ಕರ್ನಾಟಕದ ಮದ್ಯದಂಗಡಿಗಳಿಂದ ಕಾಂಗ್ರೆಸ್‌ 700 ಕೋಟಿ ರೂ ವಸೂಲಿ ಮಾಡಿದೆ- ನರೇಂದ್ರ ಮೋದಿ

ಮುಂಬೈ, ನವೆಂಬರ್ 09: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಪ್ರಚಾರ ನಡೆಸಿದ್ದು, ಈ ವೇಳೆ ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಹಾರಾಷ್ಟ್ರ ಚುನಾವಣೆಗಳಿಗಾಗಿ ಕಾಂಗ್ರೆಸ್ ಕರ್ನಾಟಕದ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂಪಾಯಿಗಳವರೆಗೆ ಸಂಗ್ರಹಿಸಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಉಸ್ತುವಾರಿಯನ್ನು ಮುನ್ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಹಾರಾಷ್ಟ್ರ ಚುನಾವಣೆ ಪ್ರಚಾರದ ವೇಳೆ, ಕಾಂಗ್ರೆಸ್ ಎಲ್ಲಿ ಸರ್ಕಾರವನ್ನು ರಚಿಸುತ್ತದೆಯೋ, ಆ ರಾಜ್ಯವು ಕಾಂಗ್ರೆಸ್‌ನ ಎಟಿಎಂ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂತಹ ರಾಜ್ಯಗಳು ಕಾಂಗ್ರೆಸ್‌ನ ರಾಜಮನೆತನದ ಎಟಿಎಂಗಳಾಗಿ ಮಾರ್ಪಟ್ಟಿವೆ ಎಂದು ವಾಗ್ದಾಳಿ ನಡೆಸಿದರು.

Congress Collected Rs 700 Crore From Liquor Shop Owners In Karnataka Narednra Modi

ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣೆಯ ಹೆಸರಿನಲ್ಲಿ ಕರ್ನಾಟಕದಲ್ಲಿ ವಸೂಲಿ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಚುನಾವಣೆಗೆ ನೆರೆಯ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ ವಸೂಲಿ ಹೆಚ್ಚಾಗಿದೆ ಎಂದು ಜನರು ಹೇಳುತ್ತಿದ್ದಾರೆ ಎಂದ ಪ್ರಧಾನಿ ಮೋದಿ ಕರ್ನಾಟಕದ ಮದ್ಯದ ಅಂಗಡಿಗಳಿಂದ 700 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

'ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಎಟಿಎಂ ಆಗಲು ಬಿಡುವುದಿಲ್ಲ'

ಅಕೋಲದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ 'ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಲು ಬಿಡುವುದಿಲ್ಲ. ದೇಶವನ್ನು ಜಾತಿಯ ಆಧಾರದ ಮೇಲೆ ವಿಭಜನೆ ಮಾಡುವ ಮೂಲಕ ಅದನ್ನು ಒಡೆಯುವ ಗುರಿ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂತಹ ಪ್ರಯತ್ನಗಳಿಗೆ ನಾವು ಅವಕಾಶ ನೀಡುವುದಿಲ್ಲ. ಒಂದು ವೇಳೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದರೆ ರಾಜ್ಯ ಪಕ್ಷದ ನಾಯಕರ ಎಟಿಎಂ ಆಗಲಿದೆ. ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಲು ನಾವು ಬಿಡುವುದಿಲ್ಲ' ಎಂದು ಪರೋಕ್ಷವಾಗಿ ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+