ಲೋಕಸಭಾ ಚುನಾವಣೆ ಮುನ್ನ ಹೊಸ 5 ಐದು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ : ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ, ಮಾರ್ಚ್ 13: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಗ್ಯಾರಂಟಿ ಅಸ್ತ್ರಗಳನ್ನ ಪ್ರಯೋಗಿಸಿದೆ. ದೇಶಕ್ಕೆ ಅನ್ವಯ ಆಗುವ ರೀತಿಯಲ್ಲಿ ಮಹಿಳೆಯರಿಗೆ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿ ಈ ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ.
ಹೌದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ಧುಲೆಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸಮ್ಮೇಳನದಲ್ಲಿ ಮಾತನಾಡಿದ , 'ನಾರಿ ನ್ಯಾಯ' ಗ್ಯಾರಂಟಿ ಅಡಿ ಮಹಿಳೆಯರಿಗಾಗಿಯೇ 5 ಗ್ಯಾರಂಟಿಗಳನ್ನ ರೂಪಿಸಲಾಗಿದೆ ಎಂದು ಆ ಗ್ಯಾರಂಟಿ ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದರೆ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 1 ಲಕ್ಷ ರೂ. ಹಣ ಜಮೆ, ಮಹಿಳೆಯರಿಗೆ ಶೇ. 50 ರಷ್ಟು ಸರ್ಕಾರಿ ಉದ್ಯೊಗ ಮೀಸಲು ಸೇರಿದಂತೆ ಹಲವು ಭರವಸೆಗಳನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದರು.
#WATCH | Delhi | Congress national president Mallikarjun Kharge says, "Congress is announcing 'Nari Nyay Guarantee' today. Under this, the party is going to set a new agenda for women in the country. Under 'Nari Nyay Guarantee', Congress is making 5 announcements. First,… pic.twitter.com/vXFHqJINue
— ANI (@ANI) March 13, 2024
ಪಂಚ ಗ್ಯಾರಂಟಿಗಳನ್ನ ಘೋಷಿಸಿದ ಕಾಂಗ್ರೆಸ್
1.ಮಹಾಲಕ್ಷ್ಮಿ ಗ್ಯಾರಂಟಿ: ದೇಶಾದ್ಯಂತ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ ರೂ. ಹಣಕಾಸಿನ ನೆರವು. ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ
2. ಅರ್ಧ ಜನಸಂಖ್ಯೆ, ಪೂರ್ಣ ಹಕ್ಕು: ಈ ಯೋಜನೆಯಡಿ ದೇಶಾದ್ಯಂತ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ
3 . ಶಕ್ತಿ ಕಾ ಸಮ್ಮಾನ್: ಕಾಂಗ್ರೆಸ್ ಪಕ್ಷದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಈ ಯೋಜನೆ ಅಡಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಮಧ್ಯಾಹ್ನದ ಬಿಸಿಯೂಟ ತಯಾರಿಕಾ ಸಿಬ್ಬಂದಿಯ ಪ್ರತಿ ತಿಂಗಳ ಗೌರವಧನವನ್ನು ದ್ವಿಗುಣ ಮಾಡೋದಾಗಿ ಭರವಸೆ ನೀಡಲಾಗಿದೆ.
4 .ಅಧಿಕಾರ ಮೈತ್ರಿ: ದೇಶದ ಪ್ರತಿಯೊಂದು ಪಂಚಾಯ್ತಿ ಮಟ್ಟದಲ್ಲಿ ಕಾನೂನು ಸಹಾಯಕರನ್ನು ನೇಮಕ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ. ಅಧಿಕಾರಿ ಮೈತ್ರಿಯ ರೂಪದಲ್ಲಿ ಈ ಸಹಾಯಕರು ಕಾರ್ಯ ನಿರ್ವಹಿಸಲಿದ್ದು, ಮಹಿಳೆಯರಿಗೆ ತಮ್ಮ ಹಕ್ಕು ಹಾಗೂ ಅಧಿಕಾರಿಗಳನ್ನು ಅರಿಯಲು ಕಾನೂನು ನೆರವು ನೀಡಲಿದ್ದಾರೆ.
5. ಸಾವಿತ್ರಿಬಾಯಿ ಫುಲೆ ಹಾಸ್ಟೆಲ್: ಭಾರತ ದೇಶದ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಕನಿಷ್ಟ ಪಕ್ಷ ಒಂದಾದರು ಮಹಿಳಾ ಹಾಸ್ಟೆಲ್ ನಿರ್ಮಿಸುತ್ತೇವೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ. ನಂತರದ ದಿನಗಳಲ್ಲಿ ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣ ಮಾಡುವ ಭರವಸೆಯನ್ನೂ ನೀಡಿದೆ.
नारी शक्ति को मेरा प्रणाम!
— Rahul Gandhi (@RahulGandhi) March 13, 2024
कांग्रेस आपको 5 ऐसी गारंटियां दे रही है जिनसे देश में महिलाओं का जीवन हमेशा के लिए बदल जाएगा।
• महालक्ष्मी: सबसे गरीब परिवारों की एक महिला को हर वर्ष 1 लाख रुपए की गारंटी।
• आधी आबादी, पूरा हक़: केंद्र सरकार में सभी नई भर्तियों का आधा हिस्सा… pic.twitter.com/fmGDfxUFV0
ಇನ್ನೂ ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, "ನಾರಿ ನ್ಯಾಯ" ಗ್ಯಾರಂಟಿ ಘೋಷಿಸಿದೆ, ಅದರ ಅಡಿಯಲ್ಲಿ ದೇಶದ ಮಹಿಳೆಯರಿಗೆ ಹೊಸ ಕಾರ್ಯಸೂಚಿಯನ್ನು ಹೊಂದಿಸಲು ಹೊರಟಿದೆ. ಕಾಂಗ್ರೆಸ್ ಪಕ್ಷವು ಸಹಭಾಗಿತ್ವದ ನ್ಯಾಯ, ರೈತ ನ್ಯಾಯ ಮತ್ತು ಯುವ ನ್ಯಾಯದ ಭರವಸೆಗಳನ್ನು ಘೋಷಿಸಿದೆ ಎಂದು ಖರ್ಗೆ ಹೇಳಿದರು. ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದವನ್ನು ನೀಡುತ್ತಿರಿ ಮತ್ತು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಈ ಹೋರಾಟದಲ್ಲಿ ನಮ್ಮ ಕೈಗಳನ್ನು ಬಲಪಡಿಸಿ ಎಂದು ಖರ್ಗೆ ಹೇಳಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications