Jammu & Kashmir: ನ್ಯಾಷನಲ್ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಕಾಂಗ್ರೆಸ್, ಎಎಪಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಈಗ ಸುಲಭವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ನ್ಯಾಷನಲ್ ಕಾನ್ಫರೆನ್ಸ್‌ಗೆ ಪಕ್ಷೇತರ ಶಾಸಕರು ಬೆಂಬಲ ಕೊಟ್ಟ ಬಳಿಕ ಸರಳ ಬಹುಮತ ಪಡೆದುಕೊಂಡಿತ್ತು. ಚುನಾವಣೆಗೂ ಮೊದಲ ಎನ್‌ಸಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಈಗ ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷ ಕೂಡ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿವೆ.
ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎನ್‌ಸಿಗೆ ಕಾಂಗ್ರೆಸ್ ಮತ್ತು ಎಎಪಿ ಬೆಂಬಲ ಸೂಚಿಸಿವೆ. 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷದ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ, ಜಂಟಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿತ್ತು.

ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಮ್ಮು ಮತ್ತು ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್‍ರಾ ಸೇರಿದಂತೆ ಎಲ್ಲಾ ಆರು ಶಾಸಕರು ಭಾಗವಹಿಸಿದ್ದರು. ಶಾಸಕರು ನಿರ್ಣಯವನ್ನು ಅಂಗೀಕರಿಸಿದ್ದು, ಎನ್‌ಸಿಗೆ ಬೆಂಬಲ ನೀಡುವ ಪತ್ರಗಳಿಗೆ ಸಹಿ ಹಾಕಿದರು.
ಒಮರ್ ಅಬ್ದುಲ್ಲಾ ಮುಖ್ಯಮಂತ್ರಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 49 ಸ್ಥಾನಗಳನ್ನು ಗೆಲ್ಲುವ ಬಹುಮತ ಪಡೆದುಕೊಂಡಿತ್ತು. ಇದರಲ್ಲಿ ಎನ್‌ಸಿ 42 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆದ್ದಿತ್ತು. ಗುರುವಾರ ನಡೆದ ಎನ್‌ಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಲಾಗಿತ್ತು.
ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಮಾಡಿದೆ. ನನ್ನ ಮೇಲೆ ನಂಬಿಕೆ ಇಟ್ಟು ರಾಜಭವನಕ್ಕೆ ಹೋಗಿ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ನನಗೆ ಅವಕಾಶ ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಶಾಸಕರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಬೆಂಬಲ ಕೊಡುವ ಬಗ್ಗೆ ಮಾತನಾಡಿದ್ದ ಅವರು, ಕಾಂಗ್ರೆಸ್‌ನಿಂದ ಬೆಂಬಲ ಪತ್ರ ಪಡೆಯಲು ಮಾತುಕತೆ ನಡೆಯುತ್ತಿದೆ. ನಾಲ್ವರು ಪಕ್ಷೇತರ ಶಾಸಕರು ಕೂಡ ನಮಗೆ ಬೆಂಬಲ ಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಈಗ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ)ಗೆ ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಬೆಂಬಲ ನೀಡಿದೆ. ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದು, ಎನ್‌ಸಿಗೆ ಬೆಂಬಲ ಕೊಡುವುದಾಗಿ ಹೇಳಿದೆ. ದೋಡಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮೆಹರಾಜ್ ಮಲಿಕ್ ಬಿಜೆಪಿಯ ಗಜಯ್ ಸಿಂಗ್ ರಾಣಾ ವಿರುದ್ಧ 4538 ಮತಗಳಿಂದ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದಾರೆ.












Click it and Unblock the Notifications