Poll of Exit Polls: ಕಾಂಗ್ರೆಸ್ ತೆಕ್ಕೆಗೆ ಹರಿಯಾಣ! ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ; ಬಿಜೆಪಿಗೆ ಆಘಾತ

ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಇಂದು ಹೊರಬಿದ್ದಿದ್ದು ಬಿಜೆಪಿಗೆ ಭಾರಿ ಆಘಾತ ನೀಡಿವೆ. ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದ್ದ ಬಿಜೆಪಿಗೆ ಮತದಾರ ಶಾಕ್ ಕೊಟ್ಟಿದ್ದು, ಕಾಂಗ್ರೆಸ್‌ ಅಧಿಕಾರ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ ಬಹುಮತವನ್ನು ಕೂದಲೆಳೆಯಲ್ಲಿ ಕಳೆದುಕೊಳ್ಳುವ ಸಾಧ್ಯತೆ ಇದೆ.

ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ಮುಕ್ತಾಯವಾಗಿದೆ. ಸತತ ಎರಡು ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಈ ಬಾರಿ ವಿಪಕ್ಷ ಸ್ಥಾನದಲ್ಲಿ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.

Congress Likely to Govern Haryana May Miss Majority In Jammu and Kashmir

ಪೋಲ್‌ ಆಫ್ ಎಕ್ಸಿಟ್ ಪೋಲ್ಸ್ ಪ್ರಕಾರ ಹರಿಯಾಣದಲ್ಲಿ ಈ ಬಾರಿ ಕಾಂಗ್ರೆಸ್ 55 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸುವ ಸಾಧ್ಯತೆ ಇದೆ. ಜೆಜೆಪಿ 1 ಸ್ಥಾನದಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, ಐಎನ್‌ಎಲ್‌ಡಿ 3 ಸ್ಥಾನಗಳಲ್ಲಿ ಗೆಲುಸು ಸಾಧಿಸಬಹುದು ಎಂದು ಸಮೀಕ್ಷೆ ಹೇಳಿದೆ. 6 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ. 90 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಹರಿಯಾಣದಲ್ಲಿ ಸರ್ಕಾರ ರಚನೆಗೆ 45 ಸ್ಥಾನಗಳನ್ನು ಗೆಲ್ಲಬೇಕಿದೆ.

ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿಗೆ ಆಘಾತ

ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಹೊರಬಂದಿರುವ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಬಹುತೇಕ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸೂಚನೆ ಕೊಟ್ಟಿವೆ. ದೈನಿಕ್ ಭಾಸ್ಕರ್, ಧ್ರುವ್ ರೀಸರ್ಚ್, ಪಿ ಮಾರ್ಕ್, ಪೀಪಲ್ಸ್ ಪಲ್ಸ್, ರಿಪ್ರಬ್ಲಿಕ್ ಭಾರತ್ - ಮ್ಯಾಟ್ರಿಜ್ ಚುನಾವಣೋತ್ತರ ಫಲಿತಾಂಶಗಳೆಲ್ಲವೂ ಬಿಜೆಪಿಗೆ ವಿರುದ್ಧವಾಗಿ ಬಂದಿವೆ.

ಜಮ್ಮು ಮತ್ತು ಕಾಶ್ಮೀರದ ಕತೆ ಏನು?

ಜಮ್ಮು ಮತ್ತು ಕಾಶ್ಮೀರದಲ್ಲಿ ಕೂಡ ಕಾಂಗ್ರಸ್‌-ಎನ್‌ಸಿ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಹೇಳಿದ್ದರೂ, ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಿವೆ. ಡಿಲಿಮಿಟೇಶನ್ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 90 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಚುನಾವಣೆ ನಡೆದಿದ್ದು, ಕಾಂಗ್ರೆಸ್ - ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು 43 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಆದರೆ ಬಹುಮತಕ್ಕೆ 46 ಸ್ಥಾನಗಳಲ್ಲಿ ಗೆಲ್ಲಬೇಕಿತ್ತು, 3 ಸ್ಥಾನಗಳು ಕಡಿಮೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 8ರಂದು ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಮತ ಎಣಿಕೆ ನಡೆಯಲಿದ್ದು, ಜನಾದೇಶ ಏನಿದೆ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+