ಕಾಂಗ್ರೆಸ್ ಗ್ಯಾರಂಟಿ: ಇನ್ಮುಂದೆ ಮಹಿಳೆಯರಿಗೆ ಸಿಗಲಿದೆ 3,000 ಸಾವಿರ ರೂ, ಎಲ್ಲಿ ?!
Guarantee Scheme: ಕಾಂಗ್ರೆಸ್ ಕಳೆದ ಎರಡು ಮೂರು ವರ್ಷಗಳಿಂದ ದೇಶದಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ. ಅಧಿಕಾರಕ್ಕೆ ಬರುವ ರಾಜ್ಯಗಳಲ್ಲಿ ಈ ಯೋಜನೆಗಳನ್ನು ಜಾರಿ ಸಹ ಮಾಡ್ತಿದೆ. ಇದೀಗ ಮಹಿಳೆಯರಿಗೆ ಇನ್ಮುಂದೆ 3,000 ಸಾವಿರ ರೂಪಾಯಿ ನೀಡುವುದಾಗಿ ಹೇಳಿದೆ. ಕಾಂಗ್ರೆಸ್ ಮೈತ್ರಿ ಪಕ್ಷಗಳ ಹೊಸ ಗ್ಯಾರಂಟಿ ಯೋಜನೆಗಳು ಏನು, ಇದು ಯಾವಾಗ ಜಾರಿಯಾಗಲಿದೆ ಎನ್ನುವ ವಿವರ ಇಲ್ಲಿದೆ.
ಮಹಾರಾಷ್ಟ್ರ ಚುನಾವಣೆಗೆ ಸರಿಯಾಗಿ ಇನ್ನು 12 ದಿನಗಳು ಮಾತ್ರ ಬಾಕಿ ಉಳಿದಿವೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಬೇಕು ಎನ್ನುವ ಗುರಿಯಲ್ಲಿ ಕಾಂಗ್ರೆಸ್ ಮೈತ್ರಿ ಒಕ್ಕೂಟ ಇದೆ. ಹೀಗಾಗಿ, ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ತಿಂಗಳಿಗೆ 3,000 ಸಾವಿರ ರೂಪಾಯಿ ಕೊಡುವುದಾಗಿ ಮಹಾರಾಷ್ಟ್ರದ ವಿರೋಧ ಪಕ್ಷಗಳ ಒಕ್ಕೂಟ ಮಹಾವಿಕಾಸ್ ಅಘಾಡಿ ಘೋಷಿಸಿದೆ.

ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ) ಇದೆ. ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿಯ ಚುನಾವಣೆ ಯಾರೂ ಅಂದಾಜು ಸಹ ಮಾಡಲಾಗದಷ್ಟು ರೋಚಕವಾಗಿ ಇದೆ. ಚುನಾವಣೆ ದಿನಾಂಕ ಸಮೀಪಿಸುತ್ತಿರುವ ಬೆನ್ನಲ್ಲೇ ಮಹಾವಿಕಾಸ ಅಘಾಡಿ ಮೈತ್ರಿ ಪಕ್ಷಗಳು ಚುನಾವಣೆ ಪ್ರಣಾಳಿಕೆಯನ್ನು ಘೋಷಿಸಿದೆ. ಈ ರಾಜ್ಯದಲ್ಲೂ ಗ್ಯಾರಂಟಿ ಯೋಜನೆಗಳ ಪರಿಚಯಿಸಲು ಮುಂದಾಗಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಪ್ರಮುಖ ಗ್ಯಾರಂಟಿ
ಇನ್ನು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಕೆಲವು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ಮೈತ್ರಿಕೂಟ ಹೇಳಿದೆ. ಮಹಾರಾಷ್ಟ್ರದ ಮಹಿಳೆಯರಿಗೆ ಪ್ರತಿ ತಿಂಗಳು 3,000 ಸಾವಿರ ರೂಪಾಯಿ ನೀಡುವುದಾಗಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಹೇಳಿದೆ. ಅಲ್ಲಿನ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಹಾಗೂ ಕೃಷಿ ಸಾಲವನ್ನು 3 ಲಕ್ಷ ರೂಪಾಯಿಯ ವರೆಗೆ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ.

ಅಲ್ಲದೇ ರಾಜ್ಯದಲ್ಲಿ ಮೈತ್ರಿ ಪಕ್ಷಗಳು ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 4,000 ಸಾವಿರ ರೂಪಾಯಿ ನೀಡುವುದು ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು ಪರಿಚಯಿಸುವುದಾಗಿ ಭರವಸೆ ನೀಡಿದೆ.
ಜತಿ ಗಣತಿ: ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸಿವೆ. ಈ ನಡುವೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಮಹಾರಾಷ್ಟ್ರದಲ್ಲಿ ಜಾತಿ ಗಣತಿಯನ್ನು ನಡೆಸುವುದಾಗಿ ಮಹಾ ವಿಕಾಸ್ ಅಘಾಡಿ ಭರವಸೆ ನೀಡಿದೆ. ಈ ಭರವಸೆಗಳನ್ನು ಜನ ಹೇಗೆ ಸ್ವೀಕರಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಜನ ಒಪ್ಪಿಗೆ ಸೂಚಿಸಲಿದ್ದಾರೆಯೇ ಎನ್ನುವುದು ಇದೇ 23ಕ್ಕೆ ತಿಳಿಯಲಿದೆ. ಯಾಕೆಂದರೆ, ಮಹಾರಾಷ್ಟ್ರದಲ್ಲಿ ನವೆಂಬರ್ 20ಕ್ಕೆ 288 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದರ ಮ್ಯಾಜಿಕ್ ಸಂಖ್ಯೆ 145 ಆಗಿದೆ.












Click it and Unblock the Notifications