ಕಾಂಗ್ರೆಸ್ ನಾಯಕ ಮಣಿಶಂಕರ್ ಪುತ್ರಿಗೆ ಸಂಬಂಧಿಸಿದ ಎನ್‌ಜಿಒದ ಎಫ್‌ಸಿಆರ್‌ಎ ಪರವಾನಗಿ ಅಮಾನತು!
ಸಿಪಿಆರ್‌ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಪರವಾನಗಿಯನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ.
ನವದೆಹಲಿ ಮಾರ್ಚ್ 1: ದೆಹಲಿಯ ಥಿಂಕ್-ಟ್ಯಾಂಕ್ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ. ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಪುತ್ರಿ ಯಾಮಿನಿ ಅಯ್ಯರ್ ದೆಹಲಿ ಮೂಲದ ಥಿಂಕ್ ಟ್ಯಾಂಕ್‌ನ ಅಧ್ಯಕ್ಷೆ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ.
ಎಫ್‌ಸಿಆರ್‌ಎ ನಿಯಮಗಳನ್ನು ಥಿಂಕ್-ಟ್ಯಾಂಕ್ ಉಲ್ಲಂಘಿಸಿರುವುದು ಕಂಡುಬಂದಿದ್ದರಿಂದ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆದಾಯ ತೆರಿಗೆ ಇಲಾಖೆಯು ಸಿಪಿಆರ್ ಕಚೇರಿ ಆವರಣದಲ್ಲಿ ಹಣಕಾಸು ಅಕ್ರಮಗಳ ಕುರಿತು ಸಮೀಕ್ಷೆ ನಡೆಸಿತ್ತು. ದೆಹಲಿಯಲ್ಲಿರುವ ಆಕ್ಸ್‌ಫ್ಯಾಮ್ ಇಂಡಿಯಾ ಕಚೇರಿಯ ಮೇಲೂ ದಾಳಿ ನಡೆಸಲಾಗಿತ್ತು.
ಸಿಪಿಆರ್ ಫೋರ್ಡ್ ಫೌಂಡೇಶನ್ ಸೇರಿದಂತೆ ಹಲವಾರು ವಿದೇಶಿ ಸಂಸ್ಥೆಗಳಿಂದ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದೆ. ಇದು ತೀಸ್ತಾ ಸೆಟಲ್ವಾಡ್ ಅವರ ಎನ್‌ಜಿಒಗೆ ದೇಣಿಗೆ ನೀಡಿದೆ ಎಂಬ ಆರೋಪವೂ ಕೇಳಿಬಂದಿತ್ತು. ಆದಾಗ್ಯೂ ಗೃಹ ಸಚಿವರು 2016 ರಲ್ಲಿಯೇ ತೀಸ್ತಾ ಅವರ ಎನ್‌ಜಿಒ ಸಬ್ರಂಗ್ ಟ್ರಸ್ಟ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ಅಮಾನತುಗೊಳಿಸಿದ್ದಾರೆ.

CRP ಕೊನೆಯದಾಗಿ 2016 ರಲ್ಲಿ FCRA ಪರವಾನಗಿಯನ್ನು ನವೀಕರಿಸಿತ್ತು ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರವಾನಗಿಯನ್ನು ನವೀಕರಿಸಲು ಸರ್ಕಾರವು ವಿಸ್ತರಣೆಯನ್ನು ನೀಡಿತ್ತು.












Click it and Unblock the Notifications