪೋಟಿಗೆ ಇಳಿದಿವೆ. ಸಮೀಕ್ಷೆಗಳ ಪ್ರಕಾರ, ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್‌ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ. ಎಎಪಿ ಮೂರನೇ ಸ್ಥಾನವನ್ನು ಕಾಪಾಡಿಕೊಳ್ಳಲಿದೆ.

ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾಗೆ ಹೆಚ್ಚಿದ ಸಂಕಷ್ಟಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾಗೆ ಹೆಚ್ಚಿದ ಸಂಕಷ್ಟ

ಪ್ರಾಯೋಜಿತ ಸಮೀಕ್ಷೆ ಬೇಡವೆಂದ ಕಾಂಗ್ರೆಸ್‌

ಪ್ರಾಯೋಜಿತ ಸಮೀಕ್ಷೆ ಬೇಡವೆಂದ ಕಾಂಗ್ರೆಸ್‌

ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನ 'ಪ್ರಾಯೋಜಿತ' ಸಮೀಕ್ಷೆಗಳು ಹೊರಬರುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ಸಲ್ಲಿಸಿದೆ.

ಪ್ರಾಯೋಜಿತ ಅಭಿಪ್ರಾಯ ಸಂಗ್ರಹಗಳನ್ನು ಪ್ರಸಾರ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಒತ್ತಾಯಿಸಿದೆ. ಇದು ಮತದಾರರ ಮೇಲೆ ಪ್ರಭಾವ ಬೀರುವ ದುರುಳ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಗುಜರಾತ್‌ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ

ಗುಜರಾತ್‌ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ

ಈ ಸಾರಿಯ ಗುಜರಾತ್‌ ಚುನಾವಣೆಯಲ್ಲಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿದೆ. ಕೊನೆಯ ಸಾರಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ದೆಹಲಿ ಹಾಗೂ ಪಂಜಾಬ್‌ನಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿರುವ ಆಮ್‌ ಆದ್ಮಿ ಪಕ್ಷವು(ಎಎಪಿ) ಈ ಸಾರಿಯ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ. ಇದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.

ಬೆಲೆ ಏರಿಕೆ, ಶಾಲೆ, ಶಿಕ್ಷಣ, ಕುಡಿಯುವ ನೀರು, ವಿದ್ಯುತ್‌ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ವಿಚಾರಗಳನ್ನು ಎಎಪಿ ಮುನ್ನೆಲೆಗೆ ತಂದಿದೆ. ಮೋರ್ಬಿ ದುರಂತವನ್ನು ಎಎಪಿ ಚುನಾವಣಾ ಅಸ್ತ್ರವಾಗಿ ಬಳಸುತ್ತಿದೆ. ಈಗಾಗಲೇ ಹಲವು ಉಚಿತ ಕೊಡುಗೆ ನೀಡುವ ಭರವಸೆಗಳನ್ನು ಎಎಪಿ ನೀಡಿದೆ. ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗುಜರಾತ್‌ನಲ್ಲಿ ಗೆಲ್ಲುವ ಭರವಸೆ ನೀಡಿದ್ದಾರೆ. ಆದರೆ, ಚುನಾವಣಾ ಸಮೀಕ್ಷೆಗಳ ಪ್ರಕಾರ, ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ.

ನಗರ ಕೇಂದ್ರಿತ ಮತದಾರರ ಮೇಲೆ ಎಎಪಿ ಕಣ್ಣು

ನಗರ ಕೇಂದ್ರಿತ ಮತದಾರರ ಮೇಲೆ ಎಎಪಿ ಕಣ್ಣು

ಬಿಜೆಪಿ ನೆಚ್ಚಿಕೊಂಡಿರುವ ನಗರ ಭಾಗದ ಮತದಾರರ ಮೇಲೆ ಎಎಪಿ ಕಣ್ಣಿಟ್ಟಿದೆ. ಗುಜರಾತ್‌ನ ನಗರ ಭಾಗದ ಜನರು ಬಿಜೆಪಿ ಜೊತೆಗಿರುವುದು ಸ್ಪಷ್ಟವಾಗಿತ್ತು. ಆದರೆ, ಈಗ ಎಎಪಿ ಕಡೆಗೆ ನಗರ ಭಾಗದ ಜನರು ವಾಲುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಗುಜರಾತ್‌ನ ಹಳ್ಳಿಗಳಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಅದು ಮೌನ ಪ್ರಚಾರದಲ್ಲಿ ತೊಡಗಿಕೊಂಡಿದೆ. ಆದರೆ, ಎಎಪಿ ಮಾತ್ರ ಬಿಜೆಪಿಯ ವೋಟ್‌ ಬ್ಯಾಂಕ್‌ ಮೇಲೆ ದಾಳಿ ಮಾಡುವ ಯತ್ನ ನಡೆಸಿದೆ. ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಮೋದಿ ವರ್ಚಸ್ಸು ಹಾಗೂ ಹಿಂದುತ್ವವನ್ನು ನೆಚ್ಚಿಕೊಂಡಿರುವ ಬಿಜೆಪಿಯು ಎಎಪಿ ವಿರುದ್ಧ ಹೋರಾಡಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಡಿಸೆಂಬರ್‌ 8ಕ್ಕೆ ಗುಜರಾತ್‌ ವಿಧಾನಸಭಾ ಫಲಿತಾಂಶ

ಡಿಸೆಂಬರ್‌ 8ಕ್ಕೆ ಗುಜರಾತ್‌ ವಿಧಾನಸಭಾ ಫಲಿತಾಂಶ

ಗುಜರಾತ್‌ ವಿಧಾನಸಭೆಗೆ ಎರಡು ಹಂತದಲ್ಲಿ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಡಿಸೆಂಬರ್‌ 1 ಹಾಗೂ 5ರಂದು ಮತದಾನ ನಡೆಯಲಿದೆ. ಡಿಸೆಂಬರ್‌ 8ರಂದು ಫಲಿತಾಂಶ ಹೊರಬರಲಿದೆ. ಅದೇ ದಿನದಂದು ಹಿಮಾಚಲ ಪ್ರದೇಶ ವಿಧಾನಸಭೆಯ ಫಲಿತಾಂಶವೂ ಪ್ರಕಟಗೊಳ್ಳಲಿದೆ.

English summary
The Congress has alleged that 'sponsored' polls are coming out ahead of the first phase of Gujarat assembly polls. Congress has filed a complaint to the Election Commission against this. The Congress has urged the Election Commission to take strict action against the dissemination of sponsored opinion polls. The Congress has alleged that this is a nefarious attempt to influence the voters,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X