ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದ 25 ನಾಯಕರಿಗೆ ಹೈಕಮಾಂಡ್‌ ಬುಲಾವ್!‌ ಯಾರ್ಯಾರು ದೆಹಲಿಗೆ!?

ದೆಹಲಿ, ಜುಲೈ 29: ರಾಜ್ಯ ವಿಧಾನಸಭಾ ಚುನಾವಣೆಯ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರು ಕಾಂಗ್ರೆಸ್‌ ನಾಯಕರಿಗೆ ಆರಂಭದಿಂದಲೂ ಸ್ವಪಕ್ಷದ ನಾಯಕರಿಂದಲೇ ಸಾಕಷ್ಟು ಅಡೆತಡೆಗಳು ಎದುರಾಗುತ್ತಿವೆ.

ಈಗಾಗಲೇ ಮುಖ್ಯಮಂತ್ರಿ ಆಯ್ಕೆಯಿಂದ ಶುರುವಾದ ಮನಸ್ಥಪ ಇದೀಗ ಸಚಿವರ ವಿರುದ್ದ ಶಾಸಕರ ಅಸಮಾಧಾನದವರೆಗೂ ಬಂದು ತಲುಪಿದ್ದು, ಸಚಿವರ ವಿರುದ್ದ 30 ಕ್ಕೂ ಹೆಚ್ಚು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್‌ ಸೂಚನೆಯಂತೆ ಸಿದ್ದರಾಮಯ್ಯ ಶಾಸಕಾಂಗ ಸಭೆ ನಡೆಸಿದರು, ಕಾಂಗ್ರೆಸ್‌ ಪಾಳಯದಲ್ಲಿನ ಅಸಮಾಧಾನ ಮಾತ್ರ ಶಮನವಾಗಿಲ್ಲ. ಹೀಗಾಗಿ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ನಾಯಕರಿಗೆ ಬುಲಾವ್‌ ನೀಡಿದೆ.

congress-high-command-instructs-25-leaders

ಹೌದು, ಆಗಸ್ಟ್‌ 2 ರಂದು ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ ಸಚಿವರು ಹಾಗೂ ಅಸಮಾಧಾನಿತಗೊಂಡ ಕಾಂಗ್ರೆಸ್‌ ನ ಹಿರಿಯ ಶಾಸಕರಿಗೆ ಒಟ್ಟು 25 ಮಂದಿಗೆ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಹೈಕಮಾಂಡ್‌ ಸೂಚನೆಯಲ್ಲಿ ಗುರುವಾರ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ರಾಜ್ಯ ಕಾಂಗ್ರೆಸ್​​ ಶಾಸಕರ ಪತ್ರ ವ್ಯವಹಾರವೇ ಕಾಂಗ್ರೆಸ್‌ ಹೈಕಮಾಂಡ್‌ ಗೆ ದೊಡ್ಡ ತಲೆನೋವಾಗಿದೆ. ಇನ್ನೂ ಶಾಸಕರನ್ನ ಅಸಮಾಧಾನ ಪಡಿಸಲು ಸಿದ್ದರಾಮಯ್ಯ ಮುಂದಾಗಿದ್ದು, ಈ ವೇಳೆ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಕೆಲ ಶಾಸಕರು ರಾಜೀನಾಮೆ ನೀಡುವ ಬೆದರಿಕೆಯನ್ನ ಹಾಕಿದ್ದಾರೆ ಎನ್ನಲಾಗಿದೆ.

ಇನ್ನೂ ಕಾಂಗ್ರೆಸ್‌ ಶಾಸಕಾಂಗ ಸಭೆಯ ಬಳಿವೂ ಸಚಿವರು ಹಾಗೂ ಶಾಸಕರ ಮನಸ್ಥನ ಮುಂದುವರೆದಿದ್ದು, ಇದೀಗ ಸಚಿವರ ಹಾಗೂ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಎಂಟ್ರಿ ಕೊಟ್ಟಿದೆ. ಹೀಗಾಗಿ ಸರ್ಕಾರದ ವಿರುದ್ದ ಹಾಗೂ ಕೆಲ ನಾಯಕರ ವಿರುದ್ದ ಅಸಮಾಧಾನಗೊಂಡ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಹಿರಿಯ ಶಾಸಕ ಬಿ ಆರ್‌ ಪಾಟೀಲ್‌ ಎಂದು ಸಿದ್ದರಾಮಯ್ಯ ಬಳಿ ಅಸಮಾಧಾನವನ್ನ ಹೇಳಿಕೊಂಡಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಕೆಲ ಸಚಿವರ ವಿರುದ್ದ ಅಸಮಾಧಾನಗೊಂಡ ಶಾಸಕಾಂಗ ಸಭೆಯಿಂದ ಹೊರನಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತ ಸರ್ಕಾರ ರಚನೆಯ ಆರಂಭದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಸಾಕಷ್ಟು ಅಂತರ ಸೃಷ್ಟಿಯಾಗಿದೆ ಎಂದು ಅಸಮಾಧಾನಗೊಂಡ ಶಾಸಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ನೀಡಿದೆ. ಇನ್ನೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಬಿ.ಕೆ.ಹರಿಪ್ರಸಾದ್, ಬಿ.ಎಲ್.ಶಂಕರ್ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬೇಸರಗೊಂಡಿದ್ದ ಬಿ ಕೆ ಹರಿ ಪ್ರಸಾದ್‌, ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಮಾಡುವುದು ಗೊತ್ತು ಹಾಗೂ ಇಳಿಸುವುದು ಗೊತ್ತು ಎಂಬ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗಿದ್ದು, ಈ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಈ ಬಗ್ಗೆಯೂ ಕಾಂಗ್ರೆಸ್‌ ಹೈಕಮಾಂಡ್ ನಾಯಕರು ಸಭೆಯಲ್ಲಿ ಚರ್ಚೆ ನಡೆಸಬಹುದು ಎಂದು ತಿಳಿದು ಬಂದಿದೆ.

ಇನ್ನೂ ಸರ್ಕಾರ ರಚನೆಯ ಆರಂಭದಲ್ಲೇ ಶಾಸಕರು ಹಾಗೂ ಸಚಿವರ ನಡುವೆ ಅಸಮಾಧಾನ ದೊಡ್ಡದಾಗಿದ್ದು, ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಮನ್ವಯ ಸಮಿತಿಯನ್ನು ರಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಸರ್ಕಾರ ಮತ್ತು ಪಕ್ಷದ ನಾಯಕರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಗೃಹ ಸಚಿವ ಡಾ ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಬಹುದು ಎಂದು ಹೇಳಲಾಗಿದೆ.

ಇನ್ನೂ ಸಚಿವ ಸ್ಥಾನದಿಂದ ವಂಚಿತರಾದ ನಾಯಕರಿಗೆ ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರನ್ನು ನೇಮಕಾ ಮಾಡುವ ಬಗ್ಗೆ ಸಭೆಯಲ್ಲಿ ಕಾಂಗ್ರೆಸ್​​ ನಾಯಕರು ಚರ್ಚೆ ಮಾಡಬಹುದು ಎಂದು ಹೇಳಲಾಗಿದೆ. ಅಲ್ಲದೇ ಬಹುಮುಖ್ಯವಾಗಿ ಪಂಚ ಗ್ಯಾರಂಟಿಗಳನ್ನ ಕ್ರಮಬದ್ದವಾಗಿ ಜಾರಿ ಹಾಗೂ ಲೋಕಸಭೆ ಚುನಾವಣೆ ಕಾರ್ಯತಂತ್ರದ ಬಗ್ಗೆಯು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+