ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾರಾಗ್ತಾರೆ ಕಾಂಗ್ರೆಸ್ ಅಧ್ಯಕ್ಷರು: ರಾಹುಲ್ ಗಾಂಧಿ ಹೊರತೂ ಯಾರಿಲ್ಲವೇ?

|
Google Oneindia Kannada News

ನವದೆಹಲಿ, ಆಗಸ್ಟ್ 29: ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಯಾರು ಅರ್ಹರು ಎನ್ನುವ ಪಟ್ಟಿಯಲ್ಲಿ ರಾಹುಲ್ ಗಾಂಧಿ ಹೆಸರು ಇಂದಿಗೂ ಅಗ್ರಸ್ಥಾನದಲ್ಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ನವದೆಹಲಿಯಲ್ಲಿ ಭಾನುವಾರ ಎಐಸಿಸಿ ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ದಿನಾಂಕ ಪ್ರಕಟಿಸಿರುವ ಬೆನ್ನಲ್ಲೇ ಸಲ್ಮಾನ್ ಖುರ್ಷಿದ್ ಈ ಹೇಳಿಕೆ ನೀಡಿದ್ದಾರೆ. ವಿದೇಶದಿಂದ ವಾಪಸ್ ಆಗಿರುವ ರಾಹುಲ್ ಗಾಂಧಿಯವರ ಮೇಲೆ ಒತ್ತಡ ಹೆಚ್ಚಾಗಿದೆ. ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವಂತೆ ಒತ್ತಾಯ ಹೆಚ್ಚುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಯಾರಿಗೆ ಒಲಿಯುತ್ತೆ ಕೈ ನಾಯಕತ್ವ?ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಯಾರಿಗೆ ಒಲಿಯುತ್ತೆ ಕೈ ನಾಯಕತ್ವ?

ಎಲ್ಲಾ ರೀತಿಯ ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಅಕ್ಟೋಬರ್ 17ರಂದು ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದು, ಎರಡು ದಿನಗಳಲ್ಲಿ ಈ ಚುನಾವಣಾ ಫಲಿತಾಂಶ ಹೊರಬೀಳಲಿದೆ ಎಂದು ಹೇಳಲಾಗಿದೆ. ಇದರ ಮಧ್ಯೆ ಚುನಾವಣಾ ರೇಸ್ ನಲ್ಲಿ ರಾಹುಲ್ ಗಾಂಧಿ ಹೆಸರು ಹೇಗೆ ಓಡಾಡುತ್ತಿದೆ ಎಂಬುದನ್ನು ವರದಿಯಲ್ಲಿ ತಿಳಿದುಕೊಳ್ಳೋಣ.

ಮೊದಲ ಸ್ಥಾನದಲ್ಲಿ ರಾಹುಲ್ ಗಾಂಧಿ ಹೆಸರು

ಮೊದಲ ಸ್ಥಾನದಲ್ಲಿ ರಾಹುಲ್ ಗಾಂಧಿ ಹೆಸರು

"ನಾನು ಮಾತನಾಡಿಸಿದ ಪ್ರತಿಯೊಬ್ಬರ ಅಭಿಪ್ರಾಯ ಒಂದೇ ಆಗಿದೆ. ರಾಹುಲ್ ಗಾಂಧಿಯೇ ನಂಬರ್ ಒನ್ ಆಯ್ಕೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. "ನಾವು ಅದರಾಚೆಗೆ ಯಾವುದೇ ಮಾತುಕತೆಗೆ ಇಳಿದಿಲ್ಲ. ಅವರು ನಮ್ಮ ವಿನಂತಿಯನ್ನು ಸ್ವೀಕರಿಸುತ್ತಾರೆಯೇ ಇಲ್ಲವೇ ಎಂಬುದರ ಕುರಿತು ನಮಗೆ ಯಾವುದೇ ಸೂಚನೆಗಳು ಸಿಕ್ಕಿಲ್ಲ. ಅದರ ಬಗ್ಗೆ ನಿರ್ಧರಿಸುವುದಕ್ಕೂ ಸಾಧ್ಯವಾಗಿಲ್ಲ, ಏಕೆಂದರೆ ಅದು ಕೇವಲ ವೇಳಾಪಟ್ಟಿಯಾಗಿದೆ," ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಖಾಯಂ ಆಹ್ವಾನಿತ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗುವ ಅಧಿಕಾರ ಯಾರಿಗೂ ಇಲ್ಲವೇ?

