ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ನ. 14ರಿಂದ ಕಾಂಗ್ರೆಸ್ ಬೃಹತ್ ಹೋರಾಟ

|
Google Oneindia Kannada News

ನವದೆಹಲಿ, ಅಕ್ಟೋಬರ್ 24; ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಿದೆ. ನವೆಂಬರ್ 14 ರಿಂದ 29ರ ತನಕ ಈ ಹೋರಾಟ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ, "ಕಾಂಗ್ರೆಸ್ ನಾಯಕರು ತಮ್ಮ ಪ್ರದೇಶದಲ್ಲಿ ಪಾದಯಾತ್ರೆ ಮಾಡುವ ಮೂಲಕ ಹೋರಾಟವನ್ನು ನಡೆಸಲಿದ್ದಾರೆ" ಎಂದರು.

Infographics: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆInfographics: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

"ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟವನ್ನು ನಾವು ಮುಂದುವರೆಸುತ್ತೇವೆ. ನವೆಂಬರ್ 14 ರಿಂದ 29ರ ತನಕ ಈ ಹೋರಾಟ ನಡೆಯಲಿದೆ" ಎಂದು ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.

 ಕಷ್ಟದ ಕಾಲದಲ್ಲಿ ಬೆಂಕಿ ಪೊಟ್ಟಣದ ಬೆಲೆಯೂ ಏರಿಕೆ; 14 ವರ್ಷಗಳ ಬಳಿಕ ಹೊಸ ದರ ಜಾರಿ ಕಷ್ಟದ ಕಾಲದಲ್ಲಿ ಬೆಂಕಿ ಪೊಟ್ಟಣದ ಬೆಲೆಯೂ ಏರಿಕೆ; 14 ವರ್ಷಗಳ ಬಳಿಕ ಹೊಸ ದರ ಜಾರಿ

 Congress Massive Agitation Against Fuel Price Hike From November 14

"15 ದಿನಗಳ ಹೋರಾಟದಲ್ಲಿ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶಾದ್ಯಂತ ಹೋರಾಟ ನಡೆಯಲಿದ್ದು, ವಿವಿಧ ನಾಯಕರು ಬೇರೆ ಬೇರೆ ಪ್ರದೇಶದಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ" ಎಂದರು.

 ಬೆಲೆ ಏರಿಕೆ: 'ಶೇ. 95 ರಷ್ಟು ಭಾರತೀಯರಿಗೆ ಪೆಟ್ರೋಲ್‌ ಅಗತ್ಯವಿಲ್ಲ' ಎಂದ ಯುಪಿ ಸಚಿವ ಬೆಲೆ ಏರಿಕೆ: 'ಶೇ. 95 ರಷ್ಟು ಭಾರತೀಯರಿಗೆ ಪೆಟ್ರೋಲ್‌ ಅಗತ್ಯವಿಲ್ಲ' ಎಂದ ಯುಪಿ ಸಚಿವ

ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಆರ್‌ಬಿಐ ಸಲಹೆಯಂತೆ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ವಿವಿಧ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿ ಹೋಗಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆರ್‌ಬಿಐ ಹಣಕಾಸು ನೀತಿ (ಎಂಪಿಸಿ)ಯ ಮಿನಿಟ್ಸ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಪರೋಕ್ಷ ತೆರಿಗೆಯನ್ನು ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ.

ಈ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿರುವ ಅವರು ಮಾಪನಾಂಕ ನಿರ್ಣಯವನ್ನು ಮಾಡುವುದು ಅವಶ್ಯಕವಾಗಿದೆ. ಇದರಿಂದಾಗಿ ಆರ್ಥಿಕತೆಯ ಮೇಲಿನಿಂದ ಉಂಟಾಗುವ ಬೆಲೆ ಒತ್ತಡವನ್ನು ತೆಗೆಯಬಹುದು, ಈ ನಿಟ್ಟಿನಲ್ಲಿ ತೆರಿಗೆಯನ್ನು ಕ್ರಮೇಣ ಕಡಿಮೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಚ್ಚಾತೈಲ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿನ ಪರೋಕ್ಷ ತೆರಿಗೆಯಿಂದಾಗಿ ಸರಕು ಮತ್ತು ಸೇವೆಗಳ ಮೇಲೆ ಪ್ರಭಾವ ಬೀರಿದೆ. ಡಿಸೆಂಬರ್‌ನಲ್ಲಿ ಚಿಲ್ಲರೆ ಹಣ ದುಬ್ಬರ ದರ ಶೇ 5.5ಕ್ಕಿಂತ ಹೆಚ್ಚಾಗಿದೆ ಎಂದು ಹಣಕಾಸು ನೀತಿಯಲ್ಲಿ ಉಲ್ಲೇಖಿಸಿದ್ದಾರೆ.

ಜಿಎಸ್‌ಟಿ ವ್ಯಾಪ್ತಿಗೆ ಬರಲಿದೆಯೇ?; ಹಿಂದೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ಅದನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದ್ದರು.

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕುಳಿತು ಈ ಕುರಿತು ಚರ್ಚಿಸಬೇಕು ಎಂದು ಹೇಳಿದ್ದರು. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಮತ್ತೊಂದು ಕಡೆ ಪೆಟ್ರೋಲ್ ಮತ್ತು ಡಿಸೇಲ್ ಬೆಳೆಗಳ ಏರಿಕೆ ಜನರ ಮೇಲೆ ಪರಿಣಾಮ ಬೀರಿದ್ದು, ಅಗತ್ಯ ವಸ್ತುಗಳ ಬೆಲೆಗಳು ಸಹ ಏರಿಕೆಯಾಗಿವೆ.

2021ರ ಜನವರಿ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ. ಜನವರಿ 1 ರಂದು ಪೆಟ್ರೋಲ್ ಬೆಲೆ 83.71 ರೂ. ಇತ್ತು. ಡೀಸೆಲ್ ಬೆಲೆ 73.87 ರೂ. ಇತ್ತು. ಈ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಡೀಸೆಲ್ ಬೆಲೆ 96 ರಿಂದ 97 ರೂ. ಆಸುಪಾಸಿನಲ್ಲಿದೆ.

English summary
AICC general secretary K. C. Venugopal said that Congress will launch massive agitation against fuel price hike from Nov 14 to 29 across the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X