ಚಿಂತನ ಶಿಬಿರದಿಂದ ಕಾಂಗ್ರೆಸ್ ಏನೂ ಸಾಧಿಸಿಲ್ಲ: ಪ್ರಶಾಂತ್ ಕಿಶೋರ್
ನವದೆಹಲಿ, ಮೇ 20: ಇತ್ತೀಚಿಗೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಮೂರು ದಿನಗಳ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಕೊನೆಗೂ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಪ್ರತಿಕ್ರಿಯೆ ನೀಡಿದರು.ಈ ಅಧಿವೇಶನ ಅರ್ಥಪೂರ್ಣವಾದದ್ದನ್ನು ಸಾಧಿಸಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟರು.
2024ರ ಲೋಕಸಭಾ ಚುನಾವಣೆಯ ಕಾರ್ಯತಂತ್ರ ಮತ್ತು ಚುನಾವಣಾ ಸವಾಲುಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷ ಮೂರು ದಿನಗಳ ಚಿಂತನ-ಮಂಥನ ಅಧಿವೇಶನವನ್ನು ನಡೆಸಿತು. ಇದರಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಗುಲಾಂ ನಬಿ ಅಜಾದ್, ಪಿ. ಚಿದಂಬರಂ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಕಳೆದ ತಿಂಗಳು ಹಬ್ಬಿತ್ತು. ಬಳಿಕ ಅವರು ಪಕ್ಷ ಸೇರುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ ಅವರು ಪಕ್ಷದ ಪ್ರಮುಖ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡದಿದ್ದದ್ದು ಮಾತ್ರ ರಾಜಕೀಯ ವಯಲದಲ್ಲಿ ಚರ್ಚೆಗೆ ಕಾರಣವಾಗಿತ್ತು.
ಆದರೆ ಕೊನೆಗೂ ಟ್ವೀಟ್ ಮೂಲಕ ಕಾಂಗ್ರೆಸ್ ಸಮಾವೇಶದ ಫಲಿತಾಂಶದ ಬಗ್ಗೆ ಪ್ರಶಾಂತ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಶಿಬಿರದಲ್ಲಿ ಪಕ್ಷ ಉಪಯೋಗಕ್ಕೆ ಬರುವ ಯಾವುದೇ ಸಾಧನೆ ಮಾಡಿಲ್ಲ ಎಂದು ಬರೆದಿದ್ದಾರೆ.
|
ಬುದ್ದಿಮತ್ತೆಯ ಅಧಿವೇಶನ
ಉದಯಪುರದ ಚಿಂತನ ಶಿಬಿರದ ಫಲಿತಾಂಶದ ಬಗ್ಗೆ ಪದೇ ಪದೇ ನನಗೆ ಪ್ರಶ್ನೆ ಕೇಳಲಾಗುತ್ತಿದೆ. ನನ್ನ ದೃಷ್ಟಿಕೋನದಲ್ಲಿ ಅದು ಯಥಾಸ್ಥಿತಿಯನ್ನು ವಿಸ್ತರಿಸುವುದು ಮತ್ತು ನಾಯಕತ್ವಕ್ಕೆ ಸ್ವಲ್ಪ ಸಮಯ ನೀಡಿರುವುದನ್ನು ಹೊರತುಪಡಿಸಿ, ಅರ್ಥಪೂರ್ಣವಾದದನ್ನೂ ಸಾಧಿಸಲು ವಿಫಲವಾಗಿದೆ. ಇದು ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯ ಸೋಲಿನವರೆಗೆ ಮುಂದುವರಿಯಬಹುದ ಎಂದು ಟ್ವೀಟ್ ಮಾಡಿದ್ದಾರೆ.

