ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆದರಿಕೆ ಹಾಕುತ್ತಿರುವವರ ಹೆಸರು ತಿಳಿಸಿ: ಪೂನಾವಾಲಾಗೆ ಕಾಂಗ್ರೆಸ್ ಒತ್ತಾಯ

|
Google Oneindia Kannada News

ನವದೆಹಲಿ, ಮೇ 03: ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗ ಪಡಿಸಿ ಎಂದು ಸೆರಂ ಸಂಸ್ಥೆ ಮುಖ್ಯಸ್ಥ ಅದಾರ್ ಪೂನಾವಾಲಾಗೆ ಕಾಂಗ್ರೆಸ್ ಒತ್ತಾಯ ಮಾಡಿದೆ.

ಲಸಿಕೆ ಉತ್ಪಾದನೆ ವಿಚಾರವಾಗಿ ಪ್ರಭಾವಿಗಳಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಹೇಳಿ ವಿದೇಶಕ್ಕೆ ಹೋಗಿ ನೆಲೆಸಿದ್ದಾರೆ. ಈ ಕುರಿತು ಹೆಸರು ಬಹಿರಂಗ ಪಡಿಸಿ ನಿಮಗೆ ಭದ್ರತೆಯನ್ನು ನಾವು ನೀಡುತ್ತೇವೆ ಎಂದು ಹೇಳಿದ್ದಾರೆ.

ಸೆರಂ ಮುಖ್ಯಸ್ಥ ಅದಾರ್ ಪೂನಾವಾಲಾಗೆ ಪ್ರಭಾವಿಗಳಿಂದ ಬೆದರಿಕೆ ಕರೆಸೆರಂ ಮುಖ್ಯಸ್ಥ ಅದಾರ್ ಪೂನಾವಾಲಾಗೆ ಪ್ರಭಾವಿಗಳಿಂದ ಬೆದರಿಕೆ ಕರೆ

ಈ ಸಂಬಂಧ ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು, ಲಸಿಕೆ ವಿಚಾರವಾಗಿ ಬೆದರಿಕೆ ಹಾಕುತ್ತಿರುವವರ ಹೆಸರನ್ನು ಸಾರ್ವಜನಿಕಗೊಳಿಸುವಂತೆ ಪೂನವಾಲಗೆ ಒತ್ತಾಯಿಸಿದ್ದಾರೆ. ಅಂತೆಯೇ ನಿಮ್ಮ ಸುರಕ್ಷತೆಗಾಗಿ ಕಾಂಗ್ರೆಸ್ ಪಕ್ಷವು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

Congress Assures Security To Adar Poonawalla, Urges Him To Name Leaders Who Made Threat Calls

ಅವರ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ತೆಗೆದುಕೊಳ್ಳುತ್ತದೆ. ಆದರೆ ಬೆದರಿಕೆ ಹಾಕಿದ ನಾಯಕರು ಯಾರು ಎಂದು ಅವರು ಸಾರ್ವಜನಿಕವಾಗಿ ತಿಳಿಸಬೇಕು. ಅವರು ಫೋನ್‌ನಲ್ಲಿ ನನಗೆ ಬೆದರಿಕೆ ಹಾಕಲಾಗಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದರು.

ಅವರು ಬೆದರಿಕೆ ಕರೆ ಸ್ವೀಕರಿಸಿದ ವ್ಯಕ್ತಿಯ ಹೆಸರನ್ನು ಅವರು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ನಿನ್ನೆಯಷ್ಟೇ ಬ್ರಿಟನ್ ನಿಂದಲೇ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಅದಾರ್ ಪೂನಾವಾಲಾ, ಲಸಿಕೆ ವಿಚಾರವಾಗಿ ತಮ್ಮ ಮೇಲೆ ಅತೀವ ಒತ್ತಡ ಮತ್ತು ಬೆದರಿಕೆಗಳಿವೆ.

ಈ ಪರಿಸ್ಥಿತಿಯಲ್ಲಿ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ನೋವು ತೋಡಿಕೊಂಡಿದ್ದರು. ಈ ವಿಚಾರ ಇದೀಗ ದೇಶಾದ್ಯಂತ ವ್ಯಾಪಕ ವೈರಲ್ ಆಗುತ್ತಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷ ಕೂಡ ಪ್ರತಿಕ್ರಿಯೆ ನೀಡಿದೆ.

ದೀಗ ಕೋವಿಶೀಲ್ಡ್ ಲಸಿಕೆ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡುವ ನಿರ್ಧಾರದೊಂದಿಗೆ ಅವರು ಶೀಘ್ರ ಭಾರತಕ್ಕೆ ವಾಪಾಸ್ಸಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಹಿಂದೆ ಭಾರತದಲ್ಲಿರುವ ಕೆಲವು ಪ್ರಭಾವಿ ವ್ಯಕ್ತಿಗಳು ಕೋವಿಶೀಲ್ಡ್ ಲಸಿಕೆಗಳನ್ನು ಸರಬರಾಜು ಮಾಡುವಂತೆ ಪೂನಾವಾಲ ಅವರ ಮೇಲೆ ಭಾರಿ ಒತ್ತಡ ಹೇರಿದ್ದರು ಎನ್ನಲಾಗಿದೆ.

ಹೀಗಾಗಿ ಸರ್ಕಾರ ಅವರಿಗೆ ವೈ ಶ್ರೇಣಿ ಭದ್ರತೆ ನೀಡಿತ್ತು. ದಿನೇ ದಿನೇ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಪೂನಾವಾಲ ಅವರು ತಮ್ಮ ಕುಟುಂಬ ಸಮೇತ ಇಂಗ್ಲೆಂಡ್ ತೆರಳಿದ್ದರು.

English summary
A day after Adar Poonawalla, the CEO of Serum Institute Of India reportedly said that the received threats from powerful people for the delivery of vaccines, Maharashtra congress urged to make names of those leaders public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X