ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Himachal Pradesh CM : ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ: ಶೀಘ್ರದಲ್ಲೇ ಘೋಷಣೆ

|
Google Oneindia Kannada News

ನವದೆಹಲಿ, ಡಿಸೆಂಬರ್‌ 10: ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರು ಹೆಸರನ್ನು ಅನುಮೋದಿಸಿದೆ.

ಪಕ್ಷದ ಇತರ ನಾಯಕರೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆಯೊಳಗೆ ಸುಖು ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಒಟ್ಟು 68 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಪಡೆದುಕೊಂಡಿದ್ದಾರೆ.

Sukhwinder Singh Sukhu will be Himachal Pradeshs new chief

ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಪ್ರಭಾವಿ ನಾಯಕರಲ್ಲಿ ಒಬ್ಬರು. ಅವರು ವೃತ್ತಿಯಿಂದ ವಕೀಲರು. ಕಾಂಗ್ರೆಸ್‌ನ ವಿದ್ಯಾರ್ಥಿ ನಾಯಕರಾಗಿ ಹೆಸರು ಮಾಡಿದವರು. 58 ವರ್ಷ ವಯಸ್ಸಿನ ನಾಯಕರಾದ ಸುಖು ಸ್ಥಳೀಯರು ಮತ್ತು ಪಕ್ಷದ ಕಾರ್ಯಕರ್ತರಿಂದ ಅಪಾರ ಬೆಂಬಲವನ್ನು ಹೊಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹಿಮಾಚಲ ಪ್ರದೇಶದ ಸಿಎಂ ರೇಸ್‌ನಲ್ಲಿ ಒಟ್ಟು ಮೂವರು ಇದ್ದರು. ಪ್ರಮುಖವಾಗಿ ಪ್ರತಿಭಾ ಸಿಂಗ್‌ ಅವರು ಸಿಎಂ ಸ್ಥಾನದ ಬೇಡಿಕೆ ಇಟ್ಟಿದ್ದರು. ಪ್ರತಿಭಾ ಸಿಂಗ್‌ ಅವರು ಪ್ರಭಾವಿ ನಾಯಕಿಯಾಗಿದ್ದಾರೆ. ಮಾಜಿ ಸಿಎಂ ವೀರಭದ್ರ ಸಿಂಗ್‌ ಅವರ ಧರ್ಮಪತ್ನಿಯೂ ಆಗಿರುವ ಅವರು, ಮೂರು ಬಾರಿ ಕಾಂಗ್ರೆಸ್‌ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಈಗ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷೆಯು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Sukhwinder Singh Sukhu will be Himachal Pradeshs new chief

ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಕೂಡ ಮುಖ್ಯಮಂತ್ರಿ ರೇಸ್‌ನಲ್ಲಿದ್ದರು.

English summary
Sukhwinder Singh Sukhu will be Himachal Pradesh's new chief minister, the Congress high command approved the name on Saturday. Sukhu's name will be officially announced by this evening after discussing it with other leaders, news agency ANI reported citing sources,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X