ಆಸ್ಪತ್ರೆಯಿಂದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಡಿಸ್ಜಾರ್ಜ್
ನವದೆಹಲಿ, ಜನವರಿ 11: ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಕೆಯ ಸ್ಥಿತಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ.ಅಜಯ್ ಸ್ವರೂಪ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜನವರಿ 10ರಂದು ಮಧ್ಯಾಹ್ನ 3 ಗಂಟೆಗೆ ಸ್ಥಿರ ಮತ್ತು ತೃಪ್ತಿಕರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದರು.
ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರನ್ನು ಜನವರಿ 4 ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಡಿಸೆಂಬರ್ 24ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ರಾಷ್ಟ್ರ ರಾಜಧಾನಿಯನ್ನು ತಲುಪುತ್ತಿದ್ದಂತೆ ಟ್ವಿಟರ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಅವರು ತಮ್ಮ ತಾಯಿ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಪಡೆದ ಪ್ರೀತಿಯನ್ನು ದೇಶದೊಂದಿಗೆ ಹಂಚಿಕೊಂಡಿರುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಬೃಹತ್ ಪ್ರಚಾರ ಅಭಿಯಾನವಾದ ಭಾರತ್ ಜೋಡೋ ಯಾತ್ರೆ ಶನಿವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಿತ್ತು. ಸೋನಿಯಾ ಗಾಂಧಿ ರಾಷ್ಟ್ರ ರಾಜಧಾನಿಯಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಸೋನಿಯಾ ಅವರು ಆಸ್ಪತ್ರೆಗೆ ದಾಖಲದಾಗ ಉತ್ತರ ಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ತಮ್ಮ ಸಹೋದರ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ'ಗೆ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ಹಾಜರಾಗಿರಲಿಲ್ಲ.












Click it and Unblock the Notifications