ವಿಮಾನ ದುರಂತದ ಸ್ಥಳಕ್ಕೆ ಕೈ ನಾಯಕರು ಭೇಟಿ: ಹೇಳಿದ್ದೇನು?
ಅಹಮದಾಬಾದ್, ಜೂನ್ 14: ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಮತ್ತಿತರರು ಶನಿವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ವಿಮಾನ ಪತನಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ವಿಮಾನ ದುರಂತದಲ್ಲಿ ಗಾಯಗೊಂಡಿರುವವರ ಪೈಕಿ ಕೆಲವರನ್ನು ಭೇಟಿ ಮಾಡಿದೆವು. ಉಳಿದವರು ತೀರಾ ಸುಟ್ಟ ಪರಿಸ್ಥಿತಿಯಲ್ಲಿರುವ ಕಾರಣ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಅವರನ್ನು ಭೇಟಿ ಮಾಡುವುದು ಬೇಡ ಎಂಬ ಸಲಹೆಯಿಂದಾಗಿ ಭೇಟಿ ಮಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಗಾಯಾಳುಗಳ ಜತೆ ಮಾತನಾಡಿ ಆರೋಗ್ಯ ವಿಚಾರಿಸಿದರು ಎಂದು ಮಾಹಿತಿ ನೀಡಿದರು. ಗಾಯಾಳುಗಳ ಪರಿಸ್ಥಿತಿ ಹೇಗಿದೆ ಎಂದು ಕೇಳಿದಾಗ, "ನಾವು ಭೇಟಿ ಮಾಡಿದ ಕೆಲವರು ಚೇತರಿಕೆ ಹಂತದಲ್ಲಿದ್ದಾರೆ. ಸುಟ್ಟ ಗಾಯಾಳುಗಳ ಪೈಕಿ ಸುಮಾರು 35- 40 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪರಿಸ್ಥಿತಿ ವಿವರಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ರಥ
ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ಎಲ್ಲಾ ರಂಗದಲ್ಲಿಯೂ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ, ಅಭಿವೃದ್ಧಿಯ ರಥ ಎಳೆಯುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಆದರೆ ಮತದಾರರೇ ಈಶ್ವರ. ಹೀಗಾಗಿ ನಿಮಗೆ ಅಭಿನಂದನೆ ಹೇಳಲು ನಾವು ಇಲ್ಲಿಗೆ ಬಂದಿದ್ದೇವೆ. ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವಕ್ಕೆ, ಸಿದ್ದರಾಮಯ್ಯ ಅವರ ಆಡಳಿತಕ್ಕೆ ಮೆಚ್ಚಿ ಈ ಭಾಗದಲ್ಲಿ ಆರು ಸಂಸದರನ್ನು ಆಯ್ಕೆ ಮಾಡಿ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೀರಿ ಎಂದು ತಿಳಿಸಿದರು.
ದೇವರು ನಮಗೆ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ನಿಮ್ಮ ಬೆಂಬಲದಿಂದ 140 ಶಾಸಕರ ಸಂಖ್ಯಾಬಲದಲ್ಲಿ ನಮ್ಮ ಸರ್ಕಾರ ರಚನೆಯಾಗಿದೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಅನುಮೋದನೆ ನೀಡಿದ್ದೆವು. ನಿಮ್ಮ ಈ ಭಾಗದ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವರಾದ ದರ್ಶನಾಪುರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ರಾಧಕೃಷ್ಣ, ಬಿ.ವಿ.ನಾಯಕ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಸೇರಿ ಕಲ್ಯಾಣ ಪಥವನ್ನು ಅಭಿವೃದ್ಧಿಯ ಪಥವನ್ನಾಗಿ ಮಾಡಿದ್ದಾರೆ. ಇಲ್ಲಿ ಸೇರಿರುವ ಜನಸಮೂಹವೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನಿಸಲಾಗಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಗ್ರಾಮೀಣಾಭಿವೃದ್ಧಿ, ಉದ್ಯೋಗ ಸೇರಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಇಂದು ಆರೋಗ್ಯ ಕ್ಷೇತ್ರದಲ್ಲಿ ರೂ.416 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ನಂತರ ಹೈದರಾಬಾದ್ ಕರ್ನಾಟಕ ಎರಡನೇ ಸ್ಥಾನವನ್ನು ಅಲಂಕರಿಸುವಂತೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಕಾರ್ಮಿಕ ಸಚಿವರಾಗಿದ್ದಾಗ ಈ ಭಾಗದ ಜನರ ಆರೋಗ್ಯ ಸುಧಾರಣೆಗೆ ಅತಿ ದೊಡ್ಡ ಇಎಸ್ ಐ ಆಸ್ಪತ್ರೆ ನಿರ್ಮಿಸಿ ಹೊಸ ಇತಿಹಾಸ ಬರೆದಿದ್ದಾರೆ ಎಂದರು.
ನಮ್ಮ ಜಿಲ್ಲೆಗಳಿಗಿಂತ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸುತ್ತಿವೆ. ಯುಪಿಎ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಂದಾಗಿ ಈ ಭಾಗಕ್ಕೆ 371ಜೆ ಮೂಲಕ ವಿಶೇಷ ಸ್ಥಾನಮಾನ ನೀಡಲಾಗಿದೆ. ಇದನ್ನು ಪಡೆದ ನೀವೆ ಪುಣ್ಯವಂತರು. ಕಾಂಗ್ರೆಸ್ ಪಕ್ಷದ ಈ ಕೊಡುಗೆಯನ್ನು ನೀವು ನಿಮ್ಮ ಮುಂದಿನ ಪೀಳಿಗೆಗಳು ಸ್ಮರಿಸಬೇಕು ಎಂದು ಹೇಳಿದರು.












Click it and Unblock the Notifications