ಕಾಂಗ್ರೆಸ್ ಅಧ್ಯಕ್ಷರಾಗುವ ಅಧಿಕಾರ ಯಾರಿಗೂ ಇಲ್ಲವೇ?

ಪ್ಯಾನ್ ಇಂಡಿಯಾ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿಯ ಹೊರತಾಗಿ ಮತ್ತೊಬ್ಬ ನಾಯಕರು ಇಲ್ಲ. ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ವ್ಯಕಪಡಿಸಿರುವ ಅಭಿಪ್ರಾಯವನ್ನೇ ಪಕ್ಷದ ಬಹುತೇಕ ನಾಯಕರು ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರ ಭಾವನೆಗಳು ಒಂದೇ ರೀತಿಯಾಗಿದ್ದು, ರಾಹುಲ್ ಗಾಂಧಿಗೆ ಪಟ್ಟ ಕಟ್ಟಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಶೇ.100ರಷ್ಟು ರಾಹುಲ್ ಗಾಂಧಿಯೇ ಚುಕ್ಕಾಣಿ ಹಿಡಿಯುವುದು ಪಕ್ಕಾ ಎಂಬ ಅಭಿಪ್ರಾಯವನ್ನು ಸಲ್ಮಾನ್ ಖುರ್ಷಿದ್ ಮಂಡಿಸಿದ್ದಾರೆ.

ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿರುವ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಅವರ ಪಕ್ಕದಲ್ಲಿ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕಾಣಿಸಿಕೊಂಡಿದ್ದರು.

ಕಾಂಗ್ರೆಸ್ ಆಂತರಿಕ ಮೂಲಗಳು ಹೇಳುವುದೇನು?

ಕಾಂಗ್ರೆಸ್ ಆಂತರಿಕ ಮೂಲಗಳು ಹೇಳುವುದೇನು?

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿಯನ್ನು ಪಕ್ಷದ ಮುಖ್ಯಸ್ಥರಾಗಿ ಅಧಿಕಾರಕ್ಕೆ ಮರಳುವಂತೆ ಸಾರ್ವಜನಿಕವಾಗಿ ಉತ್ತೇಜಿಸುತ್ತಿದ್ದಾರೆ. ಆದರೆ, ಈ ವಿಚಾರದಲ್ಲಿ ಅನಿಶ್ಚಿತತೆ ಮತ್ತು ಗೌಪ್ಯತೆ ಮುಂದುವರಿದಿದೆ. ರಾಹುಲ್ ಗಾಂಧಿಯು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವುದಿಲ್ಲ ಎಂಬ ತಮ್ಮ ನಿಲುವನ್ನು ಮುಂದುವರಿಸುತ್ತಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳೇ ಹೇಳುತ್ತಿವೆ.

ಬುಧವಾರ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಬಗ್ಗೆ ವರದಿಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ ಮತ್ತು ಪಕ್ಷದ ಆಡಳಿತವನ್ನು ಮತ್ತೆ ವಹಿಸಿಕೊಳ್ಳಲು ರಾಹುಲ್ ಗಾಂಧಿಯನ್ನು ಮನವೊಲಿಸಲು ಕೊನೆಯ ಕ್ಷಣದವರೆಗೂ ಪ್ರಯತ್ನಿಸಲಾಗುವುದು ಎಂದು ಹೇಳಿದರು.

2019ರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

2019ರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಸತತ ಎರಡನೇ ಬಾರಿ ಸೋಲು ಕಂಡ ನಂತರದಲ್ಲಿ ಅದರ ಹೊಣೆ ಹೊತ್ತುಕೊಂಡು ರಾಹುಲ್ ಗಾಂಧಿಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತದನಂತರದಲ್ಲಿ ಹಂಗಾಮಿ ಅಧ್ಯಕ್ಷರಾಗಿ ಪಕ್ಷದ ಆಡಳಿತವನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದರು. ಇದರ ಮಧ್ಯೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಜಿ-23 ನಾಯಕರು ಬಂಡಾಯದ ಬಾವುಟ ಹಾರಿಸಿದ್ದರು. ಇದರಿಂದ ಒಂದು ಹಂತದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ವತಃ ಸೋನಿಯಾ ಗಾಂಧಿಯವರೇ ಮುಂದಾಗಿದ್ದರೂ, ಅವರನ್ನು ಮುಂದುವರಿಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು.

English summary
Congress Leader Rahul Gandhi name is remains No 1 position to take Party Chief, says Salman Khurshid
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X