• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಐಸಿಸಿ ಸಾಮಾಜಿಕ ಜಾಲತಾಣ: ರಮ್ಯಾ ಜಾಗಕ್ಕೆ ರೋಹನ್ ಗುಪ್ತಾ ನೇಮಕ

|

ಬೆಂಗಳೂರು, ಸೆಪ್ಟೆಂಬರ್ 28: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ರೋಹನ್ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಸಂಸದೆ ನಟಿ ರಮ್ಯಾ ಅವರಿದ್ದ ಜಾಗಕ್ಕೆ ರೋಹನ್ ಅವರನ್ನು ಆಯ್ಕೆ ಮಾಡಲಾಗಿದೆ.

ಉಪಚುನಾವಣೆ ಟಿಕೆಟ್ ಅಂತಿಮಕ್ಕೆ ರಾಜ್ಯಕ್ಕೆ ಕೈ ನಾಯಕರು

ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಗುಜರಾತಿನ ಅಹಮದಾಬಾದ್ ನವರಾಗಿದ್ದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಜಕೀಯ ಉತ್ಸಾಹಿ, ಉದ್ಯಮಿ, ಪ್ರೇರಕ, ತಂದೆ, ಟ್ವೀಟ್‍ಗಳು ಕಟ್ಟುನಿಟ್ಟಾಗಿ ವೈಯಕ್ತಿಕವಾಗಿವೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆಯನ್ನು ಬೇರೆಯವರ ಕೈಗೊಪ್ಪಿಸಿದೆ. ಈಗ ಕಾಂಗ್ರೆಸ್ ಹೈಕಮಾಂಡ್ ತಳಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಿದೆ.

ಆರ್ಥಿಕ ಹಿಂಜರಿತದ ವಿರುದ್ಧ ರಾಷ್ಟ್ರಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ನಿಂದ ಪಕ್ಷಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ರಮ್ಯಾ ಅವರನ್ನು ತೆಗೆದು ಹಾಕಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಮ್ಯಾ ಹೆಸರಿದ್ದರೂ ಕೂಡ ಚುನಾವಣೆ ವೇಳೆ ಕರ್ನಾಟಕಕ್ಕೆ ಬಂದಿರಲಿಲ್ಲ ಎನ್ನುವುದೂ ಕೂಡ ಒಂದು ಕಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Congress President Has Appointed Rohan Gupta As Chaiman of Social Media Department,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X