Haryana assembly election results 2024: ಹರ್ಯಾಣದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್: ಕೈ ಸರ್ಕಾರ ರಚನೆ ಫಿಕ್ಸ್?
ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಆರಂಭದಿಂದಲೂ ಕಾಂಗ್ರೆಸ್ ಮುನ್ನಡೆಯನ್ನ ಸಾಧಿಸಿದೆ. ಭಾರೀ ಕುತೂಹಲ ಮೂಡಿಸಿರುವ ಹರಿಯಾಣ ವಿಧಾನಸಭೆಯ ಚುನಾವಣಾ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.
ದಶಕದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲಿದೆ. ಹರಿಯಾಣ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆದಿದ್ದು, 1,031 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಶೇಕಡಾ 67.90ರಷ್ಟು ಮತದಾನವಾಗಿತ್ತು.

ಆರಂಭದಿಂದಲೂ ಕಾಂಗ್ರೆಸ್ ಭಾರೀ ಮುನ್ನಡೆಯನ್ನ ಸಾಧಿಸಿದ್ದು, 90 ವಿಧಾನಸಭಾ ಕ್ಷೇತ್ರಗಳ ಫೈಕಿ ಕಾಂಗ್ರೆಸ್ ಬರೋಬ್ಬರಿ 54 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಸಾಧಿಸಿದೆ. ಇತ್ತ ಆಡಳಿತರೂಢ ಬಿಜೆಪಿಯೂ 31 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು 54 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದೆ.
ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಹರಿಯಾಣದಲ್ಲಿ ಶೇ. 67.90ರಷ್ಟು ಮತದಾನವಾಗಿದೆ. ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಪ್ರಮುಖ ಪಕ್ಷಗಳಾಗಿ ಸ್ಪರ್ಧಿಸಿವೆ.
ಇನ್ನೂ ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತವನ್ನ ನೀಡಿತ್ತು ಅದರಂತೆ ಕಾಂಗ್ರೆಸ್ ಆರಂಭದಿಂದಲೂ ಮುಂಚೂಣಿಯಲ್ಲಿದೆ. ಒಂದು ವೇಳೆ ಸಮೀಕ್ಷಾ ವರದಿಗಳು ನಿಜವಾಗಿದ್ದೇ ಆದರೆ, ಹರಿಯಾಣದಲ್ಲಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಭಾರೀ ಹೊಡೆತ ಬೀಳಲಿದೆ.
ಹರಿಯಾಣದಲ್ಲಿ ಪಕ್ಷವು ದೊಡ್ಡ ಗೆಲುವಿನತ್ತ ಸಾಗುತ್ತಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಗೆ ಮುನ್ನಡೆಯುತ್ತಿದೆ ಎಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದರು.
ಹರಿಯಾಣದಲ್ಲಿಆರಂಭದಿಂದಲೂ ಕಾಂಗ್ರೆಸ್ ಮುನ್ನಡೆಯಲ್ಲಿದ್ದು, ಬಿಜೆಪಿ ಕೇವಲ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈಗಿನ ಅಂಕಿ ಅಂಶಗಳ ಪ್ರಕಾರ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಗೆ ರಾಜ್ಯದಲ್ಲಿ ಹಿನ್ನಡೆಯಾಗಲಿದೆ.
ಹರಿಯಾಣ ವಿಧಾನಸಭಾ ಚುನಾವಣೆ ಈ ಬಾರಿ ಒಂದೇ ಹಂತದಲ್ಲಿ ಅಕ್ಟೋಬರ್ 5 ರಂದು ಚುನಾವಣೆ ನಡೆದಿತ್ತು. 90 ವಿಧಾನಸಭಾ ಸ್ಥಾನಗಳಲ್ಲಿ ಒಟ್ಟು 1031 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ 101 ಮಹಿಳೆಯರು ಮತ್ತು 464 ಸ್ವತಂತ್ರ ಅಭ್ಯರ್ಥಿಗಳು. ಶೇ 67.90 ಮತದಾನವಾಗಿದೆ.
ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲವನ್ನ ಕೆರಳಿಸಿದ್ದು, 90 ಮತ ಎಣಿಕೆ ಕೇಂದ್ರಗಳಲ್ಲಿ ಇಂದು (ಮಂಗಳವಾರ) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮೂರು ಸ್ತರದ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಡಿಜಿಪಿ ಶತ್ರುಜೀತ್ ಕಪೂರ್ ತಿಳಿಸಿದ್ದಾರೆ.
ಮೊದಲ ಹಂತದ ಭದ್ರತೆಯಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ, ಹರಿಯಾಣ ಸಶಸ್ತ್ರ ಪೊಲೀಸ್ ಅಧಿಕಾರಿಗಳನ್ನು ಎರಡನೇ ಹಂತದಲ್ಲಿ ನಿಯೋಜಿಸಲಾಗಿದೆ.












Click it and Unblock the Notifications