ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಜೂನ್ 12; ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು.

75 ವರ್ಷದ ಸೋನಿಯಾ ಗಾಂಧಿ ಭಾನುವಾರ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಅವರ ಆರೋಗ್ಯ ಸ್ಥಿರವಾಗಿದೆ, ತಜ್ಞ ವೈದ್ಯರ ತಂಡ ಆರೋಗ್ಯದ ಬಗ್ಗೆ ನಿಗಾವಹಿಸಿದೆ ಎಂದು ಪಕ್ಷ ತಿಳಿಸಿದೆ.

 ನ್ಯಾಷನಲ್ ಹೆರಾಲ್ಡ್ ಹಗರಣ ಏನು? ರಾಹುಲ್, ಸೋನಿಯಾ ಮೇಲಿನ ಆರೋಪವೇನು? ನ್ಯಾಷನಲ್ ಹೆರಾಲ್ಡ್ ಹಗರಣ ಏನು? ರಾಹುಲ್, ಸೋನಿಯಾ ಮೇಲಿನ ಆರೋಪವೇನು?

ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಸೋನಿಯಾ ಗಾಂಧಿ ಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗಿದೆ. ಸೋನಿಯಾ ಗಾಂಧಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಕಟಣೆ ಹೇಳಿದೆ.

ಕಾಂಬೋಡಿಯಾ ಈಗ ಸಂಪೂರ್ಣ ಕೋವಿಡ್ ಮುಕ್ತ ದೇಶಕಾಂಬೋಡಿಯಾ ಈಗ ಸಂಪೂರ್ಣ ಕೋವಿಡ್ ಮುಕ್ತ ದೇಶ

Congress Chief Sonia Gandhi Admitted To Hospital Due To Covid Issues

ಹಾಜರಾತಿಗೆ ವಿನಾಯಿತಿ ಕೋರಿದ್ದರು; ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಹಾಜರಾಗುವಂತೆ ಇಡಿ ಸೋನಿಯಾ ಗಾಂಧಿಗೆ ನೋಟಿಸ್ ನೀಡಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಅವರು ಹಾಜರಾತಿಗೆ ವಿನಾಯಿತಿ ಕೇಳಿದ್ದರು.

ನ್ಯಾಷನಲ್ ಹೆರಾಲ್ಡ್ ವಿವಾದ: ತಡೆಯಾಜ್ಞೆ ನೀಡದ ಕೋರ್ಟ್, ಕಾಂಗ್ರೆಸ್‌ಗೆ ಹಿನ್ನಡೆನ್ಯಾಷನಲ್ ಹೆರಾಲ್ಡ್ ವಿವಾದ: ತಡೆಯಾಜ್ಞೆ ನೀಡದ ಕೋರ್ಟ್, ಕಾಂಗ್ರೆಸ್‌ಗೆ ಹಿನ್ನಡೆ

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಕುರಿತು ರಂದೀಪ್ ಸುರ್ಜೇವಾಲ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ತಗುಲಿದ ಬಳಿಕ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಸೋಂಕು ತಗುಲಿತ್ತು. ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿ, ಸೋನಿಯಾ ಗಾಂಧಿ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದರು.

ಭಾರತದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಭಾನುವಾರದ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 8,582 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 4,32,22,017. ಇದುವರೆಗೂ ಮೃತಪಟ್ಟವರ ಸಂಖ್ಯೆ 5,24,761 ಆಗಿದೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 40,370 ರಿಂದ 44,513ಕ್ಕೆ ಏರಿಕೆಯಾಗಿದೆ.

English summary
Congress interim president Sonia Gandhi admitted to hospital due to Covid 19 issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X