ಚಿಂತನ ಶಿಬಿರದ ಪ್ರಮುಖಾಂಶ
ಮೂರು ದಿನಗಳ ಚಿಂತನ ಶಿಬಿರದಲ್ಲಿ ಕಾಂಗ್ರೆಸ್ ಪಕ್ಷ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಇದರಲ್ಲಿ 70 ವರ್ಷಗಳಿಗೆ ಮೇಲ್ಪಟ್ಟವರಿಗೆ ಚುನಾವಣೆ ಟಿಕೆಟ್ ನೀಡದಿರುವುದು. ಒಂದು ಕುಟುಂಬಕ್ಕೆ ಒಂದು ಒಂದು ಟಿಕೆಟ್ , 35 ವರ್ಷಗಳ ವಯೋಮಾನದವರಿಗೆ ಆದ್ಯತೆ ನೀಡುವುದು. ಐದು ವರ್ಷಗಳಲ್ಲಿ ಅಧಿಕಾರ ಅವಧಿ ಪೂರ್ಣಗೊಳಿಸಿದ ನಾಯಕರು ಮೂರು ವರ್ಷಗಳವರೆಗೆ ಪಕ್ಷದಲ್ಲಿ ಯಾವುದೇ ಸ್ಥಾನದಲ್ಲಿ ಇರಬಾರದು ಎಂದು ನಿಯಮಗಳನ್ನು ಶಿಫಾರಸ್ಸು ಮಾಡಲಾಗಿತ್ತು.

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಾತ್ರೆ
ಇದೇ ಸಭೆಯಲ್ಲಿಮಾತನಾಡಿದ್ದ ರಾಹುಲ್ ಗಾಂಧಿ ಜನ ಸಾಮಾನ್ಯರ ಜೊತೆಗೆ ನಮ್ಮ ಸಂಪರ್ಕ ಕಡಿತಗೊಂಡಿದೆ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕು ಮತ್ತು ಅದನ್ನು ಪುನಃ ಮರು ಜೋಡಿಸಲು ಕಠಿಣ ಪರಿಶ್ರಮ ಪಡಬೇಕು. ಜನರಿಗೆ ಕಾಂಗ್ರೆಸ್ ಪಕ್ಷ ದೇಶವನ್ನು ಮುನ್ನಡೆಸಬಲ್ಲದು ಎನ್ನುವುದು ಗೊತ್ತಿದೆ. ಜನರ ಜೊತೆ ಸಂಪರ್ಕ ಸಾಧಿಸಲು ಯಾವುದೇ ಅಡ್ಡದಾರಿ ಇಲ್ಲ. ಪಕ್ಷ ಅದನ್ನು ಬೆವರು ಹರಿಸಿ ಸಂಪಾದಿಸಿಬೇಕು. ಇದಕ್ಕಾಗಿ ರೈತರು ಮತ್ತು ಕೂಲಿ ಕಾರ್ಮಿಕರ ಜೊತೆ ಒಂದೆರಡು ದಿನಗಳಲ್ಲ, ತಿಂಗಳ ಕಾಲ ಕಳೆಯಿರಿ ಎಂದು ಪಕ್ಷದ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಮನವಿ ಮಾಡಿದರು. ತಾವೂ ಕೂಡ ಜೊತೆಗೂಡಿ ಬಿಜೆಪಿ ವಿರುದ್ಧ ಹೋರಾಟ ನಡೆಸುವುದಾಗಿ ಸದಸ್ಯರಿಗೆ ಭರವಸೆ ನೀಡಿದ್ದರು. ಇದಕ್ಕಾಗಿ ಕಾಶ್ಮೀರದಿಂದ ಕನ್ಯಕುಮಾರಿಯವರೆಗೆ ಯಾತ್ರೆ ಮಾಡುವುದಾಗಿ ಘೋಷಿಸಿದ್ದರು.

ಕರ್ನಾಟಕದ ನಾಯಕರು ಪಾಲ್ಗೊಂಡಿದ್ದರು
ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿಯ ಚಿಂತನಾ ಶಿಬಿರದಲ್ಲಿ ಕರ್ನಾಟಕದ ನಾಯಕರು ಸಹ ಪಾಲ್ಗೊಂಡಿದ್ದರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಿದ್ದರಾಮಯ್ಯ ಶಿಬಿರದಲ್ಲಿ ಆರ್ಥಿಕತೆ ಬಗ್ಗೆ ಪ್ರಬಂಧ ಮಂಡನೆ ಮಾಡಿದ್ದರು. ಇಂದು ದೇಶದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಹಾಗೂ ಅದರ ಸುಧಾರಣೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಕುರಿತು ಮಾತನಾಡಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications