Breaking: ಕಾಂಗ್ರೆಸ್ ವಕ್ತಾರ ಸ್ಥಾನಕ್ಕೆ ಶೆರ್ಗಿಲ್ ರಾಜೀನಾಮೆ

ನವದೆಹಲಿ, ಆಗಸ್ಟ್ 24: ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಬುಧವಾರದಂದು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಜೈವೀರ್ ಶೆರ್ಗಿಲ್ ರಾಜೀನಾಮೆ ಕಾಂಗ್ರೆಸ್‌ಗೆ ದೊಡ್ಡ ಆಘಾತ ನೀಡಿದೆ. ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಜೈವೀರ್ ಶೆರ್ಗಿಲ್ ಕಾಂಗ್ರೆಸ್ ನಿರ್ಧಾರಗಳನ್ನು "ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ" ಎಂದು ಆರೋಪಿಸಿದ್ದಾರೆ.

ಸೋನಿಯಾ ಗಾಂಧಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ, "ಪಕ್ಷದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಇನ್ನು ಮುಂದೆ ಸಾರ್ವಜನಿಕರ ಹಿತಾಸಕ್ತಿಗಳಿಗಾಗಿ ಅಲ್ಲ, ಆದರೆ. ನಿರ್ಧಾರಗಳು ಸ್ವಾರ್ಥಿಗಳಿಂದ ಪ್ರಭಾವಿತವಾಗಿದೆ" ಎಂದು ತಿಳಿಸಿದ್ದಾರೆ.

Congress leader Jaiveer Shergill resigns from the post of National Spokesman

"ನಿರ್ಣಯ ಮಾಡುವುದು ಇನ್ನು ಮುಂದೆ ಸಾರ್ವಜನಿಕ ಮತ್ತು ದೇಶದ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವುಂಟಾಗುತ್ತದೆ, ಬದಲಿಗೆ ಇದು ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿರುತ್ತದೆ. ನಿರ್ಧಾರಗಳು ದೇಶದ ವಾಸ್ತವತೆಯನ್ನು ನಿರ್ಲಕ್ಷಿಸುತ್ತದೆ" ಎಂದು ಶೆರ್ಗಿಲ್ ಪತ್ರದಲ್ಲಿ ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಜೈವೀರ್ ಶೆರ್ಗಿಲ್‌ಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ. ಕಳೆದ ಎಂಟು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರನೇ ಪ್ರಮುಖ ನಾಯಕರು ಇವರು.

ಇತ್ತಿಚೆಗೆ "ಜಿ-23" ಎಂದು ಕರೆಯಲ್ಪಡುವ ಭಿನ್ನಮತೀಯರ ಗುಂಪಿನ ಇನ್ನೊಬ್ಬ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಹಿಮಾಚಲ ವಿಧಾನಸಭಾ ಚುನಾವಣೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ರಾಜೀನಾಮೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+