ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ; ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ

ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ಮಾಡುವ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಭಾರಿ ಗದ್ದಲಕ್ಕೆ ಕಾರಣವಾಗಿದೆ. 'ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಷನ್ ಆಗಿದ್ದು, ಇದರ ಬದಲು ದೇವರ ಜಪ ಮಾಡಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು' ಎಂದು ಅಮಿತ್ ಶಾ ಹೇಳಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಗುರುವಾರ ಲೋಕಸಭೆಯಲ್ಲಿ ಗದ್ದಲ ಮುಂದುವರೆದಿದೆ.

ಗುರುವಾರ ಸಂಸತ್ ಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಬಳಿ ಸೇರಿದ ಇಂಡಿಯಾ ಒಕ್ಕೂಟದ ಸಂಸದರು ಅಮಿತ್ ಶಾ ವಿರುದ್ಧ ಪ್ರತಿಭಟನೆ ಮಾಡಿದರು. ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಅಮಿತ್ ಶಾ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

congress bjp showdown amit shah br ambedkar parliament

ಬುಧವಾರ ಅಮಿತ್ ಶಾ ಹೇಳಿಕೆ ನೀಡುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾಗಿತ್ತು. ಪ್ರತಿಪಕ್ಷಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಉಭಯ ಸದನಗಳನ್ನು ಮುಂದೂಡಲಾಗಿತ್ತು. ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಆರೋಪಗಳಿಗೆ ಉತ್ತರ ನೀಡಿರುವ ಅಮಿತ್, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ. ನಾನು ಮಾತನಾಡಿರುವ ಪೂರ್ತಿ ವಿಡಿಯೋ ಹಾಕದೆ ತುಣುಕುಗಳನ್ನು ಮಾತ್ರ ಹಂಚಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಒಂದು ಕಡೆ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಬಿಜೆಪಿ ಸಂಸದರು ಕೂಡ ಕಾಂಗ್ರೆಸ್‌ ಡಾ. ಬಿ. ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಿಯಾಂಕ ಗಾಂಧಿ ಆಕ್ರೋಶ

ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಬಿಜೆಪಿಯವರು ಅವಮಾನಾ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದು, ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಕಡೆ ಸ್ಥಾಪನೆ ಮಾಡಲಾಗಿರುವ ಬಾಬಾ ಸಾಹೇಬರ ಪ್ರತಿಮೆಗಳಿಗೆ ಹಾನಿ ಮಾಡುವ ಮನಸ್ಥಿತಿ ಇದೆ. ಇದು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ಬಿಜೆಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೊ ಹಂಚಿಕೊಂಡಿದ್ದು, ಇದರಲ್ಲಿ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ಸಂದರ್ಭದಲ್ಲಿ ಜಾರ್ಜ್ ಸೊರೊಸ್ ಅವರ ಫೋಟೋವನ್ನು ಹಿಡಿದಿರುವಂತೆ ಎಡಿಟ್ ಮಾಡಲಾಗಿದ್ದು, ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+