Jharkhand Election: ಜಾರ್ಖಂಡ್ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಜಾರ್ಖಂಡ್ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದೆ ಮೊದಲ ಹಂತದ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು ಅಭ್ಯರ್ಥಿಗಳ ನಡುವೆ ವಾಕ್ಸಮರ ನಡೆಯುತ್ತಿದೆ. ಕಾಂಗ್ರೆಸ್, ಜೆಎಂಎಂ ಸೇರಿದಂತೆ ಹಲವು ಪಕ್ಷಗಳು ಇಂಡಿಯಾ ಒಕ್ಕೂಟದಡಿ ಸ್ಪರ್ಧೆ ಮಾಡಿವೆ. ಎನ್‌ಡಿಎ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿದ್ದು, ಜೆಎಂಎಂ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಇದೀಗ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿರುವ ಕಾಂಗ್ರೆಸ್ ತನ್ನ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಬೊಕಾರೊ ಕ್ಷೇತ್ರದಿಂದ ಶ್ವೇತಾ ಸಿಂಗ್ ಮತ್ತು ಧನ್ಬಾದ್‌ನಿಂದ ಅಜಯ್ ದುಬೆ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಇಂದೇ (ಅಕ್ಟೋಬರ್ 29) ಕೊನೆಯ ದಿನವಾಗಿದ್ದು, ಕೊನೆಯ ಕ್ಷಣದಲ್ಲಿ ಪಟ್ಟಿ ಬಿಡುಗಡೆ ಮಾಡಿದೆ.

Congress Announces Final Candidate List for Jharkhand Assembly Elections

ಶ್ವೇತಾ ಸಿಂಗ್ ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ಬೊಕಾರೊದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು, ಬಿಜೆಪಿ ಅಭ್ಯರ್ಥಿ ಬಿರಾಂಚಿ ನಾರಾಯಣ್ ಇಲ್ಲಿ 10,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಶ್ವೇತಾ ಸಿಂಗ್ ರಾಜಕೀಯ ಕುಟುಂಬದಿಂದಲೇ ಬಂದವರು ಬೊಕಾರೊ ಮಾಜಿ ಶಾಸಕ ಮತ್ತು ಜಾರ್ಖಂಡ್‌ ಪ್ರಮುಖ ರಾಜಕೀಯ ನಾಯಕರಾಗಿದ್ದ ದಿವಂಗತ ಸಮರೇಶ್ ಸಿಂಗ್ ಅವರ ಸೊಸೆ. ಇದೀಗ ಮತ್ತೊಮ್ಮೆ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಧನ್‌ಬಾದ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಜಯ್ ದುಬೆ ಅವರು ಸುದೀರ್ಘ ಕಾಲದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಪಕ್ಷದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿರುವ ಅವರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಧನ್‌ಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದರೆ ಬಿಜೆಪಿಯ ಪಿ.ಎನ್. ಸಿಂಗ್ 2.92 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದರು.

30 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ

ಕಾಂಗ್ರೆಸ್ ಜಾರ್ಖಂಡ್‌ನಲ್ಲಿ 30 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಮೊದಲ ಪಟ್ಟಿಯಲ್ಲಿ 21 ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿತ್ತು. ಇನ್ನು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೊನೆಯ ಕ್ಷಣದಲ್ಲಿ ಘೋಷಣೆ ಮಾಡಿದೆ. ಇಂದು (ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಸೋಮವಾರ ತಡರಾತ್ರಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

ಕಾಂಗ್ರೆಸ್ ಜಾರ್ಖಂಡ್‌ನಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಬರ್ಹಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮಾಶಂಕರ್ ಅಕೇಲಾ ಅವರಿಗೆ ಕಾಂಗ್ರೆಸ್‌ ಟಿಕೆಟ್ ಕೊಡದ ಹಿನ್ನಲೆಯಲ್ಲಿ ಅವರು ಸಮಾಜವಾದಿ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ಜಾರ್ಖಂಡ್ ವಿಧಾನಸಭೆಯ 81 ಸ್ಥಾನಗಳಿಗೆ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+