Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಭಾರಿ ಮುನ್ನಡೆ: ರಾಜಸ್ಥಾನಕ್ಕೆ ಧಾವಿಸಿದ ಕೆ.ಸಿ. ವೇಣುಗೋಪಾಲ್

Recommended Video

      5 States Election Results 2018:ಕಾಂಗ್ರೆಸ್ ಭಾರಿ ಮುನ್ನಡೆ: ರಾಜಸ್ಥಾನಕ್ಕೆ ಧಾವಿಸಿದ ಕೆ.ಸಿ. ವೇಣುಗೋಪಾಲ್

      ಜೈಪುರ, ಡಿಸೆಂಬರ್ 11: ರಾಜಸ್ಥಾನದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳು ಕಾಣಿಸುತ್ತಿದ್ದಂತೆಯೇ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಅಲ್ಲಿಗೆ ಧಾವಿಸಿದ್ದಾರೆ.

      ರಾಜಸ್ಥಾನದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವ ಸಾಧ್ಯತೆಗಳು ಗೋಚರಿಸಿರುವುದರಿಂದ ಮುಂದಿನ ನಡೆಯ ಬಗ್ಗೆ ಅಲ್ಲಿನ ನಾಯಕರ ಜೊತೆ ಮಾತುಕತೆ ನಡೆಸಲು ವೇಣುಗೋಪಾಲ್ ಅಲ್ಲಿಗೆ ದೌಡಾಯಿಸಿದ್ದಾರೆ.

      ರಾಜಸ್ಥಾನದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಅನೇಕ ಮುಖಂಡರು ಮುಖ್ಯಮಂತ್ರಿ ರೇಸ್‌ನಲ್ಲಿ ಇರುವುದರಿಂದ ಪಕ್ಷ ಸರ್ಕಾರ ರಚಿಸುವ ಅವಕಾಶ ಲಭಿಸಿದರೆ ಯಾರನ್ನು ನಾಯಕರನ್ನಾಗಿ ಆಯ್ಕೆ ಮಾಡುವುದು ಎಂಬ ಗೋಜಲು ಸೃಷ್ಟಿಯಾಗುವ ಸಂಭವವಿದೆ.

      ಹೀಗಾಗಿ ಆರಂಭದಲ್ಲಿಯೇ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಸರ್ಕಾರ ನಡೆಸುವ ನಾಯಕತ್ವವನ್ನು ಯಾರ ಹೆಗಲಿಗೇರಿಸಬಹುದು ಎಂಬ ಬಗ್ಗೆ ವೇಣುಗೋಪಾಲ್ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಪಕ್ಷದ ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.

      ವೇಣುಗೋಪಾಲ್ ಅವರು ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿಯಾಗಿದ್ದಾರೆ. ಜೊತೆಗೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿರುವುದರಿಂದ ರಾಜಸ್ಥಾನದ ರಾಜಕೀಯ ಸ್ಥಿತಿಗತಿಗಳನ್ನು ಅವರು ಅವಲೋಕಿಸಲಿದ್ದಾರೆ.

      ಮುಖ್ಯಮಂತ್ರಿ ರೇಸ್‌ನಲ್ಲಿ...

      ಮುಖ್ಯಮಂತ್ರಿ ರೇಸ್‌ನಲ್ಲಿ...

      ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಪೈಲೆಟ್, ರಾಜ್ಯದ ಪ್ರತಿಪಕ್ಷ ನಾಯಕ ರಾಮೇಶ್ವರ ದುಡಿ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ.

      ಕಾಂಗ್ರೆಸ್ ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ 12ರಂದು ಪಕ್ಷದ ಶಾಸಕರ ಸಭೆ ನಡೆಯಲಿದೆ. ಹೈಕಮಾಂಡ್ ಆದೇಶದಂತೆ ಒಂದು ಸಾಲಿನ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗುತ್ತದೆ. ಜೈಪುರದಲ್ಲಿ ಸಭೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ವೇಣುಗೋಪಾಲ್ ಅಲ್ಲಿ ಸಮಾಲೋಚನೆ ನಡೆಸಲಿದ್ದಾರೆ.

      ಸಚಿನ್ ಪೈಲಟ್ ವಿಶ್ವಾಸ

      ಸಚಿನ್ ಪೈಲಟ್ ವಿಶ್ವಾಸ

      ಜನತೆ ಆಶೀರ್ವಾದ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ. ಸಂಪೂರ್ಣ ಬಹುಮತ ಸಿಗಲಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮುಂತಾದ ಮುಖಂಡರು ಕುಳಿತು ಚರ್ಚೆ ಮಾಡಿ ಯಾರು ಮುಖ್ಯಮಂತ್ರಿ ಎಂಬುದನ್ನು ನಿರ್ಧರಿಸಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವುದು ಖಚಿತ ಎಂದು ಸಚಿನ್ ಪೈಲಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

      ಅತಂತ್ರವಾಗುವುದೇ?

      ಅತಂತ್ರವಾಗುವುದೇ?

      ಒಂದು ಹಂತದಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆದುಕೊಳ್ಳುವ ಲಕ್ಷಣಗಳು ಗೋಚರಿಸಿದ್ದರೂ, ರಾಜಸ್ಥಾನ ವಿಧಾನಸಭೆ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿದೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತೆ ಮುನ್ನಡೆ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ನಿಕಟ ಪೈಪೋಟಿ ನೀಡುತ್ತಿದೆ. ಇದೇ ರೀತಿ ಸಮೀಪದ ಕದನ ಮುಂದುವರಿದರೆ ಅಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದು ಖಚಿತ.

      ಬಿಜೆಪಿ ವಿರೋಧಿ ಅಲೆ

      ಬಿಜೆಪಿ ವಿರೋಧಿ ಅಲೆ

      ರಾಜಸ್ಥಾನದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ನೇತೃತ್ವದ ಬಿಜೆಪಿ ತನ್ನ ಅಧಿಕಾರ ಕಳೆದುಕೊಳ್ಳುವ ಸೂಚನೆ ಕಂಡುಬಂದಿದೆ. ಕಾಂಗ್ರೆಸ್‌ ಇಲ್ಲಿ ಸಂಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೂ, ಬಿಜೆಪಿ ಬಹುಮತ ಪಡೆದುಕೊಳ್ಳುವ ಸಂಭವ ತೀರಾ ದೂರ ಇದೆ. ಇತರೆ ಪಕ್ಷಗಳು, ಪಕ್ಷೇರರ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಎರಡೂ ಪಕ್ಷಗಳ ನಾಯಕರು ಪೈಪೋಟಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಅಧಿಕ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+