Haryana Assembly Election 2024 Results: ಹರಿಯಾಣದಲ್ಲಿ ಕಾಂಗ್ರೆಸ್‌ ಸೋಲಿಗೆ ಆಮ್‌ ಆದ್ಮಿ ಪಾರ್ಟಿ ಕಾರಣವಂತೆ

ಹರಿಯಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎನ್ನುವ ಲೆಕ್ಕಾಚಾರ ತಲೆಕೆಳಗಾಗಿದೆ. ಇದೀಗ ಬಿಜೆಪಿ ಹರಿಯಾಣದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸುವಂತ್ತ ದಾಪುಗಾಲು ಇಟ್ಟಿದೆ. ಹರಿಯಾಣದಲ್ಲಿ ಕಾಂಗ್ರೆಸ್‌ ಸೋಲುವುದಕ್ಕೆ ಆಮ್‌ ಆದ್ಮಿ ಪಾರ್ಟಿಯೇ ಕಾರಣ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದೇ ಹೇಳಲಾಗಿತ್ತು. ಆದರೆ, ಇದೀಗ 2 ಗಂಟೆಯ ವರದಿಯ ಪ್ರಕಾಶ ಬಿಜೆಪಿ ಮ್ಯಾಜಿಕ್‌ ನಂಬರ್‌ ಕ್ರಾಸ್‌ ಮಾಡಿದೆ.

ಹರಿಯಾಣದಲ್ಲಿ ನಾವು (ಕಾಂಗ್ರೆಸ್‌) ಸುಲಭವಾಗಿ ಗೆಲ್ಲುತ್ತಿದ್ದೆವು. ಆದರೆ, ಆಮ್‌ ಆದ್ಮಿ ಪಾರ್ಟಿಯಿಂದ ನಾವು ಸೋಲುವಂತಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗುತ್ತಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಮೂರನೇ ಬಾರಿಯೂ ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನಲಾಗಿದೆ. ಚುನಾವಣೆ ಫಲಿತಾಂಶ ತಲೆಕೆಳಗಾಗುತ್ತಿದ್ದಂತೆಯೇ ಆಮ್‌ ಆದ್ಮಿ ಪಾರ್ಟಿಯತ್ತ ಕಾಂಗ್ರೆಸ್‌ ಬೊಟ್ಟು ಮಾಡಿದೆ.

Congress blamed the Aam Aadmi Party for its defeat in Haryana

ಹರಿಯಾಣದಲ್ಲಿ ಆಮ್‌ ಆದ್ಮಿ ಪಾರ್ಟಿಯು ಕಾಂಗ್ರೆಸ್‌ ಪಕ್ಷವನ್ನು ದುರ್ಬಲ ಮಾಡಿದೆ. ಇದು ಇಂಡಿಯಾ ಮೈತ್ರಿಕೂಟಕ್ಕೆ ಮಾಡಿದ ಮೋಸ. ಬಿಜೆಪಿಯನ್ನು ಸೋಲಿಸುವುದಕ್ಕಿಂತ ಆಮ್‌ ಆದ್ಮಿ ಪಾರ್ಟಿಗೆ ಕಾಂಗ್ರೆಸ್‌ ಪಕ್ಷಕ್ಕೆ ಹಾನಿ ಮಾಡುವುದೇ ಮುಖ್ಯ ಉದ್ದೇಶವಾಗಿತ್ತು. ಇದೇ ಕಾರಣಕ್ಕಾಗಿ ಅವರು (ಎಎಪಿ) ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ರಾಜ್ಯಸಭಾ ಸಂಸದರಾದ ಸ್ವಾತಿ ಮಲಿವಾಲ್‌ ಅವರು ಗಂಭೀರ ಆರೋಪ ಮಾಡಿದ್ದಾರೆ.

ಎಎಪಿಯಿಂದ ಮತ ವಿಭಜನೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿ ಇರಿಸಿಕೊಂಡೇ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಹರಿಯಾಣದಲ್ಲಿ ಕಾಂಗ್ರೆಸ್‌ ಪಕ್ಷದ ಮತವನ್ನು ವಿಭಜನೆ ಮಾಡುವುದೊಂದೇ ಎಎಪಿಯ ಉದ್ದೇಶವಾಗಿತ್ತು. ಈ ಮೂಲಕ ವಿರೋಧ ಪಕ್ಷಗಳ ಮೈತ್ರಿ ಒಕ್ಕೂಟಕ್ಕೆ ಎಎಪಿ ಮೋಸ ಮಾಡಿದೆ ಎಂದು ಸ್ವಾತಿ ಮಲಿವಾಲ್‌ ಅವರು ದೂರಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ಎಎಪಿಯ ಉದ್ದೇಶ ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಹಾನಿ ಮಾಡುವುದೇ ಆಗಿದೆ. ಇದೇ ಕಾರಣಕ್ಕೆ ಆಮ್‌ ಆದ್ಮಿ ಪಾರ್ಟಿಯು ವಿನೇಶ್‌ ಫೋಗಟ್‌ ಅವರ ವಿರುದ್ಧವೂ ಅಭ್ಯರ್ಥಿಯನ್ನು ನಿಲ್ಲಿಸಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಸಮಯವಿದೆ. ನಿಮ್ಮ ಅಹಂಕರಾವನ್ನು ಬಿಟ್ಟು ಬಿಡಿ ಎಂದು ಆಮ್‌ ಆದ್ಮಿ ಪಾರ್ಟಿಗೆ ಹೇಳಿದ್ದಾರೆ. ಅಲ್ಲದೇ ಮುಖ್ಯವಾಗಿ ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಎಎಪಿಯಿಂದಲೇ ಮತ ವಿಭಜನೆಯಾಗಿದೆ ಎಂದು ಆರೋಪಿಸಿದ್ದಾರೆ.

Congress blamed the Aam Aadmi Party for its defeat in Haryana

ಹರಿಯಾಣದಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌: ಹರಿಯಾಣದಲ್ಲಿ ಬಿಜೆಪಿ ಕಳೆದ 10 ವರ್ಷಗಳಿಂದಲೂ ಅಧಿಕಾರದಲ್ಲಿದೆ. ಈ ಬಾರಿಯೂ ಗೆಲುವು ಸಾಧಿಸಿದರೆ, ಸತತ ಮೂರು ಬಾರಿ ಹರಿಯಾಣದಲ್ಲಿ ಗೆದ್ದ ಪಕ್ಷ ಎನ್ನುವ ಖ್ಯಾಗಿ ಗಳಿಸಲಿದೆ. ಅಲ್ಲದೇ ಹ್ಯಾಟ್ರಿಕ್‌ ಸಾಧನೆಯನ್ನೂ ಬಿಜೆಪಿ ಮಾಡಲಿದೆ. ಇನ್ನು ಕೆಲವೇ ದಿನಗಳಲ್ಲಿ ಹರಿಯಾಣದ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲೂ ಚುನಾವಣೆಗಳು ನಡೆಯಲಿವೆ. ಹೀಗಾಗಿ,ಹರಿಯಾಣದ ಚುನಾವಣೆ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಹರಿಯಾಣದಲ್ಲಿ ಸರ್ಕಾರ ರಚನೆಯತ್ತ ಬಿಜೆಪಿ ದಾಪಗಾಲು ಇರಿಸಿದೆ. ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಕಾಪಾಡಿಕೊಂಡಿದೆ. ಆದರೆ, ಎಕ್ಸಿಟ್‌ ಪೋಲ್‌ ವರದಿಯ ಪ್ರಕಾರ, ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದೇ ಹೇಳಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+