ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: "ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ" ಎಂಬ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಅರೆಸ್ಟ್

|
Google Oneindia Kannada News

ಭೋಪಾಲ್ ಡಿಸೆಂಬರ್ 13: 'ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಿ' ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಇಂದು ಬಂಧಿಸಲಾಗಿದೆ. ಸೋಮವಾರ ಪಟೇರಿಯಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ ವಿಡಿಯೋ ವೈರಲ್ ಆಗಿತ್ತು. ಇದರಿಂದ ಪಟೇರಿಯಾ ಹೇಳಿಕೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಆಕ್ರೋಶ ಹೊರಹಾಕಿದ್ದಾರು. ಸೋಮವಾರ ಪಟೇರಿಯಾ ವಿರುದ್ಧ ದೂರು ಕೂಡ ದಾಖಲಾಗಿತ್ತು. ಪಟೇರಿಯಾ ಅವರ ಬಂಧನಕ್ಕೆ ಒತ್ತಡ ಹೆಚ್ಚಾಗುತ್ತಿದ್ದಂತೆ ಇಂದು ಅವರನ್ನು ಬಂಧಿಸಲಾಗಿದೆ.

ವೈರಲ್ ವಿಡಿಯೊದಲ್ಲಿ ಪಟೇರಿಯಾ ಅವರು ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ, "ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಲು ನಾವು ಮೊದಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು'' ಎನ್ನುವ ಮಾತನಾಡಿದ್ದರು.

ಅವರ ಹೇಳಿಕೆಗಳ ನಂತರ, ಮಧ್ಯಪ್ರದೇಶ ಸರ್ಕಾರ ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ಕೇಸ್‌ಗೆ ಆದೇಶಿಸಿತ್ತು. ಪನ್ನಾದ ಪಾವಾಯಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಮಧ್ಯಾಹ್ನ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಪಟೇರಿಯಾ ಅವರನ್ನು ಬಂಧಿಸಲಾಗಿದೆ.

Congress Leader Arrested For Get Ready To Kill Modi Statement

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಟೇರಿಯಾ ಹೇಳಿಕೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡ ಶಿವರಾಜ್ ಸಿಂಗ್, "ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ" ಎಂದು ದೂರಿದ್ದಾರೆ.

"ಕಾಂಗ್ರೆಸ್ಸಿಗರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನ ಕ್ಷೇತ್ರದಲ್ಲಿ ಸೋಲಿಸಲು ಸಾಧ್ಯವಾಗುತ್ತಿಲ್ಲ, ಅದಕ್ಕಾಗಿಯೇ ಕಾಂಗ್ರೆಸ್ ನಾಯಕರೊಬ್ಬರು ಅವರನ್ನು ಕೊಲ್ಲುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ದ್ವೇಷದ ಪರಮಾವಧಿಯಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳು ಬಹಿರಂಗಗೊಳ್ಳುತ್ತಿವೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ" ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಪಟೇರಿಯಾ ಅವರು ತಮ್ಮ ಭಾಷಣದಲ್ಲಿ ಬಳಕೆ ಮಾಡಲಾದ "ಕೊಲೆ" ಎಂಬ ಪದದ ಅರ್ಥ "ಸೋಲು" ಎಂದು ಹೇಳಿದ್ದಾರೆ. ಅಂದರೆ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕು ಎನ್ನುವ ಮಾತನಾಡಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತದ ಅನುಯಾಯಿಯಾಗಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ ಎಂದು ಹೇಳಿದ್ದೆ ಎಂದು ಪಟೇರಿಯಾ ಹೇಳಿಕೊಂಡಿದ್ದಾರೆ.

ಜೊತೆಗೆ ಪಟೇರಿಯಾ ಮಾಡಿದ "ಖಂಡನೀಯ" ಕಾಮೆಂಟ್‌ಗಳ ಬಗ್ಗೆ ಕಾಂಗ್ರೆಸ್ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು. "ಖಂಡಿತವಾಗಿಯೂ ಖಂಡನೀಯ! ಅಂತಹ ಪದಗಳನ್ನು ಪ್ರಧಾನಿ ವಿರುದ್ಧ ಅಥವಾ ಯಾರ ವಿರುದ್ಧವೂ ಬಳಸಬಾರದು. ಕಾಂಗ್ರೆಸ್ ಪಕ್ಷವು ಅಂತಹ ಹೇಳಿಕೆಗಳನ್ನು ಖಂಡಿಸುತ್ತದೆ" ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಸುದ್ದಿಗಾರರಿಗೆ ಹೇಳಿದರು.

English summary
Senior Congress leader Raja Pateria was arrested today for making objectionable statement 'Get Ready To Kill Modi to save the Constitution'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X