• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌: ಕಾಂಗ್ರೆಸ್ ಗೆದ್ದರೆ ಮೋದಿ ಸ್ಟೇಡಿಯಂ ಹೆಸರು ಬದಲು

|
Google Oneindia Kannada News

ಗಾಂಧಿನಗರ, ನವೆಂಬರ್ 12: ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಪ್ರಕಟಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಟೇಡಿಯಂ ಹೆಸರು ಮರುನಾಮಕರಣದ ಬಗ್ಗೆ ಭರವಸೆಯೊಂದನ್ನು ನೀಡಿದೆ.

ಕಾಂಗ್ರೆಸ್ ಪಕ್ಷವು ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣವನ್ನು ಸರ್ದಾರ್ ಪಟೇಲ್ ಕ್ರೀಡಾಂಗಣ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷವು ಸರ್ಕಾರ ರಚಿಸಿದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯನ್ನು ಅಧಿಕೃತ ದಾಖಲೆಯಾಗಿ ಕಾಂಗ್ರೆಸ್ ಸ್ವೀಕರಿಸುತ್ತದೆ ಎಂದು ಹೇಳಿದರು.

2017ರ ಗುಜರಾತ್ ಚುನಾವಣೆ ಸಮೀಕ್ಷೆ: ಯಾವ ಪಕ್ಷಕ್ಕೆ ಸಿಕ್ಕಿದೆ ಬಲ?2017ರ ಗುಜರಾತ್ ಚುನಾವಣೆ ಸಮೀಕ್ಷೆ: ಯಾವ ಪಕ್ಷಕ್ಕೆ ಸಿಕ್ಕಿದೆ ಬಲ?

ಅತಿರೇಕದ ಭ್ರಷ್ಟಾಚಾರಕ್ಕೆ ಗುಜರಾತ್‌ನ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವನ್ನು ಹೊಣೆಗಾರರನ್ನಾಗಿಸಿರುವ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕಳೆದ 27 ವರ್ಷಗಳ ಭ್ರಷ್ಟಾಚಾರದ ಎಲ್ಲಾ ದೂರುಗಳ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು. ಈ ಹಂತದಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

10 ಲಕ್ಷದಲ್ಲಿ ಶೇ.50ರಷ್ಟು ಮಹಿಳೆಯರಿಗೆ ಸರ್ಕಾರಿ ಉದ್ಯೋಗ

10 ಲಕ್ಷದಲ್ಲಿ ಶೇ.50ರಷ್ಟು ಮಹಿಳೆಯರಿಗೆ ಸರ್ಕಾರಿ ಉದ್ಯೋಗ

ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಯಲ್ಲಿ ಹೊಸ ಕ್ರಾಂತಿಯನ್ನು ಮಾಡುವುದಾಗಿ ಹೇಳಿದೆ. ರಾಜ್ಯದಲ್ಲಿರುವ ಎಲ್ಲಾ ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡುತ್ತಿರುವ ಕಾಂಗ್ರೆಸ್, ಅದೇ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿಯನ್ನು ಖಚಿತಪಡಿಸಿದೆ.

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣದ ಸೌಲಭ್ಯ

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣದ ಸೌಲಭ್ಯ

ಗುಜರಾತ್‌ನಲ್ಲಿ ಸರ್ಕಾರದಿಂದ 3,000 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು. ಇದರ ಜೊತೆಗೆೆ ರಾಜ್ಯದ ಹೆಣ್ಣುಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಇದರ ಜೊತೆಗೆ ರಾಜ್ಯದ ಪ್ರತಿಯೊಬ್ಬ ವಿಧವೆ ಮತ್ತು ವೃದ್ಧ ಮಹಿಳೆಗೆ ಮಾಸಿಕ ₹ 2,000 ಸಹಾಯ ಧನವನ್ನು ನೀಡುವುದಾಗಿ ಘೋಷಿಸಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಇತರೆ ಭರವಸೆಗಳೇನು?

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಇತರೆ ಭರವಸೆಗಳೇನು?

* ಗುಜರಾತಿನಲ್ಲಿ 3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು

* 300 ಯೂನಿಟ್ ಉಚಿತ ವಿದ್ಯುತ್

* ಪ್ರತಿ ನಿರುದ್ಯೋಗಿ ಯುವಕರಿಗೆ 3,000 ಮಾಸಿಕ ಸಹಾಯ ಧನ

* 500 ರೂಪಾಯಿಗೆ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್‌ಗಳು ಲಭ್ಯ

* ಎಲ್ಲಾ ಗುಜರಾತಿಗಳಿಗೆ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ

* 5 ಲಕ್ಷದವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ

* 4 ಲಕ್ಷ ಕೋವಿಡ್ ಪರಿಹಾರವನ್ನು ನೀಡುವುದಾಗಿ ಭರವಸೆ

ಯಾವಾಗ ನಡೆಯುತ್ತೆ ಗುಜರಾತ್ ಚುನಾವಣೆ

ಯಾವಾಗ ನಡೆಯುತ್ತೆ ಗುಜರಾತ್ ಚುನಾವಣೆ

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ಅದೇ ರೀತಿ ಗುಜರಾತ್‌ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಇಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
Congress Manifesto for Gujarat Election: Why Party Promises To Rename Narendra Modi Stadium.